CoolCoder44 commited on
Commit
487717c
·
verified ·
1 Parent(s): 9bedfe9

e9ad951d9c087f1518f2870050a8416d70bca855842d12539017fdd78a6bcde7

Browse files
Files changed (50) hide show
  1. eesanje/url_46_20_12.txt +9 -0
  2. eesanje/url_46_20_2.txt +17 -0
  3. eesanje/url_46_20_3.txt +6 -0
  4. eesanje/url_46_20_4.txt +11 -0
  5. eesanje/url_46_20_5.txt +5 -0
  6. eesanje/url_46_20_6.txt +10 -0
  7. eesanje/url_46_20_7.txt +11 -0
  8. eesanje/url_46_20_8.txt +7 -0
  9. eesanje/url_46_20_9.txt +9 -0
  10. eesanje/url_46_210_1.txt +6 -0
  11. eesanje/url_46_210_10.txt +8 -0
  12. eesanje/url_46_210_11.txt +7 -0
  13. eesanje/url_46_210_12.txt +6 -0
  14. eesanje/url_46_210_2.txt +5 -0
  15. eesanje/url_46_210_3.txt +12 -0
  16. eesanje/url_46_210_4.txt +5 -0
  17. eesanje/url_46_210_5.txt +10 -0
  18. eesanje/url_46_210_6.txt +4 -0
  19. eesanje/url_46_210_7.txt +3 -0
  20. eesanje/url_46_210_8.txt +6 -0
  21. eesanje/url_46_210_9.txt +4 -0
  22. eesanje/url_46_211_1.txt +4 -0
  23. eesanje/url_46_211_10.txt +5 -0
  24. eesanje/url_46_211_11.txt +7 -0
  25. eesanje/url_46_211_12.txt +8 -0
  26. eesanje/url_46_211_2.txt +4 -0
  27. eesanje/url_46_211_3.txt +6 -0
  28. eesanje/url_46_211_4.txt +5 -0
  29. eesanje/url_46_211_5.txt +6 -0
  30. eesanje/url_46_211_6.txt +1 -0
  31. eesanje/url_46_211_7.txt +6 -0
  32. eesanje/url_46_211_8.txt +7 -0
  33. eesanje/url_46_211_9.txt +5 -0
  34. eesanje/url_46_212_1.txt +4 -0
  35. eesanje/url_46_212_10.txt +11 -0
  36. eesanje/url_46_212_11.txt +6 -0
  37. eesanje/url_46_212_12.txt +4 -0
  38. eesanje/url_46_212_2.txt +6 -0
  39. eesanje/url_46_212_3.txt +9 -0
  40. eesanje/url_46_212_4.txt +6 -0
  41. eesanje/url_46_212_5.txt +8 -0
  42. eesanje/url_46_212_6.txt +13 -0
  43. eesanje/url_46_212_7.txt +4 -0
  44. eesanje/url_46_212_8.txt +7 -0
  45. eesanje/url_46_212_9.txt +4 -0
  46. eesanje/url_46_213_1.txt +7 -0
  47. eesanje/url_46_213_10.txt +11 -0
  48. eesanje/url_46_213_11.txt +5 -0
  49. eesanje/url_46_213_12.txt +4 -0
  50. eesanje/url_46_213_2.txt +6 -0
eesanje/url_46_20_12.txt ADDED
@@ -0,0 +1,9 @@
 
 
 
 
 
 
 
 
 
 
1
+ ನಾಗಮಂಗಲದ ಗಲಭೆಗೆ ಸಿಎಂ, ಡಿಸಿಎಂ ಹೊಣೆ : ಸುನಿಲ್‌ ಕುಮಾರ್‌
2
+ , :
3
+ ಬೆಂಗಳೂರು,ಸೆ.12– ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟೋಲ್‌ ಬಾಂಬ್‌ ಸ್ಪೋಟಿಸಿ ತಲ್ವಾರ್‌ ಝಳಪಿಸಿದ್ದಾರೆ.
4
+ ನಾವು ನಾಗಮಂಗಲದಲ್ಲಿದ್ದೇವೆಯೋ? ಪಾಕಿಸ್ತಾನದಲ್ಲೋ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಸರ್ಕಾರವನ್ನು ಪ್ರಶ್ನೆಸಿದ್ದಾರೆ.
5
+ ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ.
6
+ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. ಇದರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಹೊರಬೇಕು ಎಂದು ಒತ್ತಾಯಿಸಿದ್ದಾರೆ.
7
+ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. 1/2@
8
+ ಮತ್ತೊಂದು ಟ್ವೀಟ್‌ ಮಾಡಿರುವ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ನಾಗಮಂಗಲ ಕೋಮುಗಲಭೆ; ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ.
9
+ ಪೆಟೋಲ್‌ ಬಾಂಬ್‌ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್‌ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ. ಕೊಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
eesanje/url_46_20_2.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ನಾಗಮಂಗಲ ಗಲಭೆ ಕಾಂಗ್ರೆಸ್ ಪ್ರಾಯೋಜಿತ : ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
2
+
3
+ ನಾಗಮಂಗಲ(ಮಂಡ್ಯ),ಸೆ.13– ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.
4
+ ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್ಗೆ ಕರತಲಾಮಲಕ.
5
+ ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು.
6
+ ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.
7
+ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು, ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು.
8
+ ಗಲಭೆಯ ಎಫ್ಐಆರ್ ಪ್ರತಿಯನ್ನು ಹಿಡಿದು ಮಾತನಾಡಿದ ಎಚ್ಡಿಕೆ, ಆರೋಪ ಪಟ್ಟಿ ಸಂಪೂರ್ಣ ಲೋಪದಿಂದ ಕೂಡಿದೆ. ಪೊಲೀಸರ ವರ್ತನೆ ಸಂಶಯಾಸ್ಪದವಾಗಿದೆ ಎಂದು ಹೇಳಿದರು. ಕೇವಲ 100-150 ಜನ ಇದ್ದ ಮೆರವಣಿಗೆಗೆ ಸ್ಥಳೀಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ಗಲಾಟೆ ಆರಂಭವಾಗುವುದಕ್ಕೆ ಕೇವಲ ಹತ್ತು ನಿಮಿಷಗಳ ಮೊದಲು ಮೀಸಲು ಪೊಲೀಸ್ ಪಡೆಯನ್ನು ಬೇರೆಡೆಗೆ ಕಳಿಸಲಾಗಿದೆ. ಅಲ್ಲದೆ ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಸ್ಥಳದಲ್ಲೇ ಇರಲಿಲ್ಲ ಎಂದು ಸ್ಥಳೀಯರೇ ಹೇಳಿದ್ದಾರೆ. ಹಾಗಾದರೆ ಈ ಇಬ್ಬರು ಅಧಿಕಾರಿಗಳು ಎಲಿದ್ದರು? ಮೀಸಲು ಪಡೆಯನ್ನು ಬೇರೆಡೆಗ��� ಕಳಿಸಿದ್ದು ಯಾಕೆ? ಎಂದು ಪ್ರಶ್ನಿಸಿದರು.
9
+ ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ಗಳು ಎಲ್ಲಿಂದ ಬಂದವು? ಎಂದು ಅನುಮಾನ ವ್ಯಕ್ತಪಡಿಸಿ, ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್ ಗಳು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ ಎಂದರು.
10
+ ಇಷ್ಟೊಂದು ದೊಡ್ಡ ಗಲಭೆ ಆಗಿದೆ. ಯೋಜಿತವಾಗಿ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೂ ಇವರೂ ಸಣ್ಣ, ಆಕಸಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರು ಎಂದು ಕರೆಯಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
11
+ ಕಾಂಗ್ರೆಸ್ ನಾಯಕರು ತಮ ನಡವಳಿಕೆಯನ್ನು ಸರಿ ಮಾಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡೂ ಸಮುದಾಯದ ಜನರು ಸೌಹಾರ್ದತೆಯಿಂದ ಜೀವನ ಮಾಡುತ್ತಿದ್ದಾರೆ. ರಾಜಕೀಯಕ್ಕಾಗಿ ಜನರ ಬದುಕು ಛಿದ್ರ ಮಾಡಬೇಡಿ. ಇದು ಸಣ್ಣ ವಿಷಯ. ಇದಕ್ಕೆ ಮಹತ್ವ ಕೊಡುವುದು ಬೇಡ ಎನ್ನುತ್ತಾರೆ ಗೃಹ ಸಚಿವರು. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತಾರೆ ಅವರು? ಮೆರವಣಿಗೆಗೆ ಅನುಮತಿ ಕೊಟ್ಟಿರುವುದೇ ನೀವು.
12
+ ಮೆರವಣಿಗೆಗೆ ಭದ್ರತೆ ಕೊಡಬೇಕಾದ ಹೊಣೆಯೂ ನಿಮದೇ. ಘಟನೆ ಸ್ಥಳದಲ್ಲಿ ಆಗ ಎಷ್ಟು ಜನ ಪೊಲೀಸರನ್ನು ನಿಯೋಜನೆ ಮಾಡಿದ್ದಿರಿ? ನಿಮ ಇನಸ್ಪೆಕ್ಟರ್ ಎಲ್ಲಿ ಇದ್ದರು. ಘಟನೆಗೂ ಮುನ್ನ ಇಲ್ಲಿದ್ದ ಮೀಸಲುಪಡೆ ವಾಹನವನ್ನು ವಾಪಸ್ ಕರೆಸಿಕೊಂಡಿದ್ದಾರೆ. ಘಟನೆ ನಡೆದ ಒಂದು ಗಂಟೆಗೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತದೆ. ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ? ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
13
+ ಅಧಿಕಾರಿ ಅಮಾನತು ಕಣ್ಣೊರೆಸುವ ತಂತ್ರ: ನಾನು ನಾಗಮಂಗಲಕ್ಕೆ ಬರುತ್ತೇನೆ ಎಂದು ಗುರುವಾರವೇ ಹೇಳಿದ್ದೆ. ಅಂದು ಸಂಜೆ ಬಿಜೆಪಿ ನಾಯಕರು ಸ್ಥಳಕ್ಕೆ ಬಂದಿದ್ದರು. ಅದಕ್ಕಾಗಿಯೇ ಇನ್ಸ್ಪೆಕ್ಟರ್ ಅಶೋಕ್ ರನ್ನು ಸಸ್ಪೆಂಡ್ ಮಾಡಿದ್ದಾರೆ. ಇದು ಕಣ್ಣೊರೆಸುವ ತಂತ್ರ ಎಂದರು.ಮಸೀದಿ ಬಳಿ 10 ನಿಮಿಷ ಡಾನ್‌್ಸ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡುತಿದ್ದರು? ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಇನಸ್ಪೆಕ್ಟರ್, ಡಿವೈಎಸ್ಪಿ ಯಾರೂ ಇರಲಿಲ್ಲ. ಆದರೆ ಎಫ್ಐಆರ್ನಲ್ಲಿ ಅವರು ಇದ್ದರು ಎಂದು ಬರೆಯಲಾಗಿದೆ. ಇದು ಯಾವ ಜಾದು? ಎಂದು ಪ್ರಶ್ನಿಸಿದರು.
14
+ ಆತ ತ್ರಿಕಾಲಜ್ಞಾನಿಯೇ?:ದೂರು ನೀಡಿರುವ ಅಧಿಕಾರಿ ರವಿಗೆ ರಾತ್ರಿ 1.30ರಲ್ಲಿ ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಹೆಸರುಗಳು ಹೇಗೆ ಗೊತ್ತು? ಪೆಟ್ಟು ತಿಂದು ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಅಷ್ಟು ಜ���ರ ಹೆಸರುಗಳು ನೆನಪಾಗಿದ್ದು ಹೇಗೆ? ಆತನಿಗೆ ಎಷ್ಟು ನೆನಪಿನ ಶಕ್ತಿ ಇದೆ! ಆತನೇನು ತ್ರಿಕಾಲಜ್ಞಾನಿಯೇ? ಎಂದು ಕೇಂದ್ರ ಸಚಿವರು ಅಚ್ಚರಿ ವ್ಯಕ್ತಪಡಿಸಿದರು.
15
+ ಪ್ರತಿಯೊಂದರಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇಲ್ಲಿ ಅಮಾಯಕ ಜನರ ಬದುಕು ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್ಐಆರ್ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ರಾಜ್ಯದಲ್ಲಿದೆ. ಆಗಿರುವ ಲೋಪ ಒಪ್ಪಿಕೊಳ್ಳುವುದು ಬಿಟ್ಟು ಸಮುದಾಯಗಳ ನಡುವೆ ಕಂದಕ ತೊಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.
16
+ ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗಲಭೆಯಲ್ಲಿ ಆಸ್ತಿಪಾಸ್ತಿ, ಜೀವನೋಪಾಯ ಕಳೆದುಕೊಂಡ ಅನೇಕರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಅವರು ಪರಿಹಾರವಾಗಿ ನೀಡಿದರು.ಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಅವರು ಹೇಳಿದರು.
17
+ ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿ ಅನೇಕ ಮುಖಂಡರು ಜತೆಯಲ್ಲಿ ಇದ್ದರು. ಇದಕ್ಕೂ ಮುನ್ನ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿ ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.
eesanje/url_46_20_3.txt ADDED
@@ -0,0 +1,6 @@
 
 
 
 
 
 
 
1
+ ನಾಗಮಂಗಲ ಗಲಭೆ : ಕೆರಳಿದ ಹಿಂದೂ ಸಂಘಟನೆಗಳಿಂದ ಗಣೇಶಮೂರ್ತಿ ಹಿಡಿದು ಪ್ರತಿಭಟನೆ
2
+
3
+ ಬೆಂಗಳೂರು, ಸೆ.13-ನಾಗಮಂಗಲದಲ್ಲಿ ಗಣೇಶ ಉತ್ಸವದ ಮೇಲೆ ನಡೆದ ದಾಳಿ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯಸರ್ಕಾರ ಎನ್ಐಎ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಇಂದು ಪುರಭವನದ ಬಳಿ ಗಣೇಶಮೂರ್ತಿ ಹಿಡಿದು ಪ್ರತಿಭಟನೆ ನಡೆಸಿವೆ.
4
+ ನಾಗಮಂಗಲ ಕಿಚ್ಚು ಈಗ ಬೆಂಗಳೂರಿಗೂ ವ್ಯಾಪಿಸಿದ್ದು, ಇಂದು ಗಣೇಶಮೂರ್ತಿಗಳನ್ನು ಹಿಡಿದು ನೂರಾರು ಮಂದಿ ಪುರಭವನದ ಬಳಿ ಜಮಾಯಿಸಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕೆಲವು ಕಿಡಿಗೇಡಿಗಳು ಯಾವುದೇ ಭಯವಿಲ್ಲದೆ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ನಾಗಮಂಗಲದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಆಸ್ತಿಪಾಸ್ತಿ ಹಾನಿಗೊಳಿಸಿದ್ದಾರೆ.
5
+ ಆದರೆ, ಇದನ್ನು ಗೃಹ ಸಚಿವರು ಸಣ್ಣ ಕಲ್ಲು ತೂರಾಟ ಎಂದು ಬಣ್ಣಿಸಿದ್ದಾರೆ. ಇದನ್ನು ನೋಡಿದರೆ ತುಷ್ಟೀಕರಣ ರಾಜಕಾರಣ ರಾಜ್ಯದಲ್ಲಿ ತಾಂಡವವಾಡುತ್ತಿದೆ ಎಂದು ದೂರಿದರು.ಗಣೇಶ ಮೂರ್ತಿಗಳನ್ನು ಹೊತ್ತು ಘೋಷಣೆ ಕೂಗಿದಾಗ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು. ಆದರೂ ಜಗ್ಗದೆ ರಸ್ತೆ ಮಧ್ಯೆಯೇ ಕುಳಿತು ನ್ಯಾಯ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ಈ ವೇಳೆ ಪೊಲೀಸರು ಗಣೇಶಮೂರ್ತಿಗಳನ್ನು ವಶಕ್ಕೆ ಪಡೆದು ತೆಗೆದುಕೊಂಡು ಹೋಗಿ ತಮ ಜೀಪ್ನಲ್ಲಿರಿಸಿದರು. ಈ ವೇಳೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಸದಸ್ಯರನ್ನು ವಶಕ್ಕೆ ಪಡೆಯಲಾಯಿತು.
eesanje/url_46_20_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗಲೆಲ್ಲ ಟಿಪ್ಪು ಸಂತತಿಯವರು ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಾರೆ : ತೇಜಸ್ವಿ ಸೂರ್ಯ
2
+
3
+ ಬೆಂಗಳೂರು,ಸೆ.13-ಕರ್ನಾಕಟದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲಾ ಟಿಪ್ಪು ಸಂತತಿಯಂತಿರುವ ಕೆಲವು ಮತೀಯ ಶಕ್ತಿಗಳು ರಾತ್ರೋರಾತ್ರಿ ಎದ್ದು ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ನಡೆಸುತ್ತಾರೆ ಎಂಬುದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ.
4
+ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಏನು ನಡೆದಿದೆ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ. ನಮ ಗಣಪತಿಯನ್ನು ವಿಸರ್ಜನೆ ಮಾಡುವಾಗ ಕೋಮುಗಲಭೆ ಅತ್ಯಂತ ದುರದೃಷ್ಟಕರ ಎಂದು ವಿಷಾದಿಸಿದರು.
5
+ ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗ ಸುಮನಿರುತ್ತಿದ್ದ ಕೆಲವು ಮತೀಯ ಶಕ್ತಿಗಳು ದಿಢೀರನೇ ಎದ್ದುಬಿಡುತ್ತಾರೆ. ಇಂತವರಿಗೆ ಕೆಲವು ರಾಜಕೀಯ ಪಕ್ಷಗಳು ಉದ್ದೇಶಪೂರಕವಾಗಿಯೇ ಬೆಂಬಲ ನೀಡುತ್ತವೆ. ಇದು ತುಷ್ಠೀಕರಣದ ನೀತಿಯೇ ಕಾರಣ ಎಂದು ವಾಗ್ದಾಳಿ ಮಾಡಿದರು.
6
+ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ವಿದೇಶದಲ್ಲಿ ಕುಳಿತು ಭಾರತದ ಮಾನವನ್ನು ಹರಾಜು ಮಾಡುತ್ತಿದ್ದಾರೆ. ಹುಟ್ಟಿದ ದೇಶದ ಬಗ್ಗೆ ಏನು ಮಾತನಾಡಬೇಕೆಂಬ ಸಾಮಾನ್ಯ ಜ್ಞಾನವೂ ಅವರಿಗಿಲ್ಲ. ಅವರ ಮಾತುಗಳನ್ನು ಯಾರೂ ನಂಬುವ ಸ್ಥಿತಿಯಲ್ಲಿಲ್ಲ. ಇಂತವರು ಒಂದೊಂದು ದಿನ ದೇಶದ ಸಮಗ್ರತೆ, ಭಾವೈಕ್ಯತೆ, ಸಾಮರಸ್ಯದ ಬಗ್ಗೆ ಮಾತನಾಡಿದರೂ ಅಚ್ಚರಿಯಿಲ್ಲ ಎಂದು ವ್ಯಂಗ್ಯವಾಡಿದರು.
7
+ ರಾಹುಲ್‌ಗಾಂಧಿ ಮಾತನ್ನು ಯಾರೊಬ್ಬರೂ ಕೇಳುವ ಸ್ಥಿತಿಯಲ್ಲಿಲ್ಲ. ಏಕೆಂದರೆ ಅವರ ಮಾತುಗಳಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಆರ್‌ಎಸ್‌‍ಎಸ್‌‍, ಬಿಜೆಪಿ, ಸಂಘಪರಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವುದೇ ಅವರ ಒಂದಂಶದ ಕಾರ್ಯಕ್ರಮವಾಗಿದೆ ಎಂದು ಕಿಡಿಕಾರಿದರು.
8
+ ವಿದೇಶದಲ್ಲಿ ಅವರು ಭೇಟಿ ಮಾಡಿರುವ ವ್ಯಕ್ತಿಗಳು ಅವರ ಇತಿಹಾಸ ತೆಗೆದು ನೋಡಿದರೆ ಎಲ್ಲರಿಗೂ ಗೊತ್ತಾಗುತ್ತದೆ. ಭಾರತದ ಶತ್ರುಗಳು ರಾಹುಲ್‌ಗಾಂಧಿಯವರ ಸ್ನೇಹಿತರಾಗಿದ್ದಾರೆ. ಇಂತವರು ದೇಶದ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ತೇಜಸ್ವಿಸೂರ್ಯ ಕಿಡಿಕಾರಿದರು.
9
+ ಓಬಿಸಿಗೆ ಅನ್ಯಾಯ ಆಗುತ್ತದೆ ಎಂದು ಇಲ್ಲಿ ಹೇಳುತ್ತಾರೆ. ವಿದೇಶದಲ್ಲಿ ಕುಳಿತು ನಮ ಪಕ್ಷ ಅಧಿಕಾರಕ್ಕೆ ಬಂದರೆ ಮೀಲಸಾತಿ ರದ್ದುಪಡಿಸುತ್ತೇವೆ ಎನ್ನುತ್ತಾರೆ. ನೆಹರು, ರಾಜೀವ್‌ಗಾಂಧಿ ಆದಿಯಾಗಿ ಎಲ್ಲರೂ ಮೀಸಲಾತಿ ವಿರೋಧಿಗಳೇ. ಹೀಗಾಗಿ ಅವರ ಹೇಳಿಕೆ ನಮಗೇನೂ ಆಶ್ಚರ್ಯ ಉಂಟುಮಾಡಿಲ್ಲ ಎಂದು ಹೇಳಿದರು.
10
+ ಮಂಡಲ್‌ ಆಯೋಗದ ಬಗ್ಗೆ ರಾಜೀವ್‌ಗಾಂಧಿ ಏನು ಭಾಷಣ ಮಾಡಿದ್ದಾರೆ ಎಂಬುದನ್ನು ರಾಹುಲ್‌ಗಾಂಧಿ ದಾಖಲೆಗಳನ್ನು ತೆಗೆದುಕೊಂಡು ನೋಡಬೇಕು. ಮೀಸಲಾತಿ ಕೊಡುವ ನೆಪದಲ್ಲಿ ಬುದ್ದುಗಳಿಗೆ ನಾವು ಅವಕಾಶ ಕೊಡಲು ಆಗುವುದಿಲ್ಲ ಎಂದು ಎಸ್‌‍ಸಿ/ಎಸ್‌‍ಟಿ, ಓಬಿಸಿಗೆ ಅನ್ಯಾಯ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವವರೆಗೂ ಓಬಿಸಿಗಳಿಗೆ ಮೀಸಲಾತಿ ಕೊಟ್ಟಿರಲಿಲ್ಲ ಎಂದು ತಿಳಿಸಿದರು.
11
+ ಸಿಖ್ಖರ ಮೇಲೆ ನರಮೇಧ ನಡೆಸಿದ್ದು ಕಾಂಗ್ರೆಸ್‌‍. ಇಂದಿರಾಗಾಂಧಿಯವರು ಹತ್ಯೆಗೀಡಾದಾಗ ಸೇಡು ತೀರಿಸಿಕೊಳ್ಳಲು ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬರ್ಭರವಾಗಿ ಸಾವಿರಾರು ಜನರನ್ನು ಹತ್ಯೆ ಮಾಡಲಾಯಿತು. ಅಂತಹ ಸಮುದಾಯದ ಬಗ್ಗೆ ರಾಹುಲ್‌ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು.
eesanje/url_46_20_5.txt ADDED
@@ -0,0 +1,5 @@
 
 
 
 
 
 
1
+ ನಾಗಮಂಗಲ ಕೋಮುಗಲಭೆ : ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ ಎಫ್‌ಎಸ್‌‍ಎಲ್‌ ತಂಡ
2
+ :
3
+ ನಾಗಮಂಗಲ,ಸೆ.13-ಪಟ್ಟಣದ ಬದ್ರಿಕೊಪ್ಪಲಿನಲ್ಲಿ ನಡೆದ ಗಲಭೆ ಸ್ಥಳಕ್ಕೆ ಎಫ್‌ಎಸ್‌‍ಎಲ್‌ ತಂಡ ಭೇಟಿ ನೀಡಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸ್ಥಳೀಯ ಪೊಲೀಸರೊಂದಿಗೆ ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು, ಸುಟ್ಟು ಕರಕಲಾದ ಅಂಗಡಿಗಳಿಗೆ ತೆರಳಿ ಅದರ ಮಾಲೀಕರುಗಳಿಂದ ಮಾಹಿತಿ ಪಡೆದು, ಸ್ಥಳದಲ್ಲಿ ದೊರೆತ ವಸ್ತುಗಳು, ಬಾಟಲಿಗಳು, ಕಲ್ಲುಗಳು, ದೊಣ್ಣೆಗಳನ್ನು ವಶಕ್ಕೆ ಪಡೆದಿದೆ.
4
+ ಪೆಟ್ರೋಲ್‌ ಬಾಂಬ್‌ನಿಂದಾಗಿ ವಸ್ತುಗಳು ಕರಕಲಾಗಿರುವುದು ಕಂಡುಬಂದಿದ್ದು, ಸಂಗ್ರಹಿಸಿರುವ ವಸ್ತುಗಳನ್ನೆಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು.ಇದು ಪೂರ್ವನಿಯೋಜಿತ ಸಂಚು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸ್ಥಳದಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ. ಪೊಲೀಸರು ವಾಹನಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.
5
+ ಸ್ಥಳದಲ್ಲಿ ಮೈಸೂರು ವಲಯದ ಡಿಐಜಿಪಿ ಡಾ.ಬೋರಲಿಂಗಯ್ಯ ಮೊಕ್ಕಾಂ ಹೂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಾಳೆವರೆಗೂ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ.ಮೊನ್ನೆ ರಾತ್ರಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪ್ರಾರ್ಥನಾ ಮಂದಿರದ ಬಳಿ ಬರುತ್ತಿದ್ದಂತೆ ಕಿಡಿಗೇಡಿಗಳು ಏಕಾಏಕಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 14ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡು 52 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
eesanje/url_46_20_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನಾಗಮಂಗಲ ಗಲಭೆ : ಕರ್ತವ್ಯ ನಿರ್ಲಕ್ಷ್ಯದ ಆರೋಪದಲ್ಲಿ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅಮಾನತು
2
+ :
3
+ ಬೆಂಗಳೂರು,ಸೆ.13-ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್‌‍ ಇನ್ಸ್ ಪೆಕ್ಟರ್‌ ಅಶೋಕ್‌ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಮೆರವಣಿಗೆ ಹೊರಡಬೇಕಿದ್ದ ದಾರಿಯನ್ನು ಮುಂಚಿತವಾಗಿ ನೀಡಲಾಗಿತ್ತು. ಇದನ್ನು ಇನ್‌ಸ್ಪೆಕ್ಟರ್‌ ಬದಲಾಯಿಸಿದ್ದರು ಎಂದರು.
4
+ ಯಾವುದೇ ಘಟನೆಗಳಾದರೆ ನಿಮನ್ನೇ ಹೊಣೆ ಮಾಡುವುದಾಗಿ ಪೊಲೀಸ್‌‍ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ಡಿವೈಎಸ್‌‍ಪಿ ಮೇಲೂ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
5
+ ಯಾವುದೇ ಅಹಿತಕರ ಘಟನೆ ನಡೆಯದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೆವು. ಅದರ ಆಧಾರದ ಮೇಲೆ ಡಿಜಿ ಯವರು ವೀಡಿಯೋ ಕಾನ್ಫರೆನ್‌್ಸಮೂಲಕ ಸಂಬಂಧಪಟ್ಟ ಎಲ್ಲ ಎಸ್‌‍ಪಿ ಮತ್ತು ಅಧಿಕಾರಿಗಳಿಗೆ ತಿಳಿಸಿದ್ದರು. ಸಾರ್ವಜನಿಕರೊಂದಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ, ಎಸ್‌‍ಪಿ ಎಲ್ಲರು ಸಹ ಸಭೆಗಳನ್ನು ನಡೆಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌‍ಆರ್‌ಪಿ ವಾಹನ ಇಟ್ಟುಕೊಂಡು ಸಜ್ಜಾಗಿದ್ದರು ಎಂದರು.
6
+ ಸರ್ಕಾರದ ಕುಮಕ್ಕು ನೀಡಿದ್ದು, ಇದು ಪೂರ್ವನಿಯೋಜಿತ ಘಟನೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ಸರ್ಕಾರದವರಾದರೂ ಹೋಗಿ ಗಲಾಟೆ ಮಾಡಿ ಎಂದು ಹೇಳುತ್ತಾರೆಯೇ? ಈ ರೀತಿ ಆಗಬಾರದಾಗಿತ್ತು ಎಂದು ಹೇಳುವುದೇ ತಪ್ಪ. ಇವರಿಗೆ ಕನ್ನಡ ಭಾಷೆ ಅರ್ಥವಾಗುವುದಿಲ್ಲವೇ? ನಾವು ಹಳ್ಳಿಯಿಂದ ಬಂದವರು, ಹಳ್ಳಿ ಭಾಷೆಯಲ್ಲಿ ಹೇಳುತ್ತೇವೆ.
7
+ ಪಠ್ಯಪುಸ್ತಕದ ಭಾಷೆ ಬಳಸುತ್ತೇವೆಯೇ? ಒಂದು ಮಾತನ್ನು ಸ್ಪಷ್ಟವಾಗಿ ಹೇಳಲಿಚ್ಛಿಸುತ್ತೇನೆ. ರಾಜ್ಯದಲ್ಲಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದರು.ಯಾರೇ ಆಗಿರಲಿ, ಗಣೇಶ ಹಬ್ಬ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಅನವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿಸಿ, ಗಲಾಟೆ ಮಾಡಿದರೆ ಸುಮನೆ ಬಿಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕೋ, ಕಟ್ಟುನಿಟ್ಟಾಗಿ ಮುಲಾಜಿಲ್ಲದೇ ಜರುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
8
+ ಯಾವುದೇ ಸಮುದಾಯವನ್ನು ತುಷ್ಟಿಕರಣ ಮಾಡುವ ಅಗತ್ಯತೆ ನಮಗೆ ಇಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ ಎಂದರು.
9
+ ನಾನು ಗೃಹ ಸಚಿವನಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ. ಬಿಜೆಪಿಯವರಿಂದ ಸರ್ಟಿಫಿಕೇಟ್‌ ಬೇಕಿಲ್ಲ. ನನಗೂ ಜವಾಬ್ದಾರಿ ಇದೆ. ಜವಾಬ್ದಾರಿ ಇಲ್ಲದೆ, ಆ ಸ್ಥಾನದಲ್ಲಿ ಕುಳಿತಿಲ್ಲ. ಕೆಲಸ ಮಾಡುತ್ತಿದ್ದೇವೆ. ನಾಗಮಂಗಲ ಘಟನೆಯನ್ನು ಸಮರ್ಥನೆ ಮಾಡುತ್ತಿದ್ದೇವೆಯೇ? ಯಾರು ಕಾರಣ ಆಗಿದ್ದಾರೆ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ? ಈಗಾಗಲೇ 52 ಜನರನ್ನು ಸುಮನೆ ಬಂಧಿಸಲಾಗಿದೆಯೇ? ಎಂದು ಪ್ರಶ್ನಿಸಿದರು.
10
+ ಬಿಜೆಪಿಯವರು ಹೇಳಿಕೆಗಳನ್ನು ತಿರುಚಿ ವ್ಯಾಖ್ಯಾನ ಮಾಡಿಕೊಳ್ಳಲಿ. ಪರಮೇಶ್ವರ ಹೀಗೆ ಹೇಳಿದರು, ಸಣ್ಣದೆಂದರು, ದೊಡ್ಡದು ಎಂದರು ಹೇಳಿಕೊಳ್ಳಲಿ. ನನಗು ಅವರಂತೆ ಮಾತನಾಡುವುದಕ್ಕೆ ಬರುತ್ತದೆ. ನಾನು ನಿನ್ನೆಯೇ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ವಿಪಕ್ಷದವರಿಗೆ ಮನವಿ ಮಾಡಿದ್ದೇನೆ. ಆದರೂ ರಾಜಕೀಯ ಮಾಡುತ್ತೇವೆ ಅನ್ನುವುದಾದರೆ ಮಾಡಲಿ. ನಾವು ನಿಭಾಯಿಸುತ್ತೇವೆ ಎಂದರು. ಇಂತಹ ಘಟನೆಗಳಾದ ಸಂದರ್ಭದಲ್ಲಿ ಪರಿಹಾರ ಕೊಡಲು ಕೆಲವು ನಿಯಮಗಳಿವೆ. ಘಟನೆಯ ತನಿಖಾ ವರದಿ ಬಂದ ನಂತರ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.
eesanje/url_46_20_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬಿಜೆಪಿಯೊಳಗಿನ ಮುಸುಕಿನ ಗುದ್ದಾಟಕ್ಕೆ ಕಡಿವಾಣ ಹಾಕುವುದೇ ವಿಜಯೇಂದ್ರಗೆ ಸವಾಲು
2
+
3
+ ಬೆಂಗಳೂರು,ಸೆ.13– ಆರ್ಎಸ್ಎಸ್ ನಾಯಕರ ಮಧ್ಯಪ್ರವೇಶದಿಂದಾಗಿ ಸದ್ಯ ಪರಿಸ್ಥಿತಿ ತಿಳಿಗೊಂಡಿದೆ ಎಂದು ಹೇಳಲಾಗುತ್ತಿದೆಯಾದರೂ ಬಿಜೆಪಿಯೊಳಗಿನ ಮುಸುಕಿನ ಗುದ್ದಾಟಕ್ಕೆ ಕಡಿವಾಣ ಹಾಕುವುದೇ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸವಾಲಾಗಿ ಪರಿಣಮಿಸಿದೆ.ಸಂಘ ಪರಿವಾರ ನಾಯಕರ ಮಧ್ಯಪ್ರವೇಶದಿಂದ ಹಾವು ಮುಂಗುಸಿಯಂತಿದ್ದ ವಿಜಯೇಂದ್ರ ಹಾಗೂ ಯತ್ನಾಳ್ ತಂಡವನ್ನು ಸದ್ಯಕ್ಕೆ ಒಗ್ಗೂಡಿಸುವಲ್ಲಿ ಆರ್ಎಸ್ಎಸ್ ನಾಯಕರು ಯಶಸ್ವಿಯಾಗಿದ್ದಾರೆ.
4
+ ಪರಸ್ಪರ ಮುಖ ಕೊಟ್ಟು ಮಾತನಾಡದ ಸ್ಥಿತಿಯಲ್ಲಿದ್ದ ಬಿಜೆಪಿಯ ನಿಷ್ಠಾವಂತ ಮತ್ತು ಭಿನ್ನಮತೀಯ ನಾಯಕರು ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆಂದು ಹಿರಿಯರ ಬಳಿ ವಾಗ್ದಾನ ಮಾಡಿದ್ದಾರೆ.ಆದರೆ ಯತ್ನಾಳ್ ಹಾಗೂ ಅವರ ತಂಡವನ್ನು ನಿಭಾಯಿಸಿಕೊಂಡು ಪಕ್ಷವನ್ನು ಮುನ್ನಡೆಸುವುದು ವಿಜಯೇಂದ್ರ ಅವರಿಗೆ ಅಷ್ಟು ಸುಲಭವಲ್ಲ ಎಂದು ಪಕ್ಷದವರೇ ಹೇಳುತ್ತಿದ್ದಾರೆ.
5
+ ಏಕೆಂದರೆ ಯತ್ನಾಳ್ ಬಣದಲ್ಲಿರುವ ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ, ಬಿ.ಪಿ.ಹರೀಶ್ ಮತ್ತಿತರರು ಒಂದಲ್ಲೊಂದು ರೀತಿ ಸಿಎಂ ಸಿದ್ದಾರಾಮಯ್ಯನವರ ಜೊತೆ ಅನ್ಯೋನ್ಯವಾಗಿಯೇ ಇದ್ದಾರೆ.
6
+ ಮೇಲ್ನೋಟಕ್ಕೆ ಯತ್ನಾಳ್ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯನವರು ಹೇಳಿಕೊಂಡರೂ ಅವರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಯಥೇಚ್ಚವಾಗಿ ಅನುದಾನ ಬಿಡುಗಡೆ ಹಾಗೂ ಅಧಿಕಾರಿಗಳ ವರ್ಗಾವಣೆ ಶರವೇಗದಲ್ಲಿ ನಡೆಯುತ್ತದೆ ಎಂಬ ಅಸಮಧಾನ ಬಿಜೆಪಿಯಲ್ಲೇ ಕೇಳಿಬರುತ್ತಿದೆ.
7
+ ಮುಡಾ ಹಗರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ, ಜೆಡಿಎಸ್ ಜಂಟಿ ಪಾದಯಾತ್ರೆ ನಡೆಯುತ್ತಿದ್ದಾಗ ಪಕ್ಷಕ್ಕೆ ಉದ್ದೇಶಪೂರ್ವಕವಾಗಿ ಮುಜುಗರವಾಗಲೆಂದು ಹೇಳಿಕೆ ಕೊಟ್ಟಿದ್ದು ಯತ್ನಾಳ್.
8
+ ಇದು ಸರ್ಕಾರದ ಸೂಚನೆ ಮೇರೆಗೆ ಯತ್ನಾಳ್ ಹಾಗೂ ಅವರ ತಂಡ ಉದ್ದೇಶಪೂರ್ವಕವಾಗಿಯೇ ಬಿಜೆಪಿಯನ್ನು ವಿಶೇಷವಾಗಿ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಯಾಗಿಟ್ಟುಕೊಂಡು ನಡೆಸಿದ ವ್ಯವಸ್ಥಿತ ಷಡ್ಯಂತರ ಎಂಬ ಗುಸುಗುಸು ಜಗನ್ನಾಥ ಭವನದಲ್ಲಿ ರಿಂಗಣಿಸುತ್ತಿದೆ.
9
+ ಮುಂದಿನ ದಿನಗಳಲ್ಲಿ ನಾವು ಪಕ್ಷದ ಅಣತಿಯಂತೆ ನಡೆದುಕೊಳ್ಳುತ್ತೇವೆ ಎಂದು ಯತ್ನಾಳ್ ಹೇಳಿಕೊಂಡಿದ್ದರೂ ಅವರ ಮಾತನ್ನು ಯಾರೂ ಕೂಡ ಅಷ್ಟು ಸುಲಭವಾಗಿ ನಂಬುವ ಸ್ಥಿತಿಯಲ್ಲಿಲ್ಲ.
10
+ ಕ್ಷಣಚಿತ್ತ ಕ್ಷಣಪಿತ್ತ ಎಂಬಂತಿರುವ ಯತ್ನಾಳ್ ಯಾವಾಗ ಸ್ವಪಕ್ಷೀಯರ ವಿರುದ್ಧವೇ ತಿರುಗಿಬೀಳುತ್ತಾರೆ. ಇನ್ನ್ಯಾವಾಗ ಪಕ್ಷದ ಪರವಾಗಿರುತ್ತಾರೆ ಎಂಬುದು ಸ್ವತಃ ಅವರ ಮನೆಯ ಸದಸ್ಯರಿಗೇ ಗೊತ್ತಿಲ್ಲ ಎಂದು ಹತ್ತಿರದವರೇ ಹೇಳುತ್ತಾರೆ.ಸದ್ಯದಲ್ಲೇ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲುವ ಅನಿವಾರ್ಯತೆ ಬಿಜೆಪಿಗಿದೆ.
11
+ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 19ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬೀಗಿತ್ತು.ಆದರೆ ಲೋಕಸಭೆ ಚುನಾವಣೆ ನಂತರ ಪರಿಸ್ಥಿತಿ ಸಾಕಷ್ಟು ಬಿಗಡಾಯಿಸಿದ್ದು, ಒಂದು ಕಡೆ ಕಾಂಗ್ರೆಸ್ ಪುಟಿದೆದ್ದಿದ್ದರೆ ಬಿಜೆಪಿ ಆಂತರಿಕ ಕಚ್ಚಾಟದಿಂದ ಬಳಲುತ್ತಿದೆ. ಮೂರು ಸ್ಥಾನಗಳಲ್ಲಿ ಕಡೆಪಕ್ಷ ಎರಡು ಸ್ಥಾನಗಳನ್ನಾದರೂ ಗೆದ್ದರೆ ವಿಜಯೇಂದ್ರ ನಾಯಕತ್ವಕ್ಕೆ ಒಂದಿಷ್ಟು ಶಕ್ತಿ ಬರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ವಿಜಯೇಂದ್ರ ಎಲ್ಲರನ್ನೂ ನಿಭಾಯಿಸಿಕೊಂಡು ಪಕ್ಷ ಮುನ್ನಡೆಸುವ ಹೊಣೆಗಾರಿಕೆ ಅವರ ಮೇಲಿದೆ.
eesanje/url_46_20_8.txt ADDED
@@ -0,0 +1,7 @@
 
 
 
 
 
 
 
 
1
+ ಸೆ.22 ರ ಬದಲಾಗಿ ಸೆ.28 ರಂದು ಪಿಎಸ್‌‍ಐ ನೇಮಕಾತಿ ಪರೀಕ್ಷೆ : ಗೃಹಸಚಿವ ಪರಮೇಶ್ವರ್‌
2
+ 28 22
3
+ ಬೆಂಗಳೂರು,ಸೆ.12-ಪಿಎಸ್‌‍ಐ 402 ಹುದ್ದೆಗಳ ನೇಮಕಾತಿಗೆ ಸೆ.22 ರ ಬದಲಾಗಿ ಸೆ.28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 ಮೊದಲ ಹಂತದ ಪಿಎಸ್‌‍ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಮರುಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಿ ನೇಮಕಾತಿ ಆದೇಶ ನೀಡುವ ಹಂತದಲ್ಲಿದ್ದೇವೆ.
4
+ ಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸೆ.22 ಕ್ಕೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಬಹಳಷ್ಟು ಮಂದಿ ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಮನವಿ ಮಾಡಿದ್ದರು.
5
+ ಯುಪಿಎಸ್‌‍ಸಿಗೆ ಸೆ.22 ರಂದೇ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಈಗಾಗಲೇ ಪ್ರಿಲಿಮ್ಸೌನಲ್ಲಿ ಯಶಸ್ಸು ಗಳಿಸಿ ಮುಖ್ಯ ಪರೀಕ್ಷೆಗೆ ರಾಜ್ಯದಿಂದ 100 ಮಂದಿ ಆಯ್ಕೆಯಾಗಿದ್ದು, ಅವರಿಗೆ ಅವಕಾಶ ತಪ್ಪಿಹೋಗಲಿದೆ ಎಂದು ವಿವರಿಸಲಾಗಿತ್ತು. ಬಿಜೆಪಿಯ ಅಶ್ವತ್ಥನಾರಾಯಣ ಹಾಗೂ ಇತರ ನಾಯಕರು ಕೂಡ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು.
6
+ ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜೊತೆ ಚರ್ಚೆ ನಡೆಸಿದಾಗ ಡಿಸೆಂಬರ್‌ವರೆಗೂ ಯಾವುದೇ ಸ್ಲಾಟ್‌ಗಳು ಖಾಲಿ ಇಲ್ಲ ಎಂದು ತಿಳಿಸಲಾಗಿತ್ತು. ಮತ್ತೆ ಹಿರಿಯ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯ ಸಹಕಾರ ಬೇಕಿದೆ. ಪ್ರತಿ ಭಾನುವಾರವೂ ಡಿಸೆಂಬರ್‌ವರೆಗೂ ಪರೀಕ್ಷೆಗಳು ನಿಗದಿಯಾಗಿವೆ ಎಂದು ವಿವರಿಸಿದರು.
7
+ ಸಚಿವರ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೆ.28ಕ್ಕೆ 402 ಪಿಎಸ್‌‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿಗದಿ ಮಾಡಲಾಗಿದೆ. ಅಂದು ಶನಿವಾರವಾಗಿದ್ದು, ಪಿಯುಸಿ ತರಗತಿಗಳನ್ನು ರದ್ದುಗೊಳಿಸಲು ಮನವಿ ಮಾಡಲಾಗಿದೆ ಎಂದರು.ಪೊಲೀಸ್‌‍ ಕಾನ್‌್ಸಟೇಬಲ್‌ಗಳ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಪದ್ಧತಿಗಳು ಹಾಗೂ ಕ್ರಮಗಳ ಮಾಹಿತಿಗಳನ್ನು ಕಲೆ ಹಾಕಿದ್ದೇವೆ. ಪೊಲೀಸ್‌‍ ಮಹಾನಿರ್ದೇಶಕರು ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.
eesanje/url_46_20_9.txt ADDED
@@ -0,0 +1,9 @@
 
 
 
 
 
 
 
 
 
 
1
+ ನಾಗಮಂಗಲ ಗಲಭೆ : ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಚಿವ ಚೆಲುವರಾಯಸ್ವಾಮಿ ಮನವಿ
2
+ :
3
+ ಮಂಡ್ಯ,ಸೆ.12-ನಾಗಮಂಗಲದ ಗಣೇಶನ ಗಲಭೆ ಪ್ರಕರಣದಲ್ಲಿ ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದೇ ಪರಿಸ್ಥಿತಿ ತಿಳಿಗೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪ್ರವಾಸದಲ್ಲಿದ್ದು ನಿನ್ನೆ ಸಂಜೆಯಷ್ಟೇ ವಿಮಾನದಲ್ಲಿ ಬಂದಿಳಿದೆ.
4
+ ಈ ನಡುವೆ ನಾಗಮಂಗಲದಲ್ಲಿ ಗಲಭೆ ಸಂಭವಿಸಿದೆ ಎಂದು ಮಾಹಿತಿ ತಿಳಿಯಿತು. ತಕ್ಷಣವೇ ಎಸ್ಪಿ, ಐಜಿಪಿ, ಎಡಿಜಿಪಿ ಅವರಿಗೆ ಕರೆ ಮಾಡಿ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೆ. ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಗಣಪತಿ ಮೂರ್ತಿಯ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ನಡುವೆ ಕೂಗಾಟ ಹಾಗೂ ಘರ್ಷಣೆ ನಡೆದಿದೆ.
5
+ ಒಂದು ಸಮುದಾಯ ಪೊಲೀಸ್‌‍ ಠಾಣೆಯ ಮುಂದೆ ಗಣೇಶನನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದೆ, ಆಗ ಮತ್ತೆ ವಾಗ್ವಾದ ನಡೆದು ಸಂಘರ್ಷ ಹೆಚ್ಚಾಗಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಬಂದು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.
6
+ ಅನಗತ್ಯವಾಗಿ ಸಂಘರ್ಷ ಬೇಡ. ಅನಾಹುತಗಳಾದರೆ ಅದರಿಂದಾಗುವ ನಷ್ಟ ತೀವ್ರವಾಗಿರುತ್ತದೆ. ಯಾರೂ ದುಡುಕಬೇಡಿ, 40 ವರ್ಷಗಳಿಂದ ನಾಗಮಂಗಲದಲ್ಲಿ ಶಾಂತಿ ನೆಲೆಸಿದೆ. ದೇವರ ಕೆಲಸ ಗಲಭೆಗೆ ಕಾರಣವಾಗುವುದು ಬೇಡ ಎಂದು ತಾವು ಮನವಿ ಮಾಡಿದ್ದು, ಕೊನೆಗೆ ಗಣೇಶ ವಿಸರ್ಜನೆಯಾಗಿದೆ.
7
+ ಸಂಘರ್ಷದಲ್ಲಿ ಒಂದಿಷ್ಟು ಸಣ್ಣಪುಟ್ಟ ಘಟನೆಗಳು ನಡೆದಿವೆ. ಅಂಗಡಿಗಳಿಗೆ, ಬೈಕ್‌ಗಳಿಗೆ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಮ ಜೊತೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಗಳಿಗೂ ಸೂಕ್ತ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
8
+ ಮೊದಲಿಗೆ ನಮ ಆದ್ಯತೆ ಪರಿಸ್ಥಿತಿಯನ್ನು ತಹಬದಿಗೆ ತಂದು ಶಾಂತಿ ನೆಲೆಸುವುದಾಗಿದೆ. ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪೊಲೀಸರು ಈಗಾಗಲೇ ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದರು.
9
+ ಇಲ್ಲಿ ಅಧಿಕಾರದ ಪ್ರಶ್ನೆ ಇಲ್ಲ. ಸಾರ್ವಜನಿಕರ ನೆಮದಿಯ ವಿಚಾರವಾಗಿದೆ. ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರ ಪುತ್ರ ಭಾಗಿಯಾಗಿರುವುದು, ಪೊಲೀಸರ ವೈಫಲ್ಯ, ಎರಡೂ ಸಮುದಾಯಗಳ ನಾಯಕರ ಲೋಪಗಳು ಸೇರಿದಂತೆ ಎಲ್ಲಾ ವಿಚಾರಗಳನ್ನೂ ಸಾವಧಾನದಿಂದ ಪರಿಶೀಲಿಸಬೇಕು. ಸದ್ಯಕ್ಕೆ ನಮಗೆ ಜನರ ಹಿತದೃಷ್ಟಿ ಮುಖ್ಯ ಎಂದು ಹೇಳಿದರು.
eesanje/url_46_210_1.txt ADDED
@@ -0,0 +1,6 @@
 
 
 
 
 
 
 
1
+ ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಪಣ
2
+ ಬೆಂಗಳೂರು, ಮಾ.10- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು.
3
+ ಇದೇ ವೇಳೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಗ್ರೀನ್ ಬೆಂಗಳೂರು, ಮಾದಕ ವ್ಯಸನ ಮುಕ್ತ ಸಮಾಜ, ಸೈಬರ್ ಕ್ರೈಮ್ ತಡೆ ಮತ್ತು ಎಲ್ಲರಿಗೂ ಆರೋಗ್ಯ ಎಂಬ ಧ್ಯೇಯಕ್ಕಾಗಿ ಪ್ರತಿ ವರ್ಷ ಪೊಲೀಸ್ ಓಟವನ್ನು ಆಯೋಜಿಸಿ ಜಾಗೃತಿ ಮೂಡಿಸುತ್ತಾರೆ ಎಂದರು. ಪರಿಸರ ಸ್ನೇಹಿಯಾದ ಹಸಿರು ಬೆಂಗಳೂರು ನಿರ್ಮಾಣ ಮಾಡುವ ಅಗತ್ಯ ಇದೆ. ಬೆಂಗಳೂರಿನಲ್ಲಿ ಹಸಿರು ಕಡಿಮಾಗುತ್ತಿದೆ. ಅದನ್ನು ಹೆಚ್ಚಿಸಬೇಕಿದೆ. ಅದೇ ರೀತಿ ಎಲ್ಲರ ದೈಹಿಕ ಕ್ಷಮತೆಗಾಗಿ ಓಟ ಅಗತ್ಯವಿದೆ. ವಿಶೇಷವಾಗಿ ಯುವಕರು ಸಮಾಜದಲ್ಲಿ ಅರ್ಧ ಸಂಖ್ಯೆಯಲ್ಲಿದ್ದಾರೆ. ಎಷ್ಟು ವರ್ಷ ಬದುಕುತ್ತೇವೆಯೋ ಅಷ್ಟು ವರ್ಷವೂ ಆರೋಗ್ಯವಂತರಾಗಿ ಜೀವಿಸಬೇಕು ಎಂದರು.
4
+ ಸಮಾಜದಲ್ಲಿ ಯುವಜನ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಯುವಕ-ಯುವತಿಯರೇ ದೇಶದ ಸಂಪತ್ತು, ಅವರು ವ್ಯವಸನಿಗಳಾಗುತ್ತಿರುವುದು ದೃಷ್ಟಕರ. ಈ ನಿಟ್ಟಿನಲ್ಲೆ ಸರ್ಕಾರದ ಪ್ರಯತ್ನ ಮಾತ್ರ ಯಶಸ್ವಿಯಾಗುವುದಿಲ್ಲ. ಸಮಾಜವೂ ಕೈಜೋಡಿಸಬೇಕು ಆಗ ಮಾತ್ರ, ಬೆಂಗಳೂರು, ಕರ್ನಾಟಕ ಹಾಗೂ ಇಡೀ ದೇಶವನ್ನು ಮಾದಕ ವ್ಯಸನ ಮುಕ್ತ ಮಾಡಲು ಸಾಧ್ಯವಾಗುತ್ತದೆ ಎಂದರು.
5
+ ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚಾಗುತ್ತಿದೆ. ಅದು ಕಡಿಮೆಯಾಗಬೇಕು ಎಂದರೆ ಜನರಲ್ಲಿ ಜಾಗೃತಿ ಅಗತ್ಯ. ಪೊಲೀಸರು ಎಷ್ಟೇ ಕಷ್ಟ ಪಟ್ಟರೂ, ತಡೆಗೆ ಪ್ರಯತ್ನ ಪಟ್ಟರು, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿದರೂ ಸೈಬರ್ ಕ್ರೈಮ್ ಕಡಿಮೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಅಗತ್ಯ. ಅಪರಾಧ ಮಾಡಬಾರದು, ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದು ಜನರಲ್ಲಿ ಅರಿವು ಮೂಡಬೇಕು ಎಂದರು. ಎಲ್ಲರೂ ಆರೋಗ್ಯವಂತರಾಗಿ, ಸಮಾಜದ ಆಸ್ತಿಯಾಗಿ ಬಾಳಬೇಕು. ಎಲ್ಲ ಅಪರಾಧಗಳ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.
6
+ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
eesanje/url_46_210_10.txt ADDED
@@ -0,0 +1,8 @@
 
 
 
 
 
 
 
 
 
1
+ ಸ್ವಪಕ್ಷೀಯರ ವಿರುದ್ಧವೇ ಶೋಭಾ ಕರದ್ಲಾಂಜೆ ಆರೋಪ
2
+ ಬೆಳಗಾವಿ,ಮಾ.9- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ನನಗೆ ಟಿಕೆಟ್ ಕೈ ತಪ್ಪಿಸಲು ನಮ್ಮ ಪಕ್ಷದಲ್ಲೇ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಸಚಿವೆ ಶೋಭಾ ಕರದ್ಲಾಂಜೆ ಅವರು, ಸ್ವಪಕ್ಷೀಯರ ವಿರುದ್ಧವೇ ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ನಮಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.
3
+ ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ. ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ಆಗಲಿದೆ.
4
+ ಪಿತೂರಿ ಮಾಡಿದಾಗಲೇ ಹೈಕಮಾಂಡ್ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡುತ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ. ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದಷ್ಟೇ ಹೇಳುತ್ತಿದ್ದರು ಎಂದು ಮಾರ್ಮಿಕವಾಗಿ ನುಡಿದರು.
5
+ ನನ್ನನ್ನು ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದಾಗಲೇ ಇದರ ಹಿಂದಿನ ಸತ್ಯ ಗೊತ್ತಾಗುತ್ತದೆ. ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ತಿಳಿಯಲಿದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
6
+ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳಲು ಹೊರಟಿದೆ. ಬಿಜೆಪಿ ಯಾವ ಮಾನದಂಡ ಇಟ್ಟುಕೊಂಡು ಲೋಕಸಭೆಯಲ್ಲಿ ಮತ ಕೇಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶೋಭಾ, ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ. 10 ವರ್ಷಗಳ ಅಭಿವೃದ್ಧಿಯ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆದಂಥ ಮೂಲಸೌಕರ್ಯ ಅಭಿವೃದ್ಧಿ, ಗ್ರಾ��ೀಣ ಭಾಗಕ್ಕೆ ಸಿಕ್ಕ ನೆರವು ಇದು ನಮ್ಮ ಶಕ್ತಿ. ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಮೋದಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಗೌರವದ ದೂರದೃಷ್ಟಿ ಮೇಲೆ ಮತ ಕೇಳುತ್ತೇವೆ ಎಂದು ಹೇಳಿದ್ದಾರೆ.
7
+ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಲಿದೆಯೇ ಎಂಬ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷದಿಂದ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ ಎಂದು ಸಮರ್ಥಿಸಿಕೊಂಡರು. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾ ಅವರೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಇವೆಲ್ಲ ಊಹಾಪೋಹ ಎನಿಸುತ್ತದೆ, ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆ ಎಂದು ಶೋಭಾ ಹೇಳಿದ್ದಾರೆ.
8
+ ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ಮಾಡಿದ ಕುರಿತು, ಬೆಲೆ ಇಳಿಕೆಗೂ ಚುನಾವಣೆಗೂ ಸಂಬಂಧವಿಲ್ಲ. ಗ್ಯಾಸ, ಪೆಟ್ರೋಲ್‍ನಲ್ಲಿ ನಾವಿನ್ನೂ ಸ್ವಾವಲಂಬಿ ಆಗಿಲ್ಲ. ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಅವರು ಯೋಜನೆ ರೂಪಿಸುತ್ತಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಖಾದ್ಯ ತೈಲದಲ್ಲಿ ನಾವು ಸ್ವಾವಲಂಬಿ ಆಗಿಲ್ಲ. ಈ ಎಲ್ಲವನ್ನೂ ನಾವು ವಿದೇಶದಿಂದ ಸರಬರಾಜು ಮಾಡಿಕೊಳ್ಳಬೇಕಾಗುತ್ತದೆ. ವಿದೇಶಿ ಮಾರುಕಟ್ಟೆ ಆಧಾರದ ಮೇಲೆ ಬೆಲೆ ನಿಗದಿ ಆಗುತ್ತದೆ. ಇದರಲ್ಲೂ ನಾವು ಸ್ವಾವಲಂಬನೆ ಸಾಧಿಸಲು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ ಎಂದರು.
eesanje/url_46_210_11.txt ADDED
@@ -0,0 +1,7 @@
 
 
 
 
 
 
 
 
1
+ ದಲಿತ ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ : ಪರಮೇಶ್ವರ್
2
+ ಬೆಂಗಳೂರು,ಮಾ.9- ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ಸ್ಥಿರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಲೋಕಸಭಾ ಚುನಾವಣೆ ಎದುರಾಗಿರುವ ಸಂದರ್ಭದಲ್ಲಿ ದಲಿತ ಮುಖ್ಯಮಂತ್ರಿ ಕುರಿತ ಚರ್ಚೆ ಅಪ್ರಸ್ತುತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿ, ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದಿರುವುದಕ್ಕೆ ಈಗಾಗಲೇ ಪ್ರತಿಕ್ರಿಯಿಸಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಮುಂದಿರುವ ಗುರಿ. ಇದು ಸಾಧ್ಯವಾದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ ಎಂದರು.
3
+ ದಲಿತ ಮುಖ್ಯಮಂತ್ರಿಯ ವಿಚಾರವಾಗಿ ಬೇರೆಬೇರೆ ವಿಚಾರಗಳು ಚರ್ಚೆಯಲ್ಲಿವೆ. ಕೆಲವರು ಇದು ಸೂಕ್ತ ಸಮಯ ಅಲ್ಲ ಎಂದರೆ, ಇನ್ನೂ ಕೆಲವರು ಅವಕಾಶ ಮಾಡಿಕೊಟ್ಟು ದಲಿತ ಸಮುದಾಯದ ಮತ ಮತ್ತಷ್ಟು ಕಾಂಗ್ರೆಸ್‍ಗೆ ಬರಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇದೆಲ್ಲವನ್ನೂ ಈಗ ಚರ್ಚೆ ಮಾಡುವುದು ಬೇಡ ಎಂದು ಹೇಳಿದರು.
4
+ ಪರಿಶಿಷ್ಟರ ಜನಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಸಾಮಾನ್ಯ ಕ್ಷೇತ್ರಗಳಲ್ಲಿ ಪರಿಶಿಷ್ಟ ಸಮುದಾಯದ ನಾಯಕರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ರೀತಿ ಎಲ್ಲಿಯೂ ನಡೆದಿರುವ ಪ್ರಸ್ತಾವನೆಗಳಿಲ್ಲ. ಐದು ಮೀಸಲು ಕ್ಷೇತ್ರಗಳಿವೆ. ಅಲ್ಲಿ ಟಿಕೆಟ್ ಕೊಡುತ್ತಾರೆ ಎಂದರು. ಇಲ್ಲಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಪ್ರತಿದಿನವೂ ಹೊಸ ಹೊಸ ಸುಳಿವು, ಮಾಹಿತಿಗಳು ದೊರೆಯುತ್ತಿವೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಅದನ್ನು ಮುಂದಿಟ್ಟುಕೊಂಡೇ ಕಾರ್ಯಾಚರಣೆ ನಡೆಯುತ್ತಿದೆ. ಎನ್‍ಐಎ ಸಿಸಿಬಿ ಪೊಲೀಸರು ಜಂಟಿಯಾಗಿ ಆರೋಪಿಯ ಬೆನ್ನತ್ತಿದ್ದಾರೆ ಎಂದರು.
5
+ ವಿಧ್ವಂಸಕ ಕೃತ್ಯಗಳಿಗೆ ಜೈಲಿನಿಂದಲೇ ಸಂಚು ನಡೆಸಿರುವ ಚರ್ಚೆಗಳಾಗುತ್ತಿವೆ. ಎನ್‍ಐಎ ಕೂಡ ಇದನ್ನು ಗಮನಿಸಿದೆ. ಜೈಲಿನಲ್ಲಿನ ಚಟುವಟಿಕೆಗಳನ್ನು ನಿಯಂತ್ರಿಸಲು ಕೆಲವು ಸಲಹೆಗಳನ್ನು ಮಾಡಲಾಗಿದೆ ಎಂದು ಹೇಳಿದರು. ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಕಾನೂನು ರೀತಿಯ ಕ್ರಮ ಕೈಗೊಂಡಿದ್ದೇವೆ. ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್‍ಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಅಧಿಕಾರಿಗಳು ಪತ್ರ ಬರೆಯುವುದನ್ನು ತಡೆಯಲಿಕ್ಕೆ ಸಾಧ್ಯವಿಲ್ಲ. ಬಿಜೆಪಿಯವರು ಹೇಳಿದಾಕ್ಷಣ ನಾಸಿರ್ ಹುಸೇನ್ ಮೇಲೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದರು.
6
+ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಚುನಾವಣೆಯಲ್ಲಿ ಸ್ರ್ಪಧಿಸುವ ಬಗ್ಗೆ ನಾವ್ಯಾರೂ ಅಭಿಪ್ರಾಯ ಹೇಳುವುದು ಸರಿಯಲ್ಲ. ಹಿರಿಯರಾದ ಅವರೇ ��ುದ್ದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು. ತುಮಕೂರು ಲೋಕಸಭಾ ಕ್ಷೇತ್ರ ಗೆಲ್ಲುವ ಕ್ಷೇತ್ರ. ಅದನ್ನು ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಲು ಪ್ರಯತ್ನಿಸುತ್ತೇವೆ. ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅವರಿಗೆ ಅಸಮಾಧಾನ ಸಹಜ. ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಅವಕಾಶ ದೊರೆಯಲಿದೆ ಎಂದು ಭರವಸೆ ನೀಡಿ ಮನವೊಲಿಸುತ್ತೇವೆ ಎಂದರು.
7
+ ಕಾಂಗ್ರೆಸ್ ಪಕ್ಷ 2 ಬಾರಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿ ಕೆಪಿಸಿಸಿ ಅಧ್ಯಕ್ಷರು ಯಾರ ಹೆಸರಿಗೆ ಶಿಫಾರಸ್ಸು ಮಾಡಿದ್ದರೋ ಅವರಿಗೆ ಹೈಕಮಾಂಡ್ ಟಿಕೆಟ್ ಕೊಟ್ಟಿದೆ. ಭವಿಷ್ಯದ ಹಿತದೃಷ್ಟಿಯಿಂದ ಇದನ್ನು ನಾವು ಒಪ್ಪಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
eesanje/url_46_210_12.txt ADDED
@@ -0,0 +1,6 @@
 
 
 
 
 
 
 
1
+ ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ : ಸಚಿವ ಮಧು ಬಂಗಾರಪ್ಪ
2
+ ಬೆಂಗಳೂರು,ಮಾ.9- ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ, ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯವರಿಗೂ ಗೆಲುವು ಸುಲಭವಲ್ಲ ಎಂಬುದನ್ನು ಮರೆಯಬಾರದು ಎಂದರು.
3
+ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‍ಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ಪಕ್ಷದ ತೀರ್ಮಾನ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಪಕ್ಷದ ಎಲ್ಲರ ಮೇಲೂ ಇದೆ. ಅದನ್ನು ನಾವು ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಹೇಳಿದರು. ಈ ಹಿಂದೆ ಗೀತಾ ಶಿವರಾಜ್‍ಕುಮಾರ್ ಬೇರೆ ಪಕ್ಷದಿಂದ ಸ್ರ್ಪಧಿಸಿದ್ದರು. ಆಗ ಯಶಸ್ವಿಯಾಗಿರಲಿಲ್ಲ. ಈಗ ಕಾಂಗ್ರೆಸ್‍ನಿಂದ ಅಭ್ಯರ್ಥಿಯಾಗಿದ್ದಾರೆ. ಪಕ್ಷ ನಮಗೆ ಒಳ್ಳೆಯ ಸ್ಥಾನಮಾನ ನೀಡಿದೆ. ನಮ್ಮ ಸರ್ಕಾರ ಜನರಿಗೆ ಉತ್ತಮ ಯೋಜನೆಗಳನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಯೊಂದು ಕುಟುಂಬದ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಎಂದರು.
4
+ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಗೀತಾ ಶಿವರಾಜ್‍ಕುಮಾರ್ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿಯಾಗಿ, ಸ್ಟಾರ್ ನಟ ಶಿವರಾಜ್‍ಕುಮಾರ್ ಅವರ ಪತ್ನಿಯಾಗಿ, ನನ್ನ ಅಕ್ಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರಲು ಪಕ್ಷದ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪುನರ್ ಉಚ್ಚರಿಸಿದರು.
5
+ ಚಿತ್ರರಂಗದ ದೊಡ್ಮನೆ ಕುಟುಂಬ ಡಾ.ರಾಜಕುಮಾರ್‍ರವರ ಸೊಸೆ ಗೀತಾ ಶಿವರಾಜ್‍ಕುಮಾರ್ ರಾಜಕೀಯಕ್ಕೆ ಬರುವ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳಾಗಿವೆ. ಪದೇಪದೇ ಅಂತಹುದೇ ಪ್ರಶ್ನೆಗಳು ಅನಗತ್ಯ. ಶಿವರಾಜ್‍ಕುಮಾರ್ ಅವರೇ ಈಗಾಗಲೇ ಇಂತಹ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಗೀತಾ ಅವರು ಮೊದಲು ಬಂಗಾರಪ್ಪ ಅವರ ಪುತ್ರಿ. ಹೀಗಾಗಿ ಅವರು ರಾಜಕೀಯಕ್ಕೆ ಬರುವುದು ಸಹಜ ಎಂದರು.
6
+ ನಾವು ಅನ್ಯ ಪಕ್ಷದಂತೆ ಬೇರೆಯವರ ಹೆಸರಿನಲ್ಲಿ ಮತ ಕೇಳುವುದಿಲ್ಲ. ನಾವು ನಮ್ಮದೇ ಹೆಸರಿನಲ್ಲಿ ಚುನಾವಣೆ ನಡೆಸುತ್ತೇವೆ. ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಬಿಜೆಪಿಯವರು ಚುನಾವಣೆಗೋಸ್ಕರ ಗ್ಯಾರಂಟಿ ಹೇಳುತ್ತಿದ್ದಾರೆ. ನಾವು ಜನರಿಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಹೀಗಾಗಿ ಮತದಾರರು ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ. ತಾಯಂದಿರೇ ಅಸ್ತಿತ್ವಕ್ಕೆ ತಂದಿರುವ ನಮ್ಮ ಸರ್ಕಾರಕ್ಕೆ ಅವರಿಂದಲೇ ಬೆಂಬಲ ಸಿಗುತ್ತದೆ ಎಂದು ಹೇಳಿದರು.
eesanje/url_46_210_2.txt ADDED
@@ -0,0 +1,5 @@
 
 
 
 
 
 
1
+ ಗ್ಯಾರಂಟಿ ಪ್ರಚಾರ ವೆಚ್ಚದ ಶ್ವೇತಪತ್ರಕ್ಕೆ ಎಚ್‍ಡಿಕೆ ಆಗ್ರಹ
2
+ ಬೆಂಗಳೂರು, ಮಾ.10- ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
3
+ ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
4
+ ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
5
+ ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಸಿದ್ದರಾಮಯ್ಯನವರೇ ನಮ್ಮ ನೀರೋ, ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಅವರು ಕಟಕಿಯಾಡಿದ್ದಾರೆ.
eesanje/url_46_210_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸೋಮವಾರ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
2
+ ಬೆಂಗಳೂರು,ಮಾ.9- ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಇದೀಗ ಬಿಜೆಪಿ ಕೂಡಾ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಿದ್ದು, ಬಹುತೇಕ ನಾಳೆ ಅಥವಾ ಸೋಮವಾರ ಪ್ರಕಟಗೊಳ್ಳುವ ಸಂಭವವಿದೆ. ನಾಳೆ ನವದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಕರ್ನಾಟಕದ 20 ಸ್ರ್ಪಧಿಗಳ ಹೆಸರು ಅಂತಿಮವಾಗುವ ಸಾಧ್ಯತೆ ಇದೆ.
3
+ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಳಿಕ ಎರಡನೇ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.
4
+ ಇದೇ ಸಂದರ್ಭದಲ್ಲಿ ಕರ್ನಾಟಕದ 18 ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬರುವ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಸರತ್ತು ನಡೆಸಿದ್ದಾರೆ.
5
+ ಆ ಕಸರತ್ತಿನ ಬಳಿಕ ಕೆಲವು ಕ್ಷೇತ್ರಗಳಿಗೆ ಒಂದು ಹೆಸರು, ಇನ್ನು ಕೆಲವು ಕ್ಷೇತ್ರಗಳಿಗೆ ಒಂದಕ್ಕಿಂತ ಹೆಚ್ಚು ಹೆಸರುಗಳ ಪಟ್ಟಿಯನ್ನು ಸಾಧಕ-ಬಾಧಕಗಳೊಂದಿಗೆ ವರಿಷ್ಠರಿಗೆ ನೀಡಲಾಗಿದೆ. ಈ ಪಟ್ಟಿಯನ್ನು ಮುಂದಿಟ್ಟುಕೊಂಡು ಭಾನುವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ.ಸಂತೋಷ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರನ್ನೊಳಗೊಂಡ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ.
6
+ ಈಗಾಗಲೇ ಕಳೆದ ವಾರ ಪ್ರಕಟಿಸಿದ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 195 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಇದೀಗ ಭಾನುವಾರದ ಸಭೆಯ ಬಳಿಕ ಎರಡನೇ ಪಟ್ಟಿ ಅಂತಿಮಗೊಳಿಸಿ ಸೋಮವಾರ ಅಥವಾ ಮಂಗಳವಾರ ಬಿಡುಗಡೆ ಮಾಡುವ ಉದ್ದೇಶವಿದೆ. ಇದರಲ್ಲಿ ರಾಜ್ಯದ ಒಟ್ಟು 28 ಲೋಕಸಭಾಕ್ಷೇತ್ರಗಳ ಪೈಕಿ ಗೊಂದಲವಿಲ್ಲದ ಅಥವಾ ಇತ್ಯರ್ಥಗೊಳ್ಳುವ 18 ರಿಂದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಭವವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
7
+ ಮಿತ್ರ ಪಕ್ಷ ಜೆಡಿಎಸ್‍ಗೆ ಮೂರರಿಂದ ನಾಲ್ಕು ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಚರ್���ೆ ನಡೆದಿದ್ದು, ಅಧಿಕೃತವಾಗಿ ಅಂತಿಮಗೊಂಡಿಲ್ಲ. ಈ ಸಂಬಂಧ ಮಾತುಕತೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಆ ಮಾತುಕತೆ ವಿಳಂಬವಾದಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳ ಬಗ್ಗೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಿಲ್ಲ. ಅಂಥ ನಾಲ್ಕೈದು ಕ್ಷೇತ್ರಗಳನ್ನು ಮೂರನೇ ಪಟ್ಟಿಯಲ್ಲಿ ಘೋಷಿಸಬಹುದು ಎನ್ನಲಾಗಿದೆ.
8
+ ಕರ್ನಾಟಕಕ್ಕೆ ಸಂಬಂಧಿಸಿದಂತೆ ಎಲ್ಲಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾದ ಸ್ಥಾನಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೂರು ವರದಿಗಳನ್ನು ಮುಂದಿಟ್ಟುಕೊಂಡು ಕ್ಷೇತ್ರವಾರು ಸಮೀಕ್ಷೆಗಳನ್ನು ತಾಳೆ ಹಾಕಲಾಗಿದೆ. ಪ್ರತಿ ಕ್ಷೇತ್ರದ ಬಗ್ಗೆ ರಾಜ್ಯ ನಾಯಕರ ಅಭಿಪ್ರಾಯ ಪಡೆಯಲಾಗಿದೆ. ಮಾತುಕತೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಇಂದು ಕೂಡ ಬಿಜೆಪಿ ಹೈಕಮಾಂಡ್ ಸಭೆ ನಡೆಸಿದೆ. ಆದರೆ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಯಾರಿಗೆ ಕೊಕ್ ನೀಡಲಾಗುತ್ತದೆ? ಯಾರಿಗೆ ಮತ್ತೆ ಟಿಕೆಟ್ ಸಿಗುತ್ತದೆ ಎಂಬ ಗುಟ್ಟನ್ನು ಅಮಿತ್ ಶಾ ಬಿಟ್ಟುಕೊಟ್ಟಿಲ್ಲ.
9
+ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಜೆಡಿಎಸ್ ಪಾಲಾಗುವ ಸಂಭವ ಹೆಚ್ಚಿದೆ. ಈ ಬಗ್ಗೆ ಬಿಜೆಪಿ ಸಿಇಸಿ ಸಭೆಯಲ್ಲಿ ಚರ್ಚೆ ನಡೆದಿದೆ. ಮೂರು ದಿನಗಳ ಕಾಲ ದೆಹಲಿಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಮತ್ತಿತರ ನಾಯಕರು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸಾಗಿದ್ದಾರೆ. ನಾಳೆ ಬೆಳಿಗ್ಗೆ ದೆಹಲಿಗೆ ತೆರಳುವ ಸಾಧ್ಯತೆ ಹೆಚ್ಚಿದೆ.
10
+ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಮಾಜಿ ಸಚಿವರುಗಳಾದ ಡಾ.ಕೆ.ಸುಧಾಕರ್, ಸಿ.ಟಿ.ರವಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳಿಗೆ ಟಿಕೆಟ್ ಸಿಗುವುದರ ಬಗ್ಗೆ ಕೊನೆ ಕ್ಷಣದವರೆಗೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇದೇ ರೀತಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಉತ್ತರ ಕನ್ನಡದ ಸಂಸದ ಅನಂತಕುಮಾರ್ ಹೆಗಡೆ, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್‍ಕಟೀಲ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರುಗಳ ರಾಜಕೀಯ ಭವಿಷ್ಯವೂ ಏನಾಗಲಿದೆ ಎಂಬುದರ ಬಗ್ಗೆ ತೀರ್ಮಾನವಾಗಲಿದೆ.
11
+ ಯಾರಿಗೆ ಕೊಕ್ ಸಾಧ್ಯತೆ? :ಶ್ರೀನಿವಾಸ್ ಪ್ರಸಾದ್ (ಚಾಮರಾಜನಗರ), ದೇವೇಂದ್ರಪ್ಪ (ಬಳ್ಳಾರಿ), ಮಂಗಳಾ ಅಂಗಡಿ (ಬೆಳಗಾವಿ), ಜಿಎಸ್ ಬಸವರಾಜು (ತುಮಕೂರು), ಶಿವಕುಮಾರ್ ಉದಾಸಿ (ಹಾವೇರಿ), ರಮೇಶ್ ಜಿಗಜಿಣಗಿ (ವಿಜಯಪುರ), ಸಂಗಣ್ಣ ಕರಡಿ (ಕೊಪ್ಪಳ), ನಾರಾಯಣಸ್ವಾಮಿ (ಚಿತ್ರದುರ್ಗ), ರಾಜÁ ಅಮರೇಶ್ವರ ನಾಯಕ್ (ರಾಯಚೂ���ು).
12
+ ಘೋಷಣೆಯಾಗಬಹುದಾದ ಕ್ಷೇತ್ರಗಳು :ಶಿವಮೊಗ್ಗ, ಚಿಕ್ಕೋಡಿ, ದಾವಣಗೆರೆ, ಕಲಬುರಗಿ, ಬಳ್ಳಾರಿ, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ.
eesanje/url_46_210_4.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದೆಲ್ಲೆಡೆ ಮೋದಿ ಅಲೆ ಇದೆ : ವಿಜಯೇಂದ್ರ
2
+ ಬೆಂಗಳೂರು,ಮಾ.9- ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರಕಾರ ಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ ಎಂದು ವಿಶ್ಲೇಷಿಸಿದರು.
3
+ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇಂದು, ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ರಾಜ್ಯಾಧ್ಯಕ್ಷನಾಗಿ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು. ಹಿಂದೆ ಬಾರದಂಥ ಅತ್ಯುತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ನುಡಿದರು.
4
+ ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲ ವಿವರ ಲಭಿಸಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಲಭಿಸಲಿದೆ ಎಂದು ಅವರು ಹೇಳಿದರು.
5
+ ಡಿ.ಕೆ.ಶಿವಕುಮಾರ್‍ರ ನಡವಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು, ಬೆಂಗಳೂರಿನಲ್ಲಿ 15- 20 ದಿನಗಳಿಂದ ನೀರಿನ ತೀವ್ರ ಸಮಸ್ಯೆ ಇದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 14ಕ್ಕೂ ಹೆಚ್ಚು ನೋಡಲ್ ಅಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅದರ ಅರ್ಥ ಏನು? ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ ಎಂದು ಪ್ರಶ್ನಿಸಿದರು.
eesanje/url_46_210_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕಾಂಗ್ರೆಸ್ ಪಟ್ಟಿಗೆ ಬಹುತೇಕ ಕ್ಷೇತ್ರಗಳಿಗೆ ಸಹಮತ
2
+ ಬೆಂಗಳೂರು,ಮಾ.9- ಕಾಂಗ್ರೆಸ್ ಅಳೆದು ತೂಗಿ ನಿನ್ನೆ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅದರಲ್ಲಿ ತುಮಕೂರು , ಮಂಡ್ಯ ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಬಹುತೇಕ ಸಹಮತ ಕಂಡುಬಂದಿದೆ. ಕಳೆದ ತಿಂಗಳಷ್ಟೇ ಬಿಜೆಪಿಯಿಂದ ಕಾಂಗ್ರೆಸ್‍ಗೆ ವಲಸೆ ಬಂದ ಮುದ್ದಹನುಮೇಗೌಡರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆ ಮಾಡುವ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ಕೈ ಮೇಲಾಗಿದೆ.
3
+ ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್‍ಗಾಗಿ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರ ಪುತ್ರ ಸಂತೋಷ್, ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಪತ್ನಿ ಭಾರತಿ, ಕಾಂಗ್ರೆಸ್ ಮುಖಂಡರಾದ ಮುರಳೀಧರ್ ಹಾಲಪ್ಪ, ನಿಕೇತ್‍ರಾಜ್ ಮೌರ್ಯ ಸೇರಿದಂತೆ ಹಲವು ಮಂದಿ ಆಕಾಂಕ್ಷಿಗಳಿದ್ದರು. ಆದರೆ ಅವರೆಲ್ಲರನ್ನೂ ಕಡೆಗಣಿಸಿದ ಸಚಿವ ರಾಜಣ್ಣ ಪದೇಪದೇ ಪಕ್ಷ ಬದಲಾಯಿಸುವ ಎಸ್.ಪಿ.ಮುದ್ದಹನುಮೇಗೌಡರನ್ನು ಕಾಂಗ್ರೆಸ್‍ಗೆ ಮರಳಿ ತರಲು ಮುತುವರ್ಜಿ ವಹಿಸಿದ್ದರು. ಒಂದು ಹಂತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದರಾದರೂ ಅವರನ್ನು ಮನವೊಲಿಸಿ ಮುದ್ದಹನುಮೇಗೌಡರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ರಾಜಣ್ಣ ಹೈಕಮಾಂಡ್ ಮೇಲೂ ಪ್ರಭಾವ ಬೀರಿ ಮೊದಲ ಪಟ್ಟಿಯಲ್ಲೇ ಟಿಕೆಟ್ ಕೊಡಿಸುವ ಮೂಲಕ ಎಲ್ಲಾ ವಿರೋಧಗಳನ್ನು ಬದಿಗೆ ಸರಿಸುವ ಯತ್ನ ನಡೆಸಿದ್ದಾರೆ. ಕೆಲವೊಮ್ಮೆ ವಿವಾದಿತ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸವಾಗುವ ರಾಜಣ್ಣ, ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಿಸುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ರಯತ್ನ ಮಾಡಿದ್ದಾರೆ.
5
+ ತುಮಕೂರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದರ ಕೀರ್ತಿಗೆ ರಾಜಣ್ಣ ಭಾಜನರಾಗಲಿದ್ದಾರೆ. ಒಂದು ವೇಳೆ ಸೋತರೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರರಾಗಬೇಕಾಗುತ್ತದೆ. ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಒಲ್ಲದ ಮನಸ್ಸಿನಿಂದ ಮುದ್ದಹನುಮೇಗೌಡರ ಗೆಲುವಿಗೆ ಶ್ರಮಿಸಬೇಕಿದೆ.
6
+ ರಾಜಣ್ಣ ಸಂಪುಟ ವಿಸ್ತರಣೆ ಬಳಿಕ ತುಮಕೂರು ಜಿಲ್ಲೆಯ ಉಸ್ತುವಾರಿಗಾಗಿ ಪಟ್ಟುಹಿಡಿದಿದ್ದರು. ಆದರೆ ಪರಮೇಶ್ವರ್ ಅವರ ಪ್ರಭಾವದ ಮುಂದೆ ಸಫಲರಾಗಲಿಲ್ಲ. ಕೊನೆಯ ಹಂತದಲ್ಲಿ ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾದರು. ಅಲ್ಲಿಯೂ ಕೂಡ ಹಿರಿಯ ಕಾಂಗ್ರೆಸಿಗ ಹಾಗೂ ಮಾಜಿ ಶಾಸಕ ಗಂಡಸಿ ಶಿವರಾಂ ಅವರನ್ನು ಏಕವಚನದಲ್ಲಿ ಮಾತನಾಡಿಸುವ ಮೂಲಕ ವಿವಾದಕ್ಕೆ ಗುರಿಯಾದರು. ಗಂಡಸಿ ಶಿವರಾಂ ಹಾಸನ ಲೋಕಸಭಾ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದರೂ ಅದನ್ನು ತಪ್ಪಿಸಿ ಯುವ ನಾಯಕ ಎಂ.ಶ್ರೇಯಸ್ ಪಟೇಲ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್���ಿಯಾಗಿದ್ದಾರೆ.
7
+ ರಾಜಣ್ಣ ಎರಡು ಕ್ಷೇತ್ರಗಳಲ್ಲೂ ತಮ್ಮದೇ ಆದ ರಾಜಕೀಯ ತಂತ್ರಗಾರಿಕೆ ಚಲಾಯಿಸುತ್ತಿದ್ದು, ಹಲವು ಕಾಂಗ್ರೆಸ್ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದ್ದಾರೆ. ಇತ್ತ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಡಿ.ಆರ್.ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು. ಅಲ್ಲಿ ಆನಂದ ಸ್ವಾಮಿ ಗಡ್ಡದೇವರ ಮಠ ಅವರಿಗೆ ಟಿಕೆಟ್ ನೀಡಲಾಗಿದೆ. ಸಣ್ಣಪುಟ್ಟ ಅಸಮಾಧಾನಗಳು ಹೊಗೆಯಾಡುತ್ತಿವೆಯಾದರೂ ಅದನ್ನು ನಿಭಾಯಿಸಬಹುದು ಎಂದು ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
8
+ ಶಿವಮೊಗ್ಗದಲ್ಲಿ ಗೀತಾ ಶಿವರಾಜ್‍ಕುಮಾರ್ ಅವರಿಗೆ ಟಿಕೆಟ್ ಸಿಗಲಿದೆ ಎಂದು ಮೊದಲಿನಿಂದಲೂ ಇದ್ದ ನಿರೀಕ್ಷೆ ಯಶಸ್ವಿಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ವೆಂಕಟರಾಮೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿರುವುದು ಕೆಲವು ಆಕಾಂಕ್ಷಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಹೊಣೆ ಹೊರಬೇಕೆಂದು ಸ್ಪಷ್ಟ ಸೂಚನೆಗಳಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಶಾಸಕರ ಸಹಮತದ ಮೇರೆಗೆ ಸ್ಟಾರ್ ಚಂದ್ರು ಎಂದೇ ಗುರುತಿಸಿಕೊಂಡಿರುವ ವೆಂಕಟರಮಣಗೌಡ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
9
+ ಬಿಜಾಪುರದ ರಾಜು ಅಲಗೂರು ಅವರಿಗೆ ಹೆಚ್ಚಿನ ವಿರೋಧಗಳು ಕಂಡುಬರುತ್ತಿವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಹೆಸರು ಮೊದಲ ಪಟ್ಟಿಯಲ್ಲೇ ಪ್ರಕಟವಾಗಿದ್ದು, ಪ್ರಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಮೊದಲ ಪಟ್ಟಿಯಲ್ಲೇ ಚಿಕ್ಕಮಗಳೂರು, ಉಡುಪಿ ಕ್ಷೇತ್ರ ಹಾಗೂ ಚಿತ್ರದುರ್ಗ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಬೇಕಿತ್ತು. ಆದರೆ ಚಿಕ್ಕಮಗಳೂರು, ಉಡುಪಿ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿರುವ ಜಯಪ್ರಕಾಶ್ ಹೆಗಡೆ ಇನ್ನೂ ಬಿಜೆಪಿಯಲ್ಲೇ ಇದ್ದಾರೆ. ಅವರ ಪಕ್ಷ ಸೇರ್ಪಡೆ ಬಳಿಕ ಪರಿಗಣಿಸಬಹುದು ಎಂದು ಷರತ್ತು ವಿಸಲಾಗಿದೆ.
10
+ ಚಿತ್ರದುರ್ಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎಲ್.ಚಂದ್ರಪ್ಪ ಆಕಾಂಕ್ಷಿಯಾಗುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಸಿದ್ದರಾಮಯ್ಯನವರ ಆಪ್ತ ಎಚ್.ಆಂಜನೇಯ ಆಕಾಂಕ್ಷಿಯಾಗಿದ್ದು, ಅವರ ಲಾಬಿಯಿಂದಾಗಿ ಮೊದಲ ಪಟ್ಟಿಯಲ್ಲಿ ಚಂದ್ರಪ್ಪ ಅವರ ಹೆಸರು ತಪ್ಪಿಹೋಗಿದೆ ಎಂದು ಹೇಳಲಾಗುತ್ತಿದೆ. ಒಂದೇ ಹೆಸರಿರುವ 15 ಕ್ಷೇತ್ರಗಳ ಪೈಕಿ ಬಹುತೇಕ ಇತ್ಯರ್ಥಗೊಂಡಿದೆ. ಮಾರ್ಚ್ 11 ರಂದು ಕೇಂದ್ರ ಚುನಾವಣಾ ಸಮಿತಿಯ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅಂದು ಮತ್ತಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗಲಿದೆ ಎಂದು ಹೇಳಲಾಗಿದೆ.
eesanje/url_46_210_6.txt ADDED
@@ -0,0 +1,4 @@
 
 
 
 
 
1
+ ಮನೆ ಬಳಿಯೇ ಕಾಟನ್‍ಪೇಟೆ ರೌಡಿಯ ಭೀಕರ ಹತ್ಯೆ
2
+ ಬೆಂಗಳೂರು, ಮಾ.9- ಮನೆ ಸಮೀಪವೇ ನಡು ರಸ್ತೆಯಲ್ಲಿ ರೌಡಿ ಮೇಲೆ ದಾಳಿ ಮಾಡಿದ ಮೂರ್ನಾಲ್ಕು ಮಂದಿಯ ಗುಂಪು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಫ್ಲವರ್ ಗಾರ್ಡನ್ ನಿವಾಸಿ ಶಿವ ಅಲಿಯಾಸ್ ಶರತ್ (35) ಕೊಲೆಯಾದ ರೌಡಿ. ಕಾಟನ್‍ಪೇಟೆ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ.
3
+ ರಾತ್ರಿ ಹೊರಗೆ ಹೋಗಿದ್ದ ರೌಡಿ ಶಿವ 9.30ರ ಸುಮಾರಿನಲ್ಲಿ ಮನೆಗೆ ನಡೆದು ಹೋಗುತ್ತಿದ್ದಾಗ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಈತ ಬರುವುದನ್ನೇ ಕಾದು ಹೊಂಚು ಹಾಕಿ ಇನ್ನೇನು ಮನೆ ಸ್ವಲ್ಪ ದೂರ ಇರುವಂತೆಯೇ ಏಕಾಏಕಿ ದಾಳಿ ಮಾಡಿ ಮಚ್ಚು, ಲಾಂಗ್, ಡ್ರ್ಯಾಗರ್‍ನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
4
+ ಹಲ್ಲೆಯಿಂದ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೌಡಿ ಶಿವನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಕಾಟನ್‍ಪೇಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧಕಾರ್ಯ ಕೈಗೊಂಡಿದ್ದಾರೆ. ಹಳೆ ದ್ವೇಷದಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
eesanje/url_46_210_7.txt ADDED
@@ -0,0 +1,3 @@
 
 
 
 
1
+ ಸುದೀರ್ ಮುರೊಳ್ಳಿಗೆ ಎಂಪಿ ಟಿಕೆಟ್ ನೀಡಲು ಒತ್ತಾಯ
2
+ ಚಿಕ್ಕಮಗಳೂರು, ಮಾ.9- ಶೃಂಗೇರಿಯ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆನಡೆಸಿ ಸುದೀರ್ ಮುರೊಳ್ಳಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ರಾಜ್ಯದ ಹಾಗು ರಾಷ್ಟ್ರದ ನಾಯಕರನ್ನು ಒತ್ತಾಯಿಸಲಾಯಿತು. ಪಕ್ಷಕ್ಕಾಗಿ ದುಡಿಯುತ್ತಿರುವ ಹಾಗು ರಾಜಕಾರಣ , ಸಾಹಿತ್ಯ , ಕಾನೂನು , ಆಡಳಿತ , ಎಲ್ಲದರಲ್ಲೂ ಅನುಭವ ವಿರುವ ಯುವ ಮುಂದಾಳು ಮುರೊಳ್ಳಿಗೆ ಟಿಕೆಟ್ ಕೊಟ್ಟರೆ ಎರಡು ಜಿಲ್ಲೆಯ ಜನ ತುಂಬಾ ಹುರುಪಿನಿಂದ ಕೆಲಸ ಮಾಡುತ್ತಾರೆ ಹಾಗಾಗಿ ಮುರೊಳ್ಳಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
3
+ ಈಗಾಗಲೇ ಉಡುಪಿಯಾ ಪರಾಜಿತ ಅಭ್ಯರ್ಥಿಗಳು ಉಡುಪಿ ಜಿಲ್ಲಾ ಯುವ ಅಧ್ಯಕ್ಷರು ,ಉಡುಪಿ ಬ್ಲಾಕ ಅದ್ಯಕ್ಶರು , ಏನ್ ಎಸ್ ಐ ಯು ಅಧ್ಯಕ್ಷರು, ಚಿಕ್ಕಮಗಳೂರಿನ ಶಾಸಕರುಗಳು ಸುದೀರ್ ಮುರೊಳ್ಳಿಗೆ ಬೆಂಬಲ ನೀಡಿದ್ದು ಜೊತೆಗೆ ಶೃಂಗೇರಿ ಕ್ಷೇತ್ರದ ಟಿ ಡಿ ರಾಜೇಗೌಡರು ಮುಖ್ಯಮಂತ್ರಿ ,ಉಪ ಮುಖ್ಯ ಮಂತ್ರಿಗಳಿಗೆ , ಪತ್ರ ಬರೆದು ಸುದೀರ್ ಮುರೊಳ್ಳಿಗೆ ಟಿಕೆಟ್ ಕೊಡುವಂತೆ ಒತ್ತಾಯಿಸಿದ್ದಾರೆ ಹಾಗಾಗಿ ಕಾರ್ಯಕರ್ತರಾಗಿ ನಾವು ಕೂಡ ಸಭೆನಡೆಸಿ ವರಿಷ್ಠರಿಗೆ ಒತ್ತಾಯಿಸುತ್ತಿದ್ದೇವೆ ಎಂದು ಸಭೆಯಲ್ಲಿ ನೆರೆದಿದ್ದ ಎಲ್ಲಾ ಕಾರ್ಯಕರ್ತರು ಒಕ್ಕೊರಲಿನಿಂದ ತಿಳಿಸಿದರು.
eesanje/url_46_210_8.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದ ಜನ ಬರಗಾಲದ ನೋವನ್ನು ಅನುಭವಿಸುತ್ತಿದ್ದಾರೆ : ಅಶೋಕ್
2
+ ಬೆಂಗಳೂರು,ಮಾ.9- ರಾಜ್ಯದಲ್ಲಿ ಜನರು ಕಳೆದ 5 ತಿಂಗಳುಗಳಿಂದ ಬರಗಾಲದ ನೋವನ್ನು ಅನುಭವಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲಪೀಡಿತ ಎಂದು ಘೋಷಿಸುವ ಮೊದಲು ಅಳೆದು ತೂಗಿ 3 ತಿಂಗಳು ಮುಂದೆ ಹಾಕಿದ್ದರು. ರಾಜ್ಯ ಸರಕಾರದಲ್ಲಿ ಹಣ ಇಲ್ಲದ ಕಾರಣ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರು ಎಂದು ಆಕ್ಷೇಪಿಸಿದರು.
3
+ ಜನರು ಗುಳೆ ಹೋಗುತ್ತಿದ್ದಾರೆ ಎಂದರೆ ಸರಕಾರ ಒಪ್ಪುತ್ತಿಲ್ಲ. ಹಾಗಿದ್ದರೆ ಮನೆಗಳಿಗೆ ಯಾಕೆ ಬೀಗ ಹಾಕಿದ್ದಾರೆ ಎಂದು ಪ್ರಶ್ನಿಸಿದರು. ಹಳ್ಳಿಗಳಲ್ಲಿ ಕೇವಲ ವಯಸ್ಸಾದವರು ಇದ್ದಾರೆ. ಯುವಕರು, ಮಧ್ಯ ವಯಸ್ಕರರು ಹಳ್ಳಿಗಳಲ್ಲಿ ಇಲ್ಲ. ಹಾಗಿದ್ದರೆ ಅವರು ಎಲ್ಲಿದ್ದಾರೆ ಎಂದು ಕೇಳಿದರು. ಗೋವಾ, ಮಂಗಳೂರು, ಹೈದರಾಬಾದ್ ಕಡೆ ಜನರು ಗುಳೆ ಹೋಗುತ್ತಿದ್ದಾರೆ ಎಂದು ವಿವರಿಸಿದರು.
4
+ ಸರಕಾರವು ಕುಂಭಕರ್ಣ ನಿದ್ರೆಯಲ್ಲಿದೆ. ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದೆ. ಎಲ್ಲವನ್ನೂ ಮುಚ್ಚಿಡುತ್ತಿದೆ. ಬಾಗಿಲು ಹಾಕಿದರೂ ಮುಚ್ಚಿಡುವುದು, ಪಾಕಿಸ್ತಾನ ಜಿಂದಾಬಾದ್ ಎಂದರೂ ಮುಚ್ಚಿಡುತ್ತದೆ. ಬರಗಾಲ ಇಲ್ಲ ಎಂಬಂತೆ ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತಾರಾಷ್ಟ್ರೀಯ ಚಾನೆಲ್ನಲ್ಲಿ ಇದು ಸುದ್ದಿಯಾಗಿದೆ. ಹೀಗಿದ್ದರೂ ಐ.ಟಿ, ಬಿ.ಟಿಯವರು ಬೆಂಗಳೂರಿಗೆ ಹೋಗಲು ಇಷ್ಟ ಪಡುತ್ತೀರಾ ಎಂದು ಆ್ಯಂಕರ್ ಕೇಳಿದ್ದನ್ನು ನಾನು ಕಣ್ಣಾರೆ ನೋಡಿದ್ದೇನೆ. ಕಿವಿಯಾರೆ ಕೇಳಿದ್ದೇನೆ. ಬೆಂಗಳೂರಿನ ಮಾನ ಮರ್ಯಾದೆಯನ್ನು ಈ ಕಾಂಗ್ರೆಸ್ ಸರಕಾರ ಹರಾಜು ಹಾಕಿದೆ ಎಂದು ಟೀಕಿಸಿದರು.
5
+ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಐಟಿ ಸಿಟಿ, ಬಿ.ಟಿ. ಸಿಟಿ ಎಂಬ ಹೆಸರಿದೆ. ಬಿಸಿನೆಸ್ ವಿಷಯದಲ್ಲಿ ಬೆಂಗಳೂರಿಗೆ ಆದ್ಯತೆ ಕೊಡಲಾಗುತ್ತಿತ್ತು ಎಂದ ಅವರು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ನಾವು ಆಗ್ರಹಿಸಿದ್ದೆವು. ಆದರೆ, ಇಂಡಿ ಒಕ್ಕೂಟದ ಭಾಗಿದಾರ ಪಕ್ಷವೆಂಬ ಕಾರಣಕ್ಕೆ ಸ್ಟಾಲಿನ್ ಅವರ ಕೋರಿಕೆ ಮೇರೆಗೆ ನೀರನ್ನು ಬಿಟ್ಟಿದ್ದಾರೆ. ಈಗ ಶೇ 60 ಬೋರ್ವೆಲ್ಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಹಾಹಾಕಾರ ಇದೆ ಎಂದು ವಿವರಿಸಿದರು.
6
+ ಕಾವೇರಿ ನೀರನ್ನೂ ಶೇ 20ರಿಂದ ಶೇ 30ರಷ್ಟು ಕಡಿಮೆ ಮಾಡಿದ್ದಾರೆ. ಆದರೆ, ಇದರ ಕುರಿತು ಅಧಿಕಾರಿಗಳು ಬಾಯಿ ಬಿಡುತ್ತಿಲ್ಲ. ಮುಂದೆ ಮಳೆ ಬರದೆ ಇದ್ದರೆ ಸಮಸ್ಯೆ ತೀವ್ರಗೊಳ್ಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್��ಕ್ಷ ಸಿ.ಕೆ.ರಾಮಮೂರ್ತಿ ಅವರು ಉಪಸ್ಥಿತರಿದ್ದರು.
eesanje/url_46_210_9.txt ADDED
@@ -0,0 +1,4 @@
 
 
 
 
 
1
+ ರಾಮೇಶ್ವರಂ ಕೆಫೆ ಬಾಂಬರ್‌ನ ಮತ್ತಷ್ಟು ಫೋಟೋ ಬಿಡುಗಡೆ ಮಾಡಿದ ಎನ್‍ಐಎ
2
+ ಬೆಂಗಳೂರು, ಮಾ.9- ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿ ಬಂಧನಕ್ಕಾಗಿ ಹರಸಾಹಸ ಪಡುತ್ತಿರುವ ಎನ್‍ಐಎ ಅಧಿಕಾರಿಗಳು ದುಷ್ಕರ್ಮಿಯ ಇನ್ನಷ್ಟು ಫೋಟೋಗಳನ್ನು ಎಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ. ಆರೋಪಿಯ ವಿವಿಧ ಭಂಗಿಯಲ್ಲಿರುವ ನಾಲ್ಕು ಫೋಟೋಗಳನ್ನು ಎನ್‍ಐಎ ಎಕ್ಸ್‍ನಲ್ಲಿ ಬಿಡಗುಡೆ ಮಾಡಿ ಆರೋಪಿಯ ಸುಳಿವು ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
3
+ #. 📞 08029510900, 8904241100 ..@. .  .#../
4
+ ಈಗಾಗಲೇ ಎನ್‍ಐಎ ದುಷ್ಕರ್ಮಿ ಬಗ್ಗೆ ಖಚಿತ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದೆ. ಸುಳಿವು ನೀಡಿದವರ ಹೆಸರು, ವಿಳಾಸವನ್ನು ಗೌಪ್ಯವಾಗಿಡುವುದಾಗಿ ಸಹ ತಿಳಿಸಿದೆ. ಈ ಆರೋಪಿ ಬಗ್ಗೆ ಮಾಹಿತಿ ದೊರೆತಲ್ಲಿ ಶೀಘ್ರವೇ ತಿಳಿಸುವಂತೆ ಎನ್‍ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
eesanje/url_46_211_1.txt ADDED
@@ -0,0 +1,4 @@
 
 
 
 
 
1
+ ಮೈಸೂರು : ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನ ಭೀಕರ ಹತ್ಯೆ
2
+ ಮೈಸೂರು,ಮಾ.9- ಸಾಂಸ್ಕøತಿಕ ನಗರಿಯಲ್ಲಿ ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರ ಭೀಕರವಾಗಿ ಹತ್ಯೆಯಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಅಕ್ಮಲ್ ಕೊಲೆಯಾದ ವ್ಯಕ್ತಿ. ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಆಯರ್ ಬೇಕರಿ ಮುಂಭಾಗ ದುಷ್ಕರ್ಮಿಗಳು ದಾಳಿ ಮಾಡಿ ಹತ್ಯೆಗೈದಿದ್ದಾರೆ.
3
+ ನಿನ್ನೆ ರಾತ್ರಿ ಸುಮಾರು 9.30ರಲ್ಲಿ ಸ್ಕೂಟರ್‍ನಲ್ಲಿ ತೆರಳುತ್ತಿದ್ದ ಅಕ್ಮಲ್‍ರನ್ನು ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದೆ. ಕಾರ್ಯಕ್ರಮವೊಂದರಲ್ಲಿ ಫ್ಲೆಕ್ಸ್ ತೆರವು ಮಾಡಿದ ವಿಚಾರದಲ್ಲಿ ಮತ್ತೊಂದು ಗುಂಪಿನ ವರ್ತನೆ ಖಂಡಿಸಿ ಅಕ್ಮಲ್ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದರು. ಇದೇ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.
4
+ ವಿಷಯ ತಿಳಿಯುತ್ತಿದ್ದಂತೆ ಉದಯಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_211_10.txt ADDED
@@ -0,0 +1,5 @@
 
 
 
 
 
 
1
+ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ರದ್ದುಗೊಳಿಸಿದ ಸರ್ಕಾರ
2
+ ಬೆಂಗಳೂರು,ಮಾ.8- ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ್ದ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ರಾಜ್ಯಸರ್ಕಾರ ರದ್ದುಗೊಳಿಸಿದ್ದು, ಹೈಕೋರ್ಟ್‍ಗೆ ಪ್ರಮಾಣ ಪತ್ರ ಸಲ್ಲಿಸಿದೆ. 2021 ರ ಜುಲೈ 14 ರಂದು ಬಿಜೆಪಿ ಸರ್ಕಾರ ಕರ್ನಾಟಕ ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಸ್ಕೀಮ್ ಅನ್ನು ಅನುಷ್ಠಾನಕ್ಕೆ ತಂದಿತ್ತು. ಸರ್ಕಾರದ ಯೋಜನೆಯಾಗಿದ್ದರಿಂದಾಗಿ ಹಲವಾರು ನವೋದ್ಯಮಗಳು ಈ ಆದೇಶದ ಅನುಸಾರ ಆರಂಭಗೊಂಡಿದ್ದವು.
3
+ ಮತ್ತೊಂದೆಡೆ ಬೈಕ್ ಟ್ಯಾಕ್ಸಿ ಸೇವೆ ನಿಯಮ ಬಾಹಿರ ಎಂಬ ಆದೇಶಗಳಿದ್ದು, ಟ್ಯಾಕ್ಸಿ, ಆಟೋ ಸೇರಿದಂತೆ ತೆರಿಗೆ ಪಾವತಿಸುವ ವಾಹನಗಳ ಮಾಲಿಕರು ಗದ್ದಲ ಎಬ್ಬಿಸಿದ್ದರು. ಹಲವಾರು ಕಡೆ ಇದು ವ್ಯಾಪಕ ಪ್ರತಿಭಟನೆ ಮತ್ತು ಗಲಾಟೆಗಳಿಗೂ ಕಾರಣವಾಗಿತ್ತು. ಬೈಕ್ ಟ್ಯಾಕ್ಸಿಗಳಿಂದಾಗಿ ಆಟೋ ಮತ್ತು ನಾಲ್ಕು ಚಕ್ರದ ಟ್ಯಾಕ್ಸಿ ಸೇವೆಗೆ ನಷ್ಟವಾಗುತ್ತಿದೆ ಎಂಬ ಆಕ್ರೋಶಗಳಿದ್ದವು. ಜೊತೆಯಲ್ಲಿ ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆ ಮಹಿಳೆಯರ ಸುರಕ್ಷತೆಗೆ ಪೂರಕವಾಗಿಲ್ಲ ಎಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಕೆಲವು ಪ್ರಕರಣಗಳೂ ವರದಿಯಾಗಿದ್ದವು.
4
+ ಈ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ನೀಡಿದೆ. ಅದನ್ನು ಆಧರಿಸಿ ರಾಜ್ಯಸಾರಿಗೆ ಇಲಾಖೆ ಮಾರ್ಚ್ 6 ರಂದು ಆದೇಶ ಹೊರಡಿಸಿದ್ದು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿದೆ. ಪೆಟ್ರೋಲ್‍ನಿಂದ ಚಲಿಸುವ ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆಗಳಿಗೆ ಮೊದಲಿನಿಂದಲೂ ನಿರ್ಬಂಧ ಇದೆ.
5
+ ಪರಿಸರಸ್ನೇಹಿಯಾಗಿರುವ ಎಲೆಕ್ಟ್ರಿಕಲ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಜಾರಿಗೊಳಿಸಿದ್ದ ಯೋಜನೆಗೆ ತೀವ್ರ ವಿರೋಧಗಳು ಕೇಳಿಬಂದಿದ್ದವು. ನ್ಯಾಯಾಲಯಗಳಲ್ಲೂ ಪ್ರಕರಣ ದಾಖಲಾಗಿತ್ತು. ರಾಜ್ಯಸರ್ಕಾರ ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್‍ಗೆ ಕೇವಿಯಟ್ ಸಲ್ಲಿಸಿದೆ.
eesanje/url_46_211_11.txt ADDED
@@ -0,0 +1,7 @@
 
 
 
 
 
 
 
 
1
+ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಳಕ್ಕೆ ಕ್ರಮ : ದಯಾನಂದ
2
+ ಬೆಂಗಳೂರು,ಮಾ.8-ಪೊಲೀಸ್ ಇಲಾಖೆಯಲ್ಲಿ ಶೇ.25ರಷ್ಟು ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳು ಇರಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಸಿಬ್ಬಂದಿಗಳ ನಿಯೋಜನೆಗೆ ವಿಶೇಷ ಬಡ್ತಿ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
3
+ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮೈಸೂರು ರಸ್ತೆಯಲ್ಲಿನ ನಗರ ಸಶಸ್ತ್ರ ಮೀಸಲು ಪಡೆ (ಕೇಂದ್ರಸ್ಥಾನ) ಕವಾಯತು ಮೈದಾನದಲ್ಲಿ ನಡೆದ ಮಾಸಿಕ ವಿಶೇಷ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳ ಕವಾಯುತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಇಲಾಖೆಯಲ್ಲಿ ಶೇ.8ರಷ್ಟು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಖ್ಯೆಯನ್ನು ಶೇ.25ಕ್ಕೆ ಹೆಚ್ಚಿಸಲು ಸರ್ಕಾರದ ಉದ್ದೇಶವಾಗಿದೆ. ಗೃಹಸಚಿವರು ಸಹ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಸಿಬ್ಬಂದಿಗಳ ಹೆಚ್ಚಳಕ್ಕೆ ನೇಮಕಾತಿಗಳನ್ನು ಮಾಡಿಕೊಳ್ಳುವ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.
4
+ ಈ ಹಿಂದೆ ಟೈಪಿಂಗ್, ರಿಸಪ್ಷನ್ ಡೆಸ್ಕ್ ಮತ್ತು ಮಹಿಳಾ ಆರೋಪಿಗಳಿದ್ದಾಗ ಮಾತ್ರ ಮಹಿಳಾ ಸಿಬ್ಬಂದಿಗಳನ್ನು ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಇಲಾಖೆಯ ಎಲ್ಲ ಸ್ತರಗಳಲ್ಲೂ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಪಿಸ್ತೂಲ್ ಹಿಡಿದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. ಸಂಚಾರಿ ವಿಭಾಗದಲ್ಲಿ ಮಹಿಳಾ ಸಿಬ್ಬಂದಿಯ ಪಾತ್ರ ಮಹತ್ವವಾಗಿದೆ. ಅವರಿಗೆ ಉತ್ತೇಜನ, ಪ್ರೋತ್ಸಾಹ, ಸ್ಪೂರ್ತಿ, ಹುರಿದುಂಬಿಸುವ ಕಾರ್ಯಗಳನ್ನು ಮಾಡಬೇಕು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ವರ್ಕ್ ಲೈಫ್ ಬ್ಯಾಲೆನ್ಸ್ ಎಂಬ ಪದ ಬಳಕೆ ಪ್ರಚಲಿತವಾಗುತ್ತಿದೆ.
5
+ ಒಬ್ಬ ವ್ಯಕ್ತಿಗೆ ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನ ಸರಿದೂಗಿಸಿಕೊಂಡು ಹೋಗಬೇಕು. ಇಲ್ಲದಿದ್ದರೆ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಪರಿಣಿತರು ವಿಶ್ಲೇಷಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನವಷ್ಟೇ ಅಲ್ಲದೆ ವೃತ್ತಿ ಜೀವನ ಮತ್ತು ಕುಟುಂಬ ಜೀವನವೂ ಇರುತ್ತದೆ. ಪ್ರತಿ ಮಹಿಳೆಯು ಕುಟುಂಬದ ಜವಾಬ್ದಾರಿಯನ್ನು ಹೊಂದಿರುತ್ತಾರೆ. ತಾಯಿಯಾಗಿ, ಪತ್ನಿಯಾಗಿ, ಸಹೋದರಿಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುತ್ತಾರೆ. ಬಹುಮುಖ್ಯವಾಗಿ ತಾಯಿ ಪಾತ್ರ ನಿರ್ವಹಿಸುವುದರಿಂದ ಕುಟುಂಬ ಅವರ ಮೇಲೆ ನಿರ್ಭರಿತವಾಗಿರುತ್ತದೆ. ಅದರಿಂದ ಅವರು ವೃತ್ತಿ ಜೀವನದ ಜೊತೆಗೆ ಕುಟುಂಬ ಜೀವನವನ್ನು ಸಮತೋಲನವಾಗಿ ನಡೆಸಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ಇಲಾಖೆ ಮತ್ತು ಸರ್ಕಾರವು ಸಹಕಾರ ಮತ್ತು ಉತ್ತೇಜನ ನೀಡಬೇಕು ಎಂದರು.
6
+ ಪೆರೇಡ್‍ನಲ್ಲಿ ���ಾಗವಹಿಸಿದ್ದ ಒಟ್ಟು 10 ತಂಡಗಳ ಪ್ರತಿ ಸದಸ್ಯನಿಗೆ ಒಂದು ಸಾವಿರ ರೂ.ನಂತೆ ಮೂರು ಲಕ್ಷ ನಗದು ಮತ್ತು ರಾಣಿ ಚೆನ್ನಮ್ಮ ಪಡೆಗೆ ವಿಶೇಷ 30 ಸಾವಿರ ರೂ. ಸೇರಿ ಒಟ್ಟು 3,30,000 ರೂ. ಬಹುಮಾನ ಘೋಷಣೆ ಮಾಡಿ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗೆ ಪ್ರಶಂಸನಾ ಪತ್ರ ವಿತರಿಸಿದರು.
7
+ ಈ ಮೈದಾನವು ಐತಿಹಾಸಿಕ ದಾಖಲೆಯಾಗಿದ್ದು, 1973ರ ನವೆಂಬರ್ 1ರಂದು ಪೊಲೀಸ್ ಧ್ವಜವನ್ನು ಹಸ್ತಾಂತರ ಮಾಡಿದ ಸುವರ್ಣ ಮಹೋತ್ಸವ ಜೊತೆಗೆ ಇಂದು ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಐತಿಹಾಸಿಕವಾಗಲಿದೆ ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇಲಾಖೆಯ ಎಲ್ಲಾ ಮಹಿಳಾ ಸಿಬ್ಬಂದಿಗಳಿಗೆ ಶುಭಾಷಯ ಕೋರಿದರು.
eesanje/url_46_211_12.txt ADDED
@@ -0,0 +1,8 @@
 
 
 
 
 
 
 
 
 
1
+ ಕೆಲ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್
2
+ ಬೆಂಗಳೂರು,ಮಾ.8- ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕೆಲವು ಹಾಲಿ ಸಂಸದರಿಗೆ ವಯಸ್ಸು ಹಾಗೂ ಅನಾರೋಗ್ಯ ಕಾರಣದಿಂದಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಸುಳಿವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿ ಬಗ್ಗೆ ಚರ್ಚೆಯಾಗಿದೆ. ಸವಿಸ್ತಾರವಾಗಿ ವರಿಷ್ಠರ ಜೊತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
3
+ ವರಿಷ್ಠರು ಅಭ್ಯರ್ಥಿಗಳ ಮಾಹಿತಿ ಮತ್ತು ಅವರ ಹಿನ್ನೆಲೆಯನ್ನು ತೆಗೆದುಕೊಂಡಿದ್ದಾರೆ. ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಚರ್ಚೆ ಬಹುತೇಕ ಒಂದು ಹಂತಕ್ಕೆ ಬಂದಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಬೇಕಿದೆ ಎಂದರು. ಹೈಕಮಾಂಡ್ ನಾಯಕರಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರಿಗೆ ಟಿಕೆಟ್ ಯಾರಿಗೆ ಇಲ್ಲ ಅನ್ನೋದು ಮುಖ್ಯ ಅಲ್ಲ. ಯಾರಿಗೇ ಕೊಟ್ಟರೂ ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
4
+ ಈ ಬಾರಿ ಹೊಸ ಮುಖಗಳಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇನ್ನೊಂದು ಸುತ್ತಿನ ಮಾತುಕತೆ ನಡೆದ ಬಳಿಕ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಮೈಸೂರು, ಮಂಡ್ಯ, ಕಲಬುರಗಿ, ಹಾಸನ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಹಾಲಿ ಉತ್ತಮ ಸಂಸದರಿಗೆ ಮತ್ತೊಮ್ಮೆ ಅವಕಾಶ ಕೊಡುವ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದರು.
5
+ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬುದರ ಬಗ್ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಮುಂದಿನ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು. ಜೆಡಿಎಸ್ ನಾಯಕರು ಇನ್ನು ಎರಡು-ಮೂರು ದಿನಗಳಲ್ಲಿ ದೆಹಲಿಗೆ ಹೋಗುತ್ತಾರೆ. ಅವರು ಯಾವ ಕ್ಷೇತ್ರದಲ್ಲಿ ಸೀಟು ಕೇಳುತ್ತಾರೋ ಅದನ್ನು ಬಿಟ್ಟು ಕೊಡುವ ಬಗ್ಗೆ ವರಿಷ್ಠರೊಂದಿಗೆ ಮಾತಾಡುತ್ತಾರೆ. ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ ಎಂದರು.
6
+ ಮಂಡ್ಯದಲ್ಲಿ ಬಿಜೆಪಿಯಿಂದ ಶೇ.500ರಷ್ಟು ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಬಗ್ಗೆ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಮಾತನಾಡಿದ ಅಶೋಕ್, ಸುಮಲತಾ ಅಂಬರೀಶ್ ನಮಗೆ ಬರೀ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಆಡಳಿತ ��ಡಬಿಡಂಗಿ ಸರ್ಕಾರವಾಗಿದೆ. ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ಕೆಆರ್‍ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಟ್ಟಿದ್ದಾರೆ. ಇದೇ ಕಾರಣ ಇವತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಆಗಿರುವುದಕ್ಕೆ ಇಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
7
+ ಬೆಂಗಳೂರಿನ ವಾರ್ಡ್ ಮಟ್ಟದಲ್ಲಿ ಒಂದು ಸಭೆಯನ್ನೂ ಮಾಡಿಲ್ಲ. ಕೋವಿಡ್ ಸಂದರ್ಭದಲ್ಲಿ ಸಭೆ ಮಾಡಿ ಸಮರ್ಥವಾಗಿ ನಿಭಾಯಿಸಿದ್ದೇವೆ. ಕೇಂದ್ರ ಸರ್ಕಾರದ ಮೇಲೆ ಹೇಳುತ್ತೀರಲ್ಲಾ ನಾಚಿಕೆ ಆಗುವುದಿಲ್ಲವೇ? ಎಂದು ಕಿಡಿಕಾರಿದ ಅವರು, ರಾಜ್ಯದಲ್ಲಿ ಕುಡಿಯುವ ನೀರನ್ನು ಒದಗಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಪಾತಾಳಕ್ಕೆ ಇಳಿದಿದೆ ಎಂದು ಆರೋಪಿಸಿದರು.
8
+ ಕಾಂಗ್ರೆಸ್‍ನಲ್ಲಿ ದಲಿತ ಸಿಎಂಗಾಗಿ ಕೂಗು ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಲ್ಲಿರುವ ದಲಿತರನ್ನು ಮುಖ್ಯಮಂತ್ರಿ ಅಲ್ಲ, ಉಪಮುಖ್ಯಮಂತ್ರಿಗಳನ್ನೂ ಮಾಡಲ್ಲ. ಪಾಪ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಎಲ್ಲರು ಕ್ಯೂ ನಲ್ಲಿದ್ದಾರೆ. ಸಿದ್ದರಾಮಯ್ಯ ಮಗ ಬೇರೆ ನಮ್ಮ ಅಪ್ಪನೇ ಐದು ವರ್ಷ ಸಿಎಂ ಅಂತಾರೆ ಎಂದು ಅಶೋಕ್ ತಿರುಗೇಟು ನೀಡಿದರು.
eesanje/url_46_211_2.txt ADDED
@@ -0,0 +1,4 @@
 
 
 
 
 
1
+ ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ : ನಟ ಡಾಲಿ ಧನಂಜಯ್
2
+ ಮಂಡ್ಯ,ಮಾ.9- ಚಲನಚಿತ್ರವೇ ನನ್ನ ಜೀವನ, ನನಗೆ ಅದರಲ್ಲೇ ಆಸಕ್ತಿ, ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ, ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಗಳಿಲ್ಲ ಎಂದು ನಟ ನಿರ್ಮಾಪಕ ಡಾಲಿ ಧನಂಜಯ್ ಹೇಳಿದರು.
3
+ ಜಿಲ್ಲೆಯ ಕೆರೆಗೋಡಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಯವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಸಂದರ್ಭಗಳು ಬಂದಿಲ್ಲ. ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ವೈಯಕ್ತಿಕವಾಗಿ ಭೇಟಿ ಮಾಡಿಲ್ಲ ಎಂದು ಹೇಳಿದರು.
4
+ ಕಳೆದ ವಿಧಾನಸಭೆ ಚುನಾವಣೆಯಲ್ಲೂ ಪ್ರಚಾರಕ್ಕಾಗಿ ನನಗೆ ಆಹ್ವಾನವಿತ್ತು. ಆದರೆ ನಾನು ಭಾಗವಹಿಸಿರಲಿಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಗಳು ಕಡಿಮೆ ಎಂದರು. ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸುವ ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭವಾಗಲಿ. ನಾನು ಯಾವುದೇ ಒಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು.
eesanje/url_46_211_3.txt ADDED
@@ -0,0 +1,6 @@
 
 
 
 
 
 
 
1
+ ಬಳ್ಳಾರಿಯಲ್ಲಿ ಕೆಆರ್‌ಪಿಪಿ ಸ್ಪರ್ಧೆ, ಶ್ರೀರಾಮಲುಗೆ ಚಿಂತೆ
2
+ ಬೆಂಗಳೂರು,ಮಾ.9- ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ದನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ. ಬಳ್ಳಾರಿ ಗ್ರಾಮಾಂತರದಿಂದ ಸ್ರ್ಪಧಿಸಿ ಸೋತಿದ್ದ ಶ್ರೀರಾಮುಲು ಅವರಿಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಆದರೆ ಕಲ್ಯಾಣ ರಾಜ್ಯಪ್ರಗತಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಜನಾದರ್ನ ರೆಡ್ಡಿಯವರು ಹೇಳಿದ್ದಾರೆ.
3
+ ಒಂದು ವೇಳೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮತ ಹಂಚಿಕೆಯಾಗುವ ಭೀತಿ ಶ್ರೀರಾಮುಲುಗೆ ಎದುರಾಗಿದೆ. ಇದು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಆತಂಕಗೊಂಡಿರುವ ಶ್ರೀರಾಮುಲು ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ರೆಡ್ಡಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
4
+ ಬಳ್ಳಾರಿಯಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ರೆಡ್ಡಿ ಅವರು ಕಳೆದ ವಾರ ಸಭೆ ಕರೆದಿದ್ದರು ಎಂದು ಕೆಆರ್‍ಪಿಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ಕೆಆರ್‍ಪಿಪಿ ಆರಂಭಿಸಿದಾಗ ಶ್ರೀರಾಮುಲು ಅವರು ಬೆಂಬಲ ನೀಡದಿರುವ ಬಗ್ಗೆ ಸಭೆಯಲ್ಲಿ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಮತ್ತು ರೆಡ್ಡಿ ಪತ್ನಿ ಅವರ ಅರುಣಾ ಲಕ್ಷ್ಮಿ ವಿರುದ್ಧ ಕೆಲಸ ಮಾಡಿದ್ದರು. ಈಗ ನಮ್ಮ ಸಹಾಯ ಅಪೇಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
5
+ ಜನಾರ್ದನ ರೆಡ್ಡಿ ಅವರು ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಶ್ರೀರಾಮುಲು ಅವರನ್ನು ಬೆಂಬಲಿಸಿದ್ದರು. ಆದರೆ, ಕಳೆದ ಕೆಲವು ವರ್ಷಗಳಿಂದ ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಶ್ರೀರಾಮುಲು ರೆಡ್ಡಿ ಪರವಾಗಿ ನಿಲ್ಲಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ನಮ್ಮ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ ಎಂದು ಹೇಳಿದ್ದಾರೆ.
6
+ ಕೆಲ ದಿನಗಳ ಹಿಂದಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದರು. ಇದೀಗ ಶ್ರೀರಾಮುಲು ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಿಲ್ಲುವುದು ಹಾಗೂ ಮತಗಳನ್ನು ವಿಭಜಿಸುವ ರಾಜಕೀಯ ತಂತ್ರವಾಗಿದೆ ಎಂದು ಹೇಳಲಾಗುತ್ತಿದೆ.
eesanje/url_46_211_4.txt ADDED
@@ -0,0 +1,5 @@
 
 
 
 
 
 
1
+ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಇನ್ನಷ್ಟು ಅಭ್ಯರ್ಥಿಗಳ ಪ್ರಕಟಣೆ : ಡಿಕೆಶಿ
2
+ ಬೆಂಗಳೂರು,ಮಾ.9- ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
3
+ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನು ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.
4
+ 17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದಿರಿ ಎಂದು ಕೇಳಿದಾಗ, ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ.ವೇಣುಗೋಪಾಲ, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಚರ್ಚೆ ಮಾಡುತ್ತಾರೆ.
5
+ ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಕೇಳಿದಾಗ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ತಿಳಿಸಿದರು.
eesanje/url_46_211_5.txt ADDED
@@ -0,0 +1,6 @@
 
 
 
 
 
 
 
1
+ 2 ತಿಂಗಳಿನಿಂದ ಮಳೆಯಾಗಿಲ್ಲ, ಬೇಸಿಗೆ ಬಿಸಿಲ ಅಬ್ಬರ
2
+ ಬೆಂಗಳೂರು : ಬೇಸಿಗೆ ಆರಂಭದಲ್ಲೇ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿ ಸುವಂತಾಗಿದೆ. ಕಳೆದ 2 ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗಿಲ್ಲ. ಅಲ್ಲದೆ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ತೀವ್ರ ಬರ ಉಂಟಾಗಿರುವುದರಿಂದ ವಾತಾವರಣ ದಲ್ಲಿ ಸರಾಸರಿ 1 ರಿಂದ 2 ಡಿ.ಸೆ. ಹೆಚ್ಚಳವಾಗಿದೆ.
3
+ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೊಂದು ವಾರದಲ್ಲಿ 2-3 ಡಿ.ಸೆ. ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ 39.1 ಡಿ.ಸೆ. ನಷ್ಟು ಗರಿಷ್ಟ ಉಷ್ಣಾಂಶ ದಾಖಲಾಗಿದ್ದು, ಬೆಳಗಾವಿಯಲ್ಲಿ ಗರಿಷ್ಟ ಉಷ್ಣಾಂಶ 15.8 ಡಿ.ಸೆ. ನಷ್ಟು ದಾಖಲಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಜನರು ಎಳನೀರು, ಮಜ್ಜಿಗೆ ಸೇರಿದಂತೆ ತಂಪು ಪಾನೀಯ ಹಾಗೂ ಕಲ್ಲಂಗಡಿ, ಕರಬೂಜ ಸೇರಿದಂತೆ ವಿವಿಧ ಹಣ್ಣುಗಳ ಮೊರೆ ಹೋಗುತ್ತಿರುವುದು ಎಲ್ಲೆಡೆ ಕಂಡುಬರುತ್ತಿದೆ.
4
+ ಬಿಸಿಲಿನಿಂದ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ಹೆಚ್ಚು ನೆರಳಿನ ವಾತಾವರಣದಲ್ಲಿ ಕೆಲಸ ಮಾಡುವುದು ಆರೋಗ್ಯಕರ. ಇಲ್ಲದಿದ್ದರೆ ಪ್ರಖರವಾದ ಬಿಸಿಲು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಾರ್ಚ್ 14 ರವರೆಗೂ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಂಡುಬರುತ್ತಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
5
+ ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಬಾಗಲಕೋಟೆ, ಧಾರವಾಡ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 36 ಡಿ.ಸೆ. ನಿಂದ 39 ಡಿ.ಸೆ. ವರೆಗೂ ದಾಖಲಾಗುತ್ತಿದೆ. ಅದೇ ರೀತಿ ಕರಾವಳಿಯಲ್ಲಿ 34 ರಿಂದ 36 ಡಿ.ಸೆ. ನಷ್ಟು ಗರಿಷ್ಟ ಉಷ್ಣಾಂಶ ಕಂಡುಬರುತ್ತಿದ್ದರೆ, ದಕ್ಷಿಣ ಒಳನಾಡಿನಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. 35 ರಿಂದ 37 ಡಿ.ಸೆ.ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ಉಷ್ಣಾಂಶ ಈಗಾಗಲೇ 35 ಡಿ.ಸೆ. ಗಡಿ ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
6
+ ಸರಾಸರಿಗಿಂತ ಸುಮಾರು 2 ಡಿ.ಸೆ. ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಲು ರಾಜ್ಯದಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ಬರ ಕಾರಣ ಎನ್ನಲಾಗಿದೆ. ಅಂತರ್ಜಲ ಕುಸಿತ, ಕೆರೆಕಟ್ಟೆಗಳು ಬತ್ತಿರುವುದು, ಭೂಮಿಯಲ್ಲಿ ತೇವಾಂಶ ಕಡಿಮೆಯಾಗಿರುವುದು, ನಿರಂತರವಾಗಿ ಬಿಸಿಲು ಇರುವುದರಿಂದ ವಾತಾವರಣದಲ್ಲಿನ ತೇವಾಂಶವು ಕಡಿಮೆಯಾಗಿದೆ. ಇದರಿಂದ ಬೆಳಿಗ್ಗೆಯಿಂದಲೇ ಜನರು ಸೆಖೆಯಿಂದ ಬಳಲುವಂತಾಗಿದೆ. ಮಾರ್ಚ್-ಏಪ್ರಿಲ್‍ನಲ್ಲಿ ಪೂರ್ವ ಮುಂಗಾರು ಮಳೆಯಾಗುವುದು ವಾಡಿಕೆ. ಆದರೆ ಕಳೆದ ಎರಡು ತಿಂಗಳಿನಿಂದ ಬೇಸಿಗೆ ಮಳೆಯು ಬಿದ್ದಿಲ್ಲ. ಸದ್ಯಕ್ಕೆ ಇನ್ನೆರಡು ವಾರ ಅಕಾಲಿಕ ಮಳೆಯಾಗುವ ಸಾಧ್ಯತೆಗಳು ವಿರಳ ಎನ್ನುತ್ತಾರೆ ಹವಾಮಾನ ತಜ್ಞರು.
eesanje/url_46_211_6.txt ADDED
@@ -0,0 +1 @@
 
 
1
+ ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್
eesanje/url_46_211_7.txt ADDED
@@ -0,0 +1,6 @@
 
 
 
 
 
 
 
1
+ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮುತ್ತಿಗೆ
2
+ ಮೈಸೂರು,ಮಾ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣದಲ್ಲಿ ಜನಸ್ಪಂದನ ಸಭೆ ನಡೆಸಲು ಮುಂದಾಗಿದ್ದ ಮಾಜಿ ಶಾಸಕ ಯತೀಂದ್ರ ಅವರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ವಾಪಸ್ ಕಳುಹಿಸಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ ಅವರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
3
+ ಕಳೆದ ಚುನಾವಣೆಯಲ್ಲಿ ಯತೀಂದ್ರ ಇದೇ ಕ್ಷೇತ್ರವನ್ನು ಪ್ರತಿನಿಸಿದ್ದರು. ಈ ಬಾರಿ ತಮ್ಮ ತಂದೆ ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಯತೀಂದ್ರ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಪ್ರತಿಯೊಂದು ಗ್ರಾಮಕ್ಕೂ ಖುದ್ದು ತೆರಳುವ ಯತೀಂದ್ರ ಜನರ ಅಹವಾಲುಗಳನ್ನು ಕೇಳುತ್ತಿದ್ದಾರೆ. ಅದೇ ರೀತಿ ಮುದ್ದುಬೀರನಹುಂಡಿಗೆ ಆಗಮಿಸಿದಾಗ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಒಳಗೆ ಬರದಂತೆ ನಿರ್ಬಂಧಿಸಿದ್ದಾರೆ.
4
+ ಒಂದು ಹಂತದಲ್ಲಿ ಬಲವಂತವಾಗಿ ಯತೀಂದ್ರ ಜನಸ್ಪಂದನ ನಡೆಸಲು ಮುಂದಾದಾಗ ಸ್ಥಳೀಯರು ಎಳೆದಾಡಿದ್ದಾರೆ. ಈ ಹಂತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಆದರೂ ಗ್ರಾಮಸ್ಥರು ಯಾವುದಕ್ಕೂ ಜಗ್ಗದೇ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ಯತೀಂದ್ರ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ.
5
+ ಗ್ರಾಮದ ರಸ್ತೆ ನಿರ್ಮಾಣದ ವಿಚಾರಕ್ಕೆ ಸಂಬಂಧಪಟ್ಟಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಚುನಾವಣಾ ಕಾಲದಲ್ಲಿ ಆಗಮಿಸುವ ರಾಜಕಾರಣಿಗಳು ಆನಂತರ ಜನರ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.ತೀವ್ರ ಗದ್ದಲದ ನಡುವೆ ಕೂಡ ಯತೀಂದ್ರ ಸಹನೆ ಕಳೆದುಕೊಳ್ಳದೆ ಸಾವಧಾನದಿಂದಲೇ ಗ್ರಾಮಸ್ಥರ ಆಕ್ರೋಶಗಳಿಗೆ ಪ್ರತಿಕ್ರಿಯಿಸಿದರು ಎಂದು ಸ್ಥಳೀಯರು ವಿವರಿಸಿದ್ದಾರೆ.
6
+ ಇತ್ತೀಚೆಗೆ ಸಂಸದ ಪ್ರತಾಪ ಸಿಂಹ ಅವರಿಗೆ ಕ್ಷೇತ್ರದಲ್ಲಿ ಇದೇ ರೀತಿಯ ವಿರೋಧಗಳು ವ್ಯಕ್ತವಾಗಿದ್ದವು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ಹಳೆ ಮೈಸೂರು ಭಾಗದಲ್ಲಿ ವಿಪಕ್ಷಗಳ ಧ್ವನಿ ಏರಿಕೆಯಾಗಿದ್ದು, ಕಾಂಗ್ರೆಸಿಗರಿಗೆ ಕೆಲವು ಕಡೆ ವಿರೋಧಗಳು ಕಂಡುಬರುತ್ತಿವೆ.
eesanje/url_46_211_8.txt ADDED
@@ -0,0 +1,7 @@
 
 
 
 
 
 
 
 
1
+ ಮಿತಿಮೀರಿದ ತುಷ್ಟೀಕರಣ ಆರೋಪಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಆದೇಶ
2
+ ಬೆಂಗಳೂರು,ಮಾ.8- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಅತಿಯಾದ ತುಷ್ಟೀಕರಣ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡುವಂತಹ ಸರ್ಕಾರಿ ಆದೇಶವೊಂದು ಹೊರಬಿದ್ದಿದೆ. ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ(ಕೆಎಸ್‍ಎಫ್‍ಸಿ)ಮೂಲಕ ಶೇ.6ರ ಬಡ್ಡಿ ದರದಲ್ಲಿ 10 ಕೋಟಿ ರೂ. ಸಾಲ ಪಡೆಯುವ ಆದೇಶವನ್ನು ಹೊರಡಿಸಿದೆ.
3
+ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡುವ ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಪಡೆಯುವ ಉದ್ಯಮಿಗಳು ರಾಜ್ಯ ಹಣಕಾಸು ನಿಗಮದ ಆಯಾ ಜಿಲ್ಲಾ ಮಟ್ಟದ ಕಚೇರಿಗಳಿಗೆ ನೇರವಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಯಾವುದೇ ಮಂಜೂರಾತಿ ಸಮಿತಿ ಇರುವುದಿಲ್ಲ. ಕರ್ನಾಟಕ ರಾಜ್ಯ ಹಣಕಾಸು ನಿಗಮದ ಸಾಲ ಮಂಜೂರಾತಿ ನಿಯಮಗಳನ್ವಯ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಮಾಡತಕ್ಕದ್ದು ಎಂದು ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆ ಅೀನ ಕಾರ್ಯದರ್ಶಿ ನಾಗರಾಜ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
4
+ ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ಕೆಎಸ್‍ಎಫ್‍ಸಿ ವತಿಯಿಂದ ಈವರೆಗೆ 5ರಿಂದ 6 ಕೋಟಿ ರೂ. ಸಾಲವನ್ನು ಶೇ.6ರಿಂದ ಶೇ.11.5ರ ಬಡ್ಡಿ ದರದಲ್ಲಿ ಷರತ್ತುಬದ್ದ ಜಾಮೀನಿನೊಂದಿಗೆ ನೀಡುತ್ತಿತ್ತು. ಉದ್ಯಮಶೀಲರು ಸ್ಥಾಪಿಸುವ ಕೈಗಾರಿಕಾ ಘಟಕಗಳಿಗೆ ಸಾಲ ನೀಡುವಾಗ ಮಂಜೂರಾತಿ ಸಮಿತಿಯು ಕೂಲಂಕಷವಾಗಿ ಪರಿಶೀಲಿಸಿ ಬಳಿಕ ಸಾಲವನ್ನು ಮಂಜೂರು ಮಾಡಬೇಕೆಂಬ ನಿಯಮವನ್ನು ಹಾಕಲಾಗುತ್ತಿತ್ತು.
5
+ ಸರ್ಕಾರದ ಅತಿಯಾದ ನಿಯಮಗಳಿಂದಾಗಿ ಬೇಸತ್ತು ಉದ್ಯಮಗಳನ್ನು ಸ್ಥಾಪಿಸಬೇಕೆಂದು ಮುಂದೆ ಬರುತ್ತಿದ್ದ ಮಹಿಳೆಯರು ಹಿಂದೇಟು ಹಾಕುತ್ತಿದ್ದರು. ಬ್ಯಾಂಕ್‍ನ ನಿಯಮಗಳನ್ನು ನೋಡಿ ಸಾಲ ಪಡೆಯುವುದೇ ಬೇಡ ಎಂಬ ತೀರ್ಮಾನಕ್ಕೆ ಬರುತ್ತಿದ್ದರು. ಇದೀಗ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಹಜ್ ಮತ್ತು ವಕ್ ಇಲಾಖೆ ಹೊರಡಿಸಿರುವ ಆದೇಶವು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕೇವಲ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ್ದಾರೆ ಎಂಬ ಒಂದೇ ಕಾರಣಕ್ಕಾಗಿ ಶೇ.6ರ ಬಡ್ಡಿ ದರದಲ್ಲಿ 10 ಕೋಟಿ ರೂ. ಸಾಲವನ್ನು ಮಂಜೂರಾತಿ ಸಮಿತಿಯ ಅನುಮತಿ ಇಲ್ಲದೆ ನೀಡುವಂತೆ ಸೂಚನೆ ಕೊಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
6
+ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ಉದ್ಯಮ ಸ್ಥಾಪನೆ ಮಾಡಲು ಮುಂದೆ ಬರುವವರಿಗೆ ಷರತ್ತುಬದ್ಧ ನಿಯಮಗಳನ್ನು ವಿಧಿಸಿ ಸಾಲ ಮಂಜೂರಾತಿ ನೀಡುತ್ತಿತ್ತು. ಈಗ ಒಂದೇ ಸಮುದಾಯವನ್ನು ಓಲೈಕೆ ಮಾಡಲು ನಿಯಮಗಳನ್ನು ಗಾಳಿಗೆ ತೂರಿ ಅಲ್ಪಸಂಖ್ಯಾತರಿಗೆ ಇಷ್ಟು ದೊಡ್ಡ ಮೊತ್ತದ ಸಾಲವನ್ನು ನೀಡುವ ಔಚಿತ್ಯವಾದರೂ ಏನು ಎಂಬುದು ಬಹುತೇಕ ಮಹಿಳಾ ಉದ್ಯಮಿಗಳ ಮೂಲಭೂತ ಪ್ರಶ್ನೆಯಾಗಿದೆ.ಉದ್ಯಮಿಗಳನ್ನು ಉತ್ತೇಜಿಸುವ ವಿಚಾರದಲ್ಲೂ ಸರ್ಕಾರದ ತಾರತಮ್ಯವೇಕೆ? ಸಮಾನವಾಗಿ ಎಲ್ಲಾ ಉದ್ದಿಮೆದಾರರನ್ನು ಸರ್ಕಾರ ನೋಡಬೇಕಿದೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.
7
+ ಒಂದೊಂದು ವರ್ಗಕ್ಕೆ ಒಂದೊಂದು ರೀತಿಯ ಬಡ್ಡಿ ವಿಧಿಸಿ ಸಾಲ ನೀಡುವುದರ ಹಿಂದಿರುವ ಔಚಿತ್ಯವೇನು? ಎಲ್ಲಾ ಉದ್ದಿಮೆದಾರರಿಗೂ ಏಕರೂಪ ಬಡ್ಡಿ ದರ ನಿಗದಿಪಡಿಸಿ ಸಾಲ ನೀಡುವುದು ಸೂಕ್ತವಲ್ಲವೇ? ಈ ರೀತಿಯ ಸರ್ಕಾರದ ಓಲೈಕೆ ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ಉದ್ಯಮ ವಲಯದಿಂದ ವ್ಯಕ್ತವಾಗಿದೆ.
eesanje/url_46_211_9.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು ಬಾಂಬ್ ಸ್ಪೋಟಕ್ಕೆ ಬಳ್ಳಾರಿಯಲ್ಲಿ ಸಂಚು..!
2
+ ಬೆಂಗಳೂರು,ಮಾ.8- ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಬಳ್ಳಾರಿಯಲ್ಲಿ ಸಂಚು ನಡೆದಿರಬಹುದೆಂಬ ಶಂಕೆ ವ್ಯಕ್ತಪಡಿಸಿ ಎನ್‍ಐಎ ಅಧಿಕಾರಿಗಳ ತಂಡ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿರುವ ಶಂಕಿತ ಉಗ್ರನೊಬ್ಬನನ್ನು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ಈ ಶಂಕಿತ ಉಗ್ರ ಐಸಿಎಸ್‍ನಿಂದ ಪ್ರೇರಣೆಗೊಂಡು ತನ್ನದೇ ಆದ ತಂಡ ಕಟ್ಟಿಕೊಂಡು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ.
3
+ ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್‍ಐಎ ಅಧಿಕಾರಿಗಳು ಕಳೆದ ಡಿಸೆಂಬರ್‍ನಲ್ಲಿ ಈ ಶಂಕಿತ ಉಗ್ರನ ಮನೆ ಮೇಲೆ ದಾಳಿ ಮಾಡಿ ಆತನನ್ನು ಬಂಧಿಸಿ ಮನೆಯಲ್ಲಿ ಅಡಗಿಸಿಟ್ಟಿದ್ದ ರಾಸಾಯನಿಕ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ದುಷ್ಕರ್ಮಿ ನಗರದಿಂದ ತುಮಕೂರು ಮೂಲಕ ಬಳ್ಳಾರಿಗೆ ಹೋಗಿದ್ದಾನೆಂದು ತಿಳಿದುಬಂದಿದೆ.
4
+ ಬಳ್ಳಾರಿಯ ಶಂಕಿತ ಉಗ್ರ ಸುಲೇಮಾನ್ ಮನೆಯಲ್ಲಿ ದಾಳಿ ವೇಳೆ ಸಿಕ್ಕಿದ ರಾಸಾಯನಿಕ ವಸ್ತುಗಳು ಮತ್ತು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿರುವ ಬಾಂಬ್‍ಗೆ ಬಳಸಲಾಗಿರುವ ರಾಸಾಯನಿಕ ವಸ್ತುಗಳು ಒಂದೇ ಎಂಬುದು ತನಿಖೆಯಿಂದ ಗೊತ್ತಾಗಿದೆ. ಆರೋಪಿಯು ಕೆಫೆಯಲ್ಲಿ ಬಾಂಬ್ ಇಟ್ಟ ನಂತರ ಬಳ್ಳಾರಿಗೆ ಹೋಗಿ ನಂತರ ಬೀದರ್-ಭಟ್ಕಳಕ್ಕೆ ಬಸ್‍ಗಳಲ್ಲಿ ಪ್ರಯಾಣಿಸಿ ತಲೆಮರೆಸಿಕೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರು ಸ್ಪೋಟಕ್ಕೆ ಬಳ್ಳಾರಿಯಲ್ಲಿ ಸಂಚು ನಡೆದಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
5
+ ಎನ್‍ಐಎ ಅಧಿಕಾರಿಗಳು ಗುರುವಾರ ರಾತ್ರಿಯಿಡೀ ತುಮಕೂರು, ಬಳ್ಳಾರಿಯಲ್ಲಿ ದುಷ್ಕರ್ಮಿಗಾಗಿ ಶೋಧ ನಡೆಸಿದರು. ಇಂದು ಸಹ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
eesanje/url_46_212_1.txt ADDED
@@ -0,0 +1,4 @@
 
 
 
 
 
1
+ ರಾಷ್ಟ್ರಪತಿಗಳಿಂದ ಗೌರವ ಡಾಕ್ಟರೇಟ್ ಪಡೆದ ಶತಾವಧಾನಿ ಆರ್.ಗಣೇಶ್
2
+ ನವದೆಹಲಿ, ಮಾ.8- ಶತಾವಧಾನಿ ಆರ್.ಗಣೇಶ್ ಅವರಿಗೆ ದೆಹಲಿಯ ಕೇಂದ್ರೀಯ ಸಂಸ್ಕøತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿರುವುದಕ್ಕೆ ಗಣ್ಯಾತಿಗಣ್ಯರು ಶುಭ ಹಾರೈಸಿದ್ದಾರೆ.
3
+ ಗಮಕ, ಅಷ್ಟಾವಧಾನ, ವ್ಯಾಕರಣ ಕಲೆಯಲ್ಲಿ ಅಪ್ರತಿಮ ಸಾಧನೆ ಮಾಡಿರುವ ಆರ್.ಗಣೇಶ್ ಅವರು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದಾರೆ.
4
+ ಸಾರಸ್ವತ ಲೋಕದ ವಿದ್ವತ್ ಮುಕುಟದಂತಿರುವ ಶತಾವಧಾನಿ ಆರ್.ಗಣೇಶ್ ಅವರಿಗೆ ಕೇಂದ್ರೀಯ ಸಂಸ್ಕøತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಘೋಷಿಸಿದ್ದು, ಇದು ಕರ್ನಾಟಕ ರಾಜ್ಯಕ್ಕೆ ಸಂದ ಗೌರವ ಎಂದು ಅನೇಕ ಸಾಹಿತಿಗಳು, ಕಲಾವಿದರು ಪ್ರಶಂಸಿಸಿದ್ದಾರೆ.
eesanje/url_46_212_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಮೇಶ್ವರಂ ಕೆಫೆ ಬಾಂಬರ್ ಪತ್ತೆಗೆ ರಾತ್ರಿಯಿಡೀ ಕಾರ್ಯಾಚರಣೆ
2
+ ಬೆಂಗಳೂರು,ಮಾ.7- ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಎನ್‍ಐಎ ಮತ್ತು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡಗಳು ರಾತ್ರಿ ರಾಜ್ಯದ ಹಲ ವೆಡೆ ಶೋಧ ನಡೆಸಿವೆ. ಆರೋಪಿ ಬಾಂಬ್ ಸ್ಪೋಟಿಸಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ನಂತರ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ತುಮಕೂರು ತದನಂತರ ಬಳ್ಳಾರಿ, ಅಲ್ಲಿಂದ ಭಟ್ಕಳ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚರಿಸಿ ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
3
+ ಈ ಹಿನ್ನೆಲೆಯಲ್ಲಿ ತನಿಖಾ ತಂಡಗಳು ಕೇರಳ, ಗೋವಾ, ಮಹಾರಾಷ್ಟ್ರ, ಮುಂತಾದ ರಾಜ್ಯಗಳಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿವೆ. ಈಗಾಗಲೇ ಎನ್‍ಐಎ ತಂಡಗಳು ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ದಾಳಿ ಮಾಡಿ ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಂಡಿವೆ. ತನಿಖಾ ತಂಡಗಳಿಗೆ ಲಭ್ಯವಾಗಿರುವ ಮಾಹಿತಿ ಆಧಾರದಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿವೆ.
4
+ ಆರೋಪಿಯು ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ನಂತರ ಐಟಿಪಿಎಲ್ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹತ್ತಿ ಕಾಡುಗೋಡಿಯಲ್ಲಿ ಇಳಿದು ಅಲ್ಲಿಂದ ಮೆಜೆಸ್ಟಿಕ್‍ಗೆ ಬಂದು ಅಲ್ಲಿಂದ ಮತ್ತೊಂದು ಬಸ್ ಹತ್ತಿ ರಾಜಾಜಿನಗರದ ಸುಜಾತ ನಿಲ್ದಾಣದಲ್ಲಿ ಇಳಿದಿದ್ದಾನೆ. ಸುಜಾತದಿಂದ ಕೆಎಸ್‍ಆರ್‍ಟಿಸಿ ಬಸ್ ಹತ್ತಿ ತುಮಕೂರಿಗೆ ಹೋಗಿ ಅಲ್ಲಿಂದ ಬಳ್ಳಾರಿಗೆ ಪ್ರಯಾಣಿಸಿದ್ದಾನೆ. ಅಲ್ಲಿಂದ ಮಂತ್ರಾಲಯ-ಗೋಕರ್ಣ ಬಸ್‍ನಲ್ಲಿ ಪ್ರಯಾಣಿಸಿ ಭಟ್ಕಳಕ್ಕೆ ಹೋಗಿ ಅಲ್ಲಿ ತಂಗಿದ್ದು ನಂತರ ಕೇರಳಕ್ಕೆ ಬಸ್‍ನಲ್ಲಿ ಪ್ರಯಾಣಿಸಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ.
5
+ ತುಮಕೂರಿನಲ್ಲಿ ಶೋಧ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸೋಟಿಸಿ ಪರಾರಿಯಾಗಿರುವ ಆರೋಪಿ ನಗರದಲ್ಲಿ ಓಡಾಡಿರುವ ಅನುಮಾನ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆತನ ಪತ್ತೆಗಾಗಿ ಸ್ಥಳೀಯ ಪೊಲೀಸರೊಂದಿಗೆ ಎನ್‍ಐಎ ಅಧಿಕಾರಿಗಳ ತಂಡ ಶೋಧ ನಡೆಸಿದೆ. ಆರೋಪಿಯು ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದನೆಂಬ ಮಾಹಿತಿ ಈ ತಂಡಕ್ಕೆ ಲಭ್ಯವಾದ ಹಿನ್ನಲೆಯಲ್ಲಿ ರಾತ್ರಿ ದಿಢೀರ್ ತೆರಳಿ ಪತ್ತೆ ಕಾರ್ಯದಲ್ಲಿ ತೊಡಗಿದ್ದರು.
6
+ ಎಸ್‍ಪಿ ಅಶೋಕ್ ಹಾಗೂ ಡಿಎಸ್‍ಪಿ ಮತ್ತು ಎನ್‍ಐಎ ಅಧಿಕಾರಿಗಳು ನಗರದ ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆರೋಪಿಯು ತುಮಕೂರಿನಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿರುವುದರಿಂದ ಮಹಾನಗರ ಪಾಲಿಕೆ ಆವರಣದಲ್ಲಿರುವ ಸ್ಮಾರ್ಟ್‍ಸಿಟಿಯ ಸಿಸಿಟಿವಿ ಕಂಟ್ರೋಲ್ ರೂಮ್‍ಗೆ ತೆರಳಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.
7
+ ಅಲ್ಲದೆ ನಗರದ ಹಲವು ರಸ್ತೆಗಳು ಮತ್ತು ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿನ ಸಿಸಿ ಕ್ಯಾಮೆರಾಗಳ ಫುಟೇಜ್‍ಗಳನ್ನು ಪಡೆದುಕೊಂಡು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ. ತಡರಾತ್ರಿವರೆಗೂ ಸ್ಥಳೀಯ ಪೊಲೀಸರು ಎನ್‍ಐಎ ಅಧಿಕಾರಿಗಳ ತಂಡದೊಂದಿಗೆ ಇದ್ದು ತನಿಖೆಗೆ ಸಹಕರಿಸಿದರು. ಆರೋಪಿಯು ಯಾವ ಸ್ಥಳದಲ್ಲಿ ಉಳಿದುಕೊಂಡಿದ್ದ ಎಲ್ಲೆಲ್ಲಿ ಓಡಾಡಿದ್ದದಾನೆ. ಆರೋಪಿಗೆ ಯಾರಾದರೂ ಉಳಿದುಕೊಳ್ಳಲು ನೆರವು ನೀಡಿದ್ದಾರೆಯೆ ಅಥವಾ ಹೋಟೆಲ್‍ನಲ್ಲಿ ತಂಗಿ ಹೋಗಿದ್ದನೇ ಎಂಬಿತ್ಯಾದಿ ಮಾಹಿತಿಗಳನ್ನು ಎನ್‍ಐಎ ಅಧಿಕಾರಿಗಳ ತಂಡ ಸಂಗ್ರಹಿಸುತ್ತಿದೆ.
8
+ ಬಳ್ಳಾರಿ:ತುಮಕೂರಿನಿಂದ ಬಳ್ಳಾರಿಗೆ ಆರೋಪಿ ಹೋಗಿರುವ ಮಾಹಿತಿ ಹಿನ್ನಲೆಯಲ್ಲಿ ಎನ್‍ಐಎ ತಂಡಗಳು ಅಲ್ಲಿಯೂ ಇಂದು ಬೆಳಗಿನ ಜಾವದವರೆಗೂ ಪರಿಶೀಲನೆ ನಡಸಿವೆ. ಬಳ್ಳಾರಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸ್ಥಳಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೇರಳ: ಆರೋಪಿಯು ಬಸ್ ಮೂಲಕ ಕೇರಳಕ್ಕೆ ಪ್ರಯಾಣಿಸಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಲ್ಲಿಯೂ ಸಹ ತನಿಖಾ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಈಗಾಗಲೇ ತನಿಖಾ ತಂಡಗಳು ರಾಜ್ಯದ ವಿವಿಧ ಕಡೆಗಳಲ್ಲಿ ಹಾಗೂ ಹೊರರಾಜ್ಯಗಳಲ್ಲೂ ಆರೋಪಿಗಾಗಿ ಹಗಲಿರುಳು ಹುಡುಕಾಟ ನಡೆಸುತ್ತಿವೆ.
9
+ ಘಟನೆ ಹಿನ್ನೆಲೆ:ಮಾ.1ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಗರದ ರಾಮೇಶ್ವರಂ ಕೆಫೆಗೆ ಹೋದ ಆರೋಪಿಯು ಯಾರಿಗೂ ಸ್ವಲ್ಪವೂ ಅನುಮಾನ ಬಾರದಂತೆ ಇಡ್ಲಿ ತಿಂದು ಕೈ ತೊಳೆಯುವ ಜಾಗದಲ್ಲಿ ಟೈಮರ್ ಬಾಂಬ್ ಇದ್ದ ಬ್ಯಾಗ್ ಇಟ್ಟು ಹೋದ ಕೆಲವೇ ನಿಮಿಷಗಳಲ್ಲಿ ಬಾಂಬ್ ಸ್ಪೋಟ ಸಂಭವಿಸಿ ಮಹಿಳೆ ಸೇರಿದಂತೆ 9 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಪೋಟದಿಂದಾಗಿ ಹೋಟೆಲ್‍ನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿತ್ತು.
10
+ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಎಫ್‍ಎಸ್‍ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದಿನಿಂದ ರಾಜ್ಯ ಪೊಲೀಸ್ ತನಿಖಾ ತಂಡಗಳು ಎನ್‍ಐಎ ತಂಡ ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಕಾರ್ಯಾಚರಣೆ ಚುರುಕುಗೊಂಡಿದೆ.
11
+ 10 ಲಕ್ಷ ಬಹುಮಾನ:ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿದೆ. ಆರೋಪಿಯ ಸುಳಿವು ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದೆಂದು ಎನ್‍ಐಎ ಸೂಚಿಸಿದೆ.
eesanje/url_46_212_11.txt ADDED
@@ -0,0 +1,6 @@
 
 
 
 
 
 
 
1
+ ಅಭ್ಯರ್ಥಿ ಆಯ್ಕೆ ಕಗ್ಗಂಟು : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಗೊಂದಲ
2
+ ಬೆಂಗಳೂರು,ಮಾ.7- ಲೋಕಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ರಾಜ್ಯದ ಕ್ಷೇತ್ರಗಳಿಗೆ ಮತ್ತಷ್ಟು ಹುರಿಯಾಳುಗಳನ್ನು ಆಖೈರುಗೊಳಿಸುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ರಾಷ್ಟ್ರಮಟ್ಟದಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕೇಂದ್ರ ಚುನಾವಣಾ ಸಮಿತಿ ಸಭೆ ಸಂಜೆ ನಡೆಯಲಿದ್ದು, ಅದರಲ್ಲಿ ಸದಸ್ಯರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಅಂಬಿಕಾ ಸೋನಿ, ಅಭಿರಂಜನ್ ಚೌಧರಿ, ಡಾ.ಅಮಿ ಯಾಗ್ನಿಕ್, ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಕೆ.ಜೆ.ಜಾರ್ಜ್, ಮಧುಸೂದನ್ ಮಿಸ್ತ್ರಿ, ಡಾ.ಮೊಹಮ್ಮದ್ ಜಾವೇದ್, ಪಿ.ಎಲ್.ಪೂನಿಯಾ, ಪ್ರತಿಮಾ ಸಿಂಗ್, ಸಲ್ಮಾನ್ ಖುರ್ಷಿದ್, ಓಂಕಾರ್ ಮಕ್ರಮ್, ಟಿ.ಎಸ್.ಸಿಂಗ್ ಡಿಯೊ ಉಪಸ್ಥಿತರಿರುವ ಸಾಧ್ಯತೆಗಳಿವೆ.
3
+ ರಾಜ್ಯಗಳ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೆವಾಲ ಮತ್ತು ಕರ್ನಾಟಕದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಉನ್ನತ ಮೂಲದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿ ಪ್ರಯಾಣವನ್ನು ಮುಂದೂಡಿದ್ದಾರೆ.
4
+ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನಾಳೆ ದೆಹಲಿಗೆ ಆಗಮಿಸಲಿದ್ದು, ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಆ ಬಳಿಕ ಅಂತಿಮವಾಗಿ ಎಐಸಿಸಿಗೆ ಪಟ್ಟಿಯನ್ನು ರವಾನಿಸುವ ಸಾಧ್ಯತೆಯಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಬಾರಿ ಸ್ಕ್ರೀನಿಂಗ್ ಸಮಿತಿ ಹಾಗೂ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಸಿ ಚರ್ಚಿಸಲಾಗಿದೆ.ಹಲವು ಕ್ಷೇತ್ರಗಳಿಗೆ ಅನ್ಯ ಪಕ್ಷಗಳಿಂದ ವಲಸೆ ಬರುವ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಇರುವುದರಿಂದ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
5
+ : ಬೆಂಗಳೂರಲ್ಲಿ ವಾಟರ್ ಟ್ಯಾಂಕರ್‌ಗೆ ರೇಟ್ ಫಿಕ್ಸ್, ಇಲ್ಲಿದೆ ಡೀಟೇಲ್ಸ್
6
+ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ಒಮ್ಮೆಲೇ 28 ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿಂದು ನಡೆಯಲಿರುವ ಸಭೆಯಲ್ಲಿ ಈಗಾಗಲೇ ರವಾನೆಯಾಗಲಿರುವ ಸಂಭವನೀಯ ಪಟ್ಟಿಯ ಬಗ್ಗೆ ಚರ್ಚಿಸಲಾಗುತ್ತಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಹೈಕಮಾಂಡ್‍ನ ನಿರ್ದೇಶನವನ್ನು ಪಡೆದು ಡಿ.ಕೆ.ಶಿವಕುಮಾರ್ ಮರಳಲಿದ್ದಾರೆ ಎನ್ನಲಾಗಿದೆ. ಬಳಿಕ ರಾಜ್ಯದಲ್ಲಿ ನಡೆಯುವ ಸಭೆ ಮಹತ್ವದ್ದಾಗಲಿದ್ದು, ಕೆಲವೇ ದಿನಗಳಲ್ಲಿ ಟಿಕೆಟ್ ಘೋಷಣೆಯಾಗಲಿದೆ.
eesanje/url_46_212_12.txt ADDED
@@ -0,0 +1,4 @@
 
 
 
 
 
1
+ ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ : ಸಿಎಂ ಸಿದ್ದರಾಮಯ್ಯ
2
+ ಬೀದರ್,ಮಾ.7- ಲೋಕಸಭಾ ಚುನಾವಣೆಗೆ ಇನ್ನೆರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿನ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಇನ್ನೆರಡು ಮೂರು ದಿನಗಳಲ್ಲಿ ಪಟ್ಟಿಯನ್ನು ಪ್ರಕಟಿಸುವ ಅವಕಾಶವಿದೆ ಎಂದರು.
3
+ ಬೆಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗಳು ಮತ್ತು ರಾಜ್ಯದ ಸಿಸಿಬಿ ಪೊಲೀಸರು ಜಂಟಿಯಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಹತ್ವದ ಸುಳಿವುಗಳು ದೊರೆತಿವೆ. ತನಿಖೆ ಜಾರಿಯಲ್ಲಿರುವುದರಿಂದ ಈ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನುಡಿದರು.
4
+ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ ಎಂದರು.ಬಸವ ಕಲ್ಯಾಣ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ಜಿಲ್ಲಾಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸುವುದಾಗಿ ತಿಳಿಸಿದರು.
eesanje/url_46_212_2.txt ADDED
@@ -0,0 +1,6 @@
 
 
 
 
 
 
 
1
+ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯ
2
+ ಬೆಂಗಳೂರು,ಮಾ.8- ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯಗೊಳಿಸಲಾಗಿದೆ. ಎಸ್‍ಎಸ್‍ಎಲ್‍ಸಿ 2023-24 ನೇ ಸಾಲಿನ ವಾರ್ಷಿಕ ಮೊದಲ ಪರೀಕ್ಷೆಯು ಮಾ.25 ರಿಂದ ಏ.6 ರವರೆಗೆ ನಡೆಯಲಿದೆ. ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ದೇಶನ ನೀಡಿದೆ.
3
+ ಇಲಾಖೆಯು ಎಲ್ಲಾ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ದೃಢಪಡಿಸಿಕೊಳ್ಳಲು ಆಯಾ ಜಿಲ್ಲೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ನಿರ್ದೇಶಿಸಲಾಗಿದೆ.
4
+ ಪರೀಕ್ಷಾ ಕೇಂದ್ರಗಳಲ್ಲಿನ ಪರೀಕ್ಷಾ ಮುಖ್ಯ ಅೀಧಿಕ್ಷಕರು ಪರೀಕ್ಷೆಗಾಗಿ ಕಚೇರಿಯನ್ನು ಮಾಡಿಕೊಂಡಿರುವ ಅಂದರೆ ಮಾರ್ಗಾಧಿಕಾರಿಗಳಿಂದ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿ ಅಲ್ಮೆರಾದಲ್ಲಿಟ್ಟುಕೊಳ್ಳುವ, ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೊಠಡಿಗಳಿಗೆ ಹಂಚಿಕೆ ಮಾಡುವ, ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡಲ್ ಮಾಡುವ ಕಾರ್ಯವನ್ನು ನಿರ್ವಹಿಸುವ ಕಚೇರಿ ಕೊಠಡಿಗೆ ಪರೀಕ್ಷಾ ಕೊಠಡಿ ಹಾಗೂ ಕೊಠಡಿಗಳ ಕಾರಿಡಾರ್‍ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.
5
+ ಪರೀಕ್ಷಾ ದಿನದಂದು ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ಪರೀಕ್ಷಾ ಮುಖ್ಯ ಅೀಧಿಕ್ಷಕರು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಂಡ ದಿನದಂದು ಎಲ್ಲಾ ಪರೀಕ್ಷಾ ದಿನಗಳ ಸಿಸಿಟಿವಿ ಪುಟೇಜ್ ಸಾಫ್ಟ್‍ಕಾಪಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸುವ ಸೂಚನೆ ನೀಡಲಾಗಿದೆ.
6
+ ಅಲ್ಲದೆ, ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ ಪರೀಕ್ಷೆ ಸಮಯದಲ್ಲಿ ಚಾಲನೆ ಇರುವುದನ್ನು ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಒಂದೇ ಕಡೆ ವೀಕ್ಷಿಸಲು ಅನುಕೂಲವಾಗುವಂತೆ ಸಾಫ್ಟ್‍ವೇರ್ ಅಳವಡಿಸಿಕೊಂಡು ವೀಕ್ಷಣೆಗೆ ಸಂಬಂಧಿಸಿದ ಲಿಂಕ್ ಅನ್ನು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
eesanje/url_46_212_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಕುಟುಂಬ ರಾಜಕಾರಣ ಆರೋಪಕ್ಕೆ ದೇವೇಗೌಡರು ಗರಂ
2
+ ಹಾಸನ,ಮಾ.7- ನಮ್ಮ ಕುಟುಂಬದ ವಿರುದ್ಧ ಕೇವಲ ಕುಟುಂಬ ರಾಜಕಾರಣ ಎಂಬ ಆರೋಪವನ್ನು ಹೊರತುಪಡಿಸಿದರೆ ಬೇರೇನೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಐದು ವರ್ಷಗಳ ಸಾಧನಾ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾತೆತ್ತಿದ್ದರೆ ನಾನು ಪ್ರಧಾನಿಯಾಗಿದ್ದೆ, ಮಗ ಮುಖ್ಯಮಂತ್ರಿಯಾಗಿದ್ದ, ಇನ್ನೊಬ್ಬ ಮಗ ಮಂತ್ರಿ, ಮೊಮ್ಮಗ ಎಂಪಿ, ಮಗದೊಬ್ಬ ಎಂಎಲ್‍ಸಿ ಅನ್ನೋದು ಬಿಟ್ಟರೆ ವಿರೋಧಿಗಳಿಗೆ ಬೇರೇನೂ ಇಲ್ಲ ಎಂದು ತಿರುಗೇಟು ನೀಡಿದರು.
3
+ ಲೋಕಸಭಾ ಚುನಾವಣೆಗೆ ಶತದಿನವೂ ಇಲ್ಲ. ಆಗಲೇ ನಮ್ಮ ಮೇಲೆ ಗದಾಪ್ರಹಾರ ಶುರು ಮಾಡಿದ್ದಾರೆ. ಅರಸೀಕೆರೆ, ಹಾಸನದಲ್ಲಿ ಸಿಎಂ-ಡಿಸಿಎಂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಟೀಕಾ ಪ್ರಹಾರ ಮಾಡಿದ್ದಾರೆ ಎಂದರು. ಹಾಸನ ಸರ್ಕಾರಿ ಆಸ್ಪತ್ರೆ ಉದ್ಘಾಟನೆ ಸಂಬಂಧ ಸಿಎಂ-ಡಿಸಿಎಂ ವಿರುದ್ಧ ಕಿಡಿಕಾರಿದ ಗೌಡರು, ಆಸ್ಪತ್ರೆ ಆಗಿದ್ದು ಯಾವಾಗ ಸತ್ಯ ಹೇಳಿ, ಶಂಕುಸ್ಥಾಪನೆ ಆಗಿದ್ದು ಯಾವಾಗ, ಮೆಡಿಕಲ್ ಕಾಲೇಜು ಉಳಿಸಿದ್ದ ಸನ್ನಿವೇಶ ನನಗೆ ಗೊತ್ತಿದೆ. ಧರ್ಮಸಿಂಗ್ ಸಿಎಂ ಆಗಿದ್ದಾಗ ಅಡಿಗಲ್ಲು ಹಾಕಿದ್ದು. ಅಂದು ಪ್ರಧಾನಿಯಾಗಿದ್ದ ನರಸಿಂಹರಾವ್, ವಿಶ್ವಬ್ಯಾಂಕ್‍ನಿಂದ ಬಂದಿದ್ದ 880 ಕೋಟಿ ಹಣವನ್ನು ದೇವೇಗೌಡರಿಗೆ ಗೌರವ ಕೊಡಬೇಕು ನೀಡಿದ್ದರು ಎಂದು ನೆನೆಪಿಸಿಕೊಂಡರು.
4
+ ಪ್ರಜ್ವಲ್‍ಗೆ ಮಾರ್ಗದರ್ಶನ: ಪ್ರಜ್ವಲ್ ಕೆಲಸ ಮಾಡಿರುವ ವಿಚಾರಗಳನ್ನು ಜನರಿಗೆ ಮುಟ್ಟಿಸಬೇಕು. ಇಲ್ಲವಾದರೆ ನಮ್ಮ ಎದುರಾಳಿಗಳು ನಮ್ಮನ್ನು ಬಿಡುವುದಿಲ್ಲ. ರಾಜ್ಯ ಸಭೆಯಲ್ಲಿ ನನಗಿನ್ನೂ ಎರಡೂವರೆ ವರ್ಷ ಇದೆ. ನಾನು ಪ್ರಜ್ವಲ್ ಹಿಂದೆ ನಿಲ್ಲುತ್ತೇನೆ, ಸಲಹೆ ಸಹಕಾರ ನೀಡುತ್ತೇನೆ, ಈ ಜಿಲ್ಲೆಯ ಜನರ ಋಣ ತೀರಿಸಬೇಕಿದೆ ಎಂದರು.
5
+ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ 24 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಅದಕ್ಕೆ ಅಸೂಯೆ ಪಡುತ್ತೀರಾ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ ಅವರು, ನಿಮ್ಮ ಎಲ್ಲಾ ಭಾಗ್ಯಗಳಿಗೂ ಕುಮಾರಸ್ವಾಮಿ ಹಣ ಒದಗಿಸಿ ಎಂದು ಇದೇ ಸಿದ್ದರಾಮಯ್ಯ ಅಸೆಂಬ್ಲಿಯಲ್ಲಿ ಹೇಳಿದ್ದರು. ನನ್ನ ಭಾಗ್ಯಗಳಿಗೆ ಹಣ ಇಟ್ಟು ಆಮೇಲೆ ಸಾಲ ಮನ್ನಾ ಮಾಡಿ ಎಂದಿದ್ದರು ಎಂದು ವಾಗ್ದಾಳಿ ನಡೆಸಿದರು.
6
+ ಇದೇ ವೇಳೆ ನಾನು ಜ್ವರ ಬಂದು ಮನೆಯಲ್ಲಿ ಮಲಗಿದ್ದಾಗ, ರಾಜಣ್ಣ ಬಂದು ಸೋಲುತ್ತೇನೆ ಪ್ರಚಾರಕ್ಕೆ ಬನ್ನಿ ಅಂದರು. ಜ್ವರ ಇದ್ದರೂ ಪ್ರಚಾರಕ್ಕೆ ಹೋಗಿ ರಾಜಣ್ಣನ ಗೆಲ್ಲಿಸಿದೆ ಎಂದು ಹೇಳಿದರು. ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ನಾನು ಸಂಸದನಾದಾಗಿನಿಂದ ಸುಮ್ಮನೆ ಕೂತಿಲ್ಲ. ಪ್ರತಿದಿನ ಒಂದಲ್ಲ ಒಂದು ಕಡೆ ಓಡಾಡಿದ್ದೀನಿ. ಐದು ವರ್ಷದಲ್ಲಿ ನನ್ನ ಕೈಲಾದಷ್ಟು ಕೆಲಸ ಮಾಡಿದ್ದೀನಿ ಎಂದರು.
7
+ ಮುಂದೆ ಇನ್ನೂ ಹೆಚ್ಚಿನ ಕೆಲಸ ಮ��ಡುತ್ತೇನೆ. ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ನಿಮ್ಮ ಜೊತೆ ಇರುತ್ತೇನೆ. ನಿಮಗೆ, ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡುತ್ತೇನೆ, 27ನೇ ವರ್ಷಕ್ಕೇ ಸಂಸದನಾದೆ, ಸಣ್ಣಪುಟ್ಟ ತಪ್ಪುಗಳಾಗಿದ್ದರೆ ಕ್ಷಮೆ ಇರಲಿ ಎಂದರು. 5 ವರ್ಷ ಜನಪರ ಕೆಲಸ ಮಾಡಿದ್ದೇನೆ. ನಮ್ಮ ಶಾಸಕರ ಸಹಕಾರದಿಂದ ಇಷ್ಟು ಕೆಲಸ ಮಾಡಲು ಸಾಧ್ಯವಾಯಿತು. 7 ಫ್ಯಾಕ್ಟರಿಗಳನ್ನು ಹಾಸನಕ್ಕೆ ತರುವ ಕೆಲಸ ಮಾಡಿದ್ದೇನೆ. ಸ್ಥಳೀಯರಿಗೆ ಕೆಲಸ ಸಿಗಬೇಕು. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ. ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿ ಮತ್ತಷ್ಟು ಕೆಲಸ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿದರು.
8
+ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜಿಲ್ಲೆಗೆ ನೀರಾವರಿ, ರಸ್ತೆ, ರೈಲ್ವೆ ಹೀಗೆ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ನಾವು ಮಾಡಿದ್ದನ್ನು ಕಾಂಗ್ರೆಸ್‍ನವರು ಉದ್ಘಾಟನೆ ಮಾಡಿದ್ದಾರೆ. ಆ ಕೆಲಸ ಯಾರ ಕಾಲದಲ್ಲಿ ಆಗಿತ್ತು ಎಂದು ಪ್ರಶ್ನಿಸಿದರು. ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಹೆಚ್ಚಿನ ಅಂತದಲ್ಲಿ ಗೆಲ್ಲಿಸಬೇಕು. ಯಾರೇ ಅಭ್ಯರ್ಥಿಯಾಗಲಿ, ಅದು ದೇವೇಗೌಡರು, ಕುಮಾರಣ್ಣನವರಿಗೆ ಬಿಟ್ಟದ್ದು, ಯಾರೇ ಆದರೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಎಂದು ವಿನಂತಿಸಿದರು.
9
+ ಕಾರ್ಯಕ್ರಮದಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ, ಹೆಚ್.ಪಿ.ಸ್ವರೂಪ್ ಪ್ರಕಾಶ್, ಮಾಜಿ ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ವೈ.ಎಸ್.ವಿ.ದತ್ತಾ, ಮುಖಂಡರಾದ ಕೆ.ಎಂ.ರಾಜೇಗೌಡ, ತೋ.ಚ.ಅನಂತಸುಬ್ಬರಾಯ ಎಸ್ ದ್ಯಾವೇಗೌಡ, ಹೊಂಗೆರೆ ರಘು ಸ್ವಾಮಿಗೌಡ ಮೊದಲಾದವರಿದ್ದರು.
eesanje/url_46_212_4.txt ADDED
@@ -0,0 +1,6 @@
 
 
 
 
 
 
 
1
+ ಮಂಡ್ಯದಿಂದ ಸಿ.ಎಸ್.ಪುಟ್ಟರಾಜು ಸ್ಪರ್ಧೆ
2
+ ಬೆಂಗಳೂರು,ಮಾ.7- ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ನಿನ್ನೆ ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಸಿದರು.
3
+ ಎನ್‍ಡಿಎ ಅಭ್ಯರ್ಥಿಯಾಗಿ ಪುಟ್ಟರಾಜು ಅವರನ್ನು ಸ್ಪರ್ಧೆಗಿಳಿಸಿದರೆ ಗೆಲುವಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಗಿದೆ. ಆದರೆ ಅಭ್ಯರ್ಥಿ ಯಾರೆಂಬುದನ್ನು ಇನ್ನೂ ಅಧಿಕೃತವಾಗಿ ತೀರ್ಮಾನ ಮಾಡಿಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಡವೂ ಇದೆ.
4
+ ಸಭೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಯಾರನ್ನು ಸ್ಪರ್ಧೆಗಿಳಿಸಬೇಕು, ಚುನಾವಣೆ ಸಿದ್ಧತೆ ಹೇಗಿರಬೇಕು ಎಂಬ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಸಭೆಯಲ್ಲಿ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಅವರು ಭಾಗವಹಿಸಿದ್ದರು. ಮಂಡ್ಯ ಜಿಲ್ಲೆಯ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಎಲ್ಲರ ಅಭಿಪ್ರಾಯವನ್ನು ಕುಮಾರಸ್ವಾಮಿಯವರು ಪಡೆದುಕೊಂಡಿದ್ದಾರೆ.
5
+ ಅಭ್ಯರ್ಥಿ ಆಯ್ಕೆ ಕಗ್ಗಂಟು : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಗೊಂದಲ
6
+ ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡು ವುದಾಗಿ ಕುಮಾರಸ್ವಾಮಿ ಸಭೆಗೆ ತಿಳಿಸಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕು. ಮೈತ್ರಿ ಧರ್ಮ ಪಾಲಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಲೋಪಕ್ಕೆ ಅವಕಾಶ ಮಾಡಿಕೊಡಬಾರದು ಎಂದು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಎನ್‍ಡಿಎ ಅಭ್ಯರ್ಥಿ ಪರ ಕೆಲಸ ಮಾಡಿ ನಾನು ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡುತ್ತೇನೆ. ಅವರ ಪರವಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬ ಕಿವಿಮಾತು ಹೇಳಿದ್ದಾರೆ.
eesanje/url_46_212_5.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿಯ 10 ಹಾಲಿ ಸಂಸದರಿಗೆ ಟಿಕೆಟ್ ಡೌಟ್..?
2
+ ಬೆಂಗಳೂರು,ಮಾ.7- ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸುಮಾರು 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶನಿವಾರ ಅಥವಾ ಭಾನುವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.
3
+ ಸಭೆಯಲ್ಲಿ ರಾಜ್ಯ ನಾಯಕರಾದ ಯಡಿಯೂರಪ್ಪ, ಬಿ.ಎಲ್.ಸಂತೋಷ್, ಬಿ.ವೈ ವಿಜಯೇಂದ್ರ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿ ಅನೇಕ ನಾಯಕರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ತಡರಾತ್ರಿವರೆಗೂ ಚರ್ಚೆ ನಡೆಸಿದ್ದಾರೆ.
4
+ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಿಸಲಾಗುವುದು. ಬಿಜೆಪಿಗೆ 25 ಮತ್ತು ಜೆಡಿಎಸ್‍ಗೆ ಮೂರು ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಇನ್ನೂ ಸಭೆಯಲ್ಲಿ ಕೆಲ ಕ್ಷೇತ್ರಗಳ ಅಭ್ಯರ್ಥಿಗಳನ್ನ ಬದಲಾಯಿಸುವ ಬಗ್ಗೆ ಚರ್ಚೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಿಚಾರದಲ್ಲಿ ಅನುಸರಿಸಿದ ನಿಯಮವನ್ನ ಲೋಕಸಭಾ ಚುನಾವಣೆಗೆ ಅನುಸರಿಸಬೇಕು ಎನ್ನುವ ಚರ್ಚೆಯಾಗಿತ್ತು. ಈ ಚರ್ಚೆಯಿಂದಾಗಿ ಮೊದಲು 13 ಕ್ಷೇತ್ರಗಳಲ್ಲಿ ಬದಲಾವಣೆ ಮಾಡಬಹುದು ಎನ್ನಲಾಗಿತ್ತು. ಆದರೆ, ಇದೀಗ 5ರಿಂದ 10 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸುವ ಬಗ್ಗೆ ಚರ್ಚೆ ನಡೆದಿದೆ.
5
+ ಬೀದರ್ ಸಂಸದ ಭಗವಂತ ಖೂಬಾ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಎ ನಾರಾಯಣಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್‍ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.
6
+ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರ್ನಾಟಕದಿಂದ ಸ್ರ್ಪ ಸಬಹುದು ಎಂದು ಹೇಳಲಾಗುತ್ತಿದೆ. ಕೆಲವು ದಶಕಗಳ ಹಿಂದೆ ಪ್ರೊಬೇಷನರಿ ಅಧಿಕಾರಿಯಾಗಿ ಚಿಕ್ಕೋಡಿಯಲ್ಲಿ ಕೆಲಸ ಮಾಡಿದ ಅವರು ತಾತ ಮತ್ತು ಅಜ್ಜಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರು ಕರ್ನಾಟಕದಿಂದ ಸ್ರ್ಪಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗಿದೆ. ಅಭ್ಯರ್ಥಿಗಳ ಗೆಲುವಿನ ಅಂಶದ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸಂಪರ್ಕ ಕಳೆದುಕೊಂಡ ಸಂಸದರಿಗೆ ಟಿಕೆಟ್ ನೀಡುವುದನ್ನು ಪಕ್ಷ ವಿರೋಧಿಸುತ್ತಿದೆ. ಸಂಸದರಾಗಿ ಅವರ ಸಾಧನೆಯನ್ನೂ ಪಕ್ಷದ ನಾಯಕತ್ವ ಪರಿಗಣಿಸಿದೆ.
7
+ ಈ ಅಂಶಗಳ ಹೊರತಾಗಿ ಪಕ್ಷವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬಲ್ಲ ಹೊಸ ಮುಖಗಳನ್ನು ಪರಿಗಣಿಸಲಾಗುವುದು. ನಾವು ಮುಂದಿನ ಪೀಳಿಗೆಯ ನಾಯಕರನ್ನು ರೂಪಿಸುತ್ತಿದ್ದೇವ��. ಕೆಲವು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಸಂಸದರ ಕಾರ್ಯವೈಖರಿಯಿಂದ ಸಂತುಷ್ಟರಾಗಿಲ್ಲ. ಇದನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
8
+ ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಬೆಳಗಾವಿ – ಜಗದೀಶ್ ಶೆಟ್ಟರ್ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆಬೀದರ್ – ಭಗವಂತ್ ಖೂಬಾಕಲಬುರಗಿ – ಉಮೇಶ್ ಜಾಧವ್ವಿಜಯಪುರ – ರಮೇಶ್ ಜಿಗಜಿಣಗಿಬಾಗಲಕೋಟೆ – ಪಿಸಿ ಗದ್ದಿಗೌಡರ್ರಾಯಚೂರು – ರಾಜಾ ಅಮರೇಶ್ವರ್ ನಾಯಕ / ಬಿವಿ ನಾಯಕಕೊಪ್ಪಳ – ಸಂಗಣ್ಣ ಕರಡಿ / ಡಾ ಬಸವರಾಜ್ ಕ್ಯಾವಟರ್ಧಾರವಾಡ – ಪ್ರಹ್ಲಾದ್ ಜೋಶಿಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್ಬಳ್ಳಾರಿ – ಬಿ.ಶ್ರೀರಾಮುಲುದಕ್ಷಿಣ ಕನ್ನಡ – ನಳೀನ್‍ಕುಮಾರ್ ಕಟೀಲ್/ಬ್ರಿಜೇಶ್ ಚೌತಲಉತ್ತರಕನ್ನಡ – ಅನಂತ ಕುಮಾರ್ ಹೆಗ್ಡೆ, ವಿಶ್ವೇಶ್ವರ ಹೆಗಡೆ ಕಾಗೇರಿಉಡುಪಿ – ಚಿಕ್ಕಮಗಳೂರು – ಶೋಭಾ ಕರಂದ್ಲಾಜೆಶಿವಮೊಗ್ಗ – ಬಿ.ವೈ.ರಾಘವೇಂದ್ರಚಿತ್ರದುರ್ಗ- ಎ.ನಾರಾಯಣಸ್ವಾಮಿ/ಮಾದಾರ ಚೆನ್ನಯ್ಯ ಸ್ವಾಮೀಜಿದಾವಣಗೆರೆ – ಜಿಎಂ ಸಿದ್ದೇಶ್ವರ್/ಎಂ.ಪಿ.ರೇಣುಕಾಚಾರ್ಯತುಮಕೂರು – ವಿ.ಸೋಮಣ್ಣಬೆಂಗಳೂರು ಉತ್ತರ – ಡಿ.ವಿ.ಸದಾನಂದಗೌಡ/ಸಪ್ತಗಿರಿ ಗೌಡಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯಬೆಂಗಳೂರು ಸೆಂಟ್ರಲ್ – ಜೈಶಂಕರ್ / ಪಿ.ಸಿ.ಮೋಹನ್ಬೆಂಗಳೂರು ಗ್ರಾಮಾಂತರ – ಡಾ ಸಿಎನ್ ಮಂಜುನಾಥ್ಚಿಕ್ಕಬಳ್ಳಾಪುರ – ಡಾ.ಕೆಸುಧಾಕರ್ / ಅಲೋಕ್ ವಿಶ್ವನಾಥ್ಮೈಸೂರು – ಪ್ರತಾಪ್ ಸಿಂಹಚಾಮರಾಜನಗರ – ಡಾ.ಮೋಹನ್ ಕುಮಾರ್/ಎಸ್ ಬಾಲರಾಜ್
eesanje/url_46_212_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭವನೀಯರ ಪಟ್ಟಿ ರವಾನೆ, ವಲಸಿಗರಿಗೆ ಮಣೆ..!
2
+ ಬೆಂಗಳೂರು,ಮಾ.7- ಆಪರೇಷನ್ ಕಮಲದಿಂದ ಬಿಜೆಪಿ ಸೇರಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಡಾ.ಸುಧಾಕರ್, ಶಿವರಾಂ ಹೆಬ್ಬಾರ್ ಸೇರಿದಂತೆ ಐದು ಮಂದಿ ವಲಸಿಗರನ್ನೊಳಗೊಂಡು ಕಾಂಗ್ರೆಸ್ ಸಂಭವನೀಯರ ಪಟ್ಟಿಯನ್ನು ಹೈಕಮಾಂಡ್‍ಗೆ ರವಾನಿಸಿದೆ. ಇದರಲ್ಲಿ ಸುಮಾರು 15 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಏಕ ವ್ಯಕ್ತಿಯ ಹೆಸರನ್ನು ಶಿಫಾರಸು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಹಾಲಿ ಸಂಸದ ಡಿ.ಕೆ.ಸುರೇಶ್ ಮರುಸ್ಪರ್ಧೆ ಮಾಡಲಿದ್ದಾರೆ. ಮೈಸೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹೆಸರಿನ ಜೊತೆಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೆಸರು ಪ್ರಬಲವಾಗಿ ಕೇಳಿಬಂದಿದೆ.
3
+ ಮಂಡ್ಯ ಕ್ಷೇತ್ರಕ್ಕೆ ಸ್ಥಳೀಯ ಕೆಲ ಮುಖಂಡರ ವಿರೋಧದ ನಡುವೆಯೂ ಉದ್ಯಮಿ ಸ್ಟಾರ್ ಚಂದ್ರು ಕಣಕ್ಕಿಳಿ ಯುವುದು ಖಚಿತವಾಗಿದೆ. ಕಲ್ಪತರು ನಾಡು ತುಮಕೂರಿಗೆ ಕಳೆದ ವಾರವಷ್ಟೇ ಬಿಜೆಪಿಯಿಂದ ವಲಸೆ ಬಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಟಿ.ಬಿ. ಜಯಚಂದ್ರಅವರು ತಮ್ಮ ಪುತ್ರ ಸಂತೋಷ್ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ನಾಯಕ ನಿಖಿಲ್ ರಾಜ್ ಮೌರ್ಯ ಅವರ ಪರವಾದ ಒಲವು ವ್ಯಕ್ತಪಡಿಸಿದ್ದಾರೆ.
4
+ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಹಿರಿಯ ನಾಯಕ ವೀರಪ್ಪ ಮೊಯ್ಲಿ ಅದೇ ಕ್ಷೇತ್ರದಿಂದ ಮತ್ತೆ ಸ್ರ್ಪಧಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಮೊದಲು ಜಿ-23 ಗುಂಪಿನಲ್ಲಿ ಸೇರಿಕೊಂಡು ರಾಹುಲ್ ಗಾಂಧಿ ವಿರುದ್ಧ ಬಂಡಾಯದ ಕಹಳೆ ಊದಿದ್ದರು ಎಂಬ ಆಕ್ಷೇಪಗಳಿವೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಎಂ.ಆರ್.ಸೀತಾರಾಮ್ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸುವ ಉಮೇದಿನಲ್ಲಿದ್ದಾರೆ.
5
+ ಇತ್ತ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬಿಡಿಎ ಅಧ್ಯಕ್ಷರೂ ಆಗಿರುವ ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಹೆಸರು ಕೇಳಿಬರುತ್ತಿದೆ. ಈ ಕ್ಷೇತ್ರದಲ್ಲಿ ಹ್ಯಾರಿಸ್ ಜಯ ಗಳಿಸಿದ್ದಾದರೆ, ತೆರವಾಗುವ ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲ್ಪಾಡ್ ಅಧ್ಯಕ್ಷರಾಗಲಿದ್ದಾರೆ ಎಂಬ ಆಂತರಿಕ ಚರ್ಚೆಗಳಿವೆ. ಡಿ.ಕೆ.ಶಿವಕುಮಾರ್‍ರವರು ನಲ್ಪಾಡ್ ಬೆಂಬಲಕ್ಕಿದ್ದಾರೆ. ಅತ್ತ ಚಿಕ್ಕಬಳ್ಳಾಪುರ ಕ್ಷೇತ್ರ ರಕ್ಷಾ ರಾಮಯ್ಯ ಅವರಿಗೆ ಸಿಕ್ಕರೆ, ಬೆಂಗಳೂರು ಕೇಂದ್ರಕ್ಕೆ ಹ್ಯಾರಿಸ್‍ರವರಿಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವ���ುಮಾರ್ ಪರಸ್ಪರ ಹಂಚಿಕೆ ರಾಜಕಾರಣದ ಮೂಲಕ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎನ್ನಲಾಗಿದೆ.
6
+ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅತಿ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಗೆಲುವು ಕಂಡರೆ ಅವರು ಹಾಲಿ ಪ್ರತಿನಿಧಿಸುತ್ತಿರುವ ದೇವನಹಳ್ಳಿ ಕ್ಷೇತ್ರಕ್ಕೆ ಮುನಿಯಪ್ಪ ಅವರ ಕುಟುಂಬದ ಸದಸ್ಯರಿಗೆ ವಿಧಾನಸಭೆಯಲ್ಲಿ ಟಿಕೆಟ್ ನೀಡಬೇಕು ಎಂಬ ಷರತ್ತಿದೆ.
7
+ ಗೆಲುವಿನ ದೃಷ್ಟಿಯಿಂದ ಸಂಪುಟದ ಸಚಿವರನ್ನು ಕಣಕ್ಕಿಳಿಸುವುದು ಕಾಂಗ್ರೆಸ್‍ನ ಒತ್ತಾಸೆಯಾಗಿದ್ದರೂ ಕೋಲಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಆಪ್ತ ಡಾ.ಬಿ.ಸಿ.ಮುದ್ದು ಗಂಗಾಧರ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಿಂದ ಕೈಗೆ ಬಂದಿದ್ದ ಬಿ-ಫಾರಂ ಅನ್ನು ಮಧು ಗಂಗಾಧರ್ ತ್ಯಾಗ ಮಾಡಿ ಪಕ್ಷದ ಶಿಸ್ತಿನ ಸಿಪಾಯಿ ಎನಿಸಿಕೊಂಡಿದ್ದರು. ಆ ನಿಷ್ಠೆಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂಬ ಚರ್ಚೆಗಳಿವೆ.
8
+ ಬಿಜೆಪಿಯಲ್ಲಿರುವ ಡಾ.ಸುಧಾಕರ್ ಅವರ ಹೆಸರು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪ್ರಬಲವಾಗಿ ಕೇಳಿಬಂದಿವೆ. ಈ ಇಬ್ಬರೂ ಇನ್ನೂ ಬಿಜೆಪಿಯಲ್ಲೇ ಇದ್ದಾರೆ. ಕೊನೇ ಕ್ಷಣದಲ್ಲಿ ಶಿವರಾಂ ಹೆಬ್ಬಾರ್ ರಾಜೀನಾಮೆ ನೀಡಿ ಬಿಜೆಪಿ ಸೇರಬಹುದು. ಒಂದು ವೇಳೆ ಅದು ಸಾಧ್ಯವಾಗದೇ ಇದ್ದರೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಉತ್ತರ ಕನ್ನಡ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗುವುದು ಎಂದು ಹೇಳಲಾಗುತ್ತಿದೆ.
9
+ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಲು ಪ್ರಯತ್ನಿಸುತ್ತಿದ್ದಾರೆ. ಅಲ್ಲಿ ಅವಕಾಶ ಗಿಟ್ಟದಿದ್ದರೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರಕ್ಕೆ ಪ್ರೊ.ರಾಜೀವ್‍ಗೌಡ, ಮಾಜಿ ಎಂಎಲ್‍ಸಿ ನಾರಾಯಣಸ್ವಾಮಿ ಕೂಡ ಲಾಬಿ ನಡೆಸುತ್ತಿದ್ದಾರೆ.ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ , ಶಿವಮೊಗ್ಗಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್, ದಾವಣಗೆರೆಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ, ಚಿತ್ರದುರ್ಗಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಬೀದರ್‍ಗೆ ಮಾಜಿ ಸಚಿವ ರಾಜಶೇಖರ್ ಪಾಟೀಲ್, ವಿಜಯಪುರ ಕ್ಷೇತ್ರಕ್ಕೆ ಮಾಜಿ ಶಾಸಕ ರಾಜು ಅಲಗೂರು, ಹಾಸನಕ್ಕೆ ಶ್ರೇಯಸ್ ಪಟೇಲ್ ಹೆಸರುಗಳಿವೆ.
10
+ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಸುೀಧಿರ್ ಮುರೋಳಿಯವರಿಗೆ ಟಿಕೆಟ್ ನೀಡಬೇಕೆಂದು ಎರಡೂ ಜಿಲ್ಲೆಗಳ ನಾಯಕರು ಮೊನ್ನೆ ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಹಿಂದುಳಿದ ವರ್ಗಗಳ ಆಯೋಗದ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಅವರ ಹೆಸರು ಚಾಲ್ತಿಯಲ್ಲಿದೆ.ಹಾವೇರಿಗೆ ಮಾಜಿ ಶಾಸಕ ಡಿ.ಆರ್. ಪಾಟೀಲ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಹೆಸರು ಕೇಳಿಬರುತ್ತಿದೆ.
11
+ ಬಳ್ಳಾರಿ ಕ್ಷೇತ್ರಕ್ಕೆ ಸಚಿವ ಬಿ.ನಾಗೇಂದ್ರ ಅವರನ್ನು ಕಣಕ್ಕಿಳಿಸುವ ಚರ್ಚೆಗಳಿದ್ದು, ಶಾಸಕ ತುಕಾರಾಂ ಅವರ ಪುತ್ರಿ ಚೈತನ್ಯ ಸೌಪರ್ಣಿಕ ಮತ್ತು ಮಾಜಿ ಸಂಸದ ಉಗ್ರಪ್ಪ ಅವರ ಹೆಸರು ಚಾಲ್ತಿಯಲ್ಲಿವೆ. ಬಾಗಲಕೋಟೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ್ ಅಥವಾ ಮಾಜಿ ಶಾಸಕ ಆನಂದ ನ್ಯಾಮೇಗೌಡ, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿನಯ್‍ಕುಮಾರ್ ಸೊರಕೆ ಅಥವಾ ಪದ್ಮರಾಜ್, ರಾಯಚೂರು ಕ್ಷೇತ್ರಕ್ಕೆ ಕುಮಾರ್‍ನಾಯಕ್ ಅಥವಾ ರವಿ ಪಾಟೀಲ್ ಕಣಕ್ಕಿಳಿಯುವ ನಿರೀಕ್ಷೆಗಳಿವೆ.
12
+ ಚಾಮರಾಜನಗರ ಕ್ಷೇತ್ರಕ್ಕೆ ಸಚಿವಎಚ್.ಸಿ.ಮಹದೇವಪ್ಪ ತಮ್ಮ ಪುತ್ರ ಸುನಿಲ್ ಬೋಸ್‍ರನ್ನು ಕಣಕ್ಕಿಳಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಕಲಬುರ್ಗಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ರ್ಪಧಿಸುವ ಬಗ್ಗೆ ಸ್ಪಷ್ಟ ನಿರ್ಧಾರ ತಿಳಿಸದ ಹಿನ್ನೆಲೆಯಲ್ಲಿ, ಅವರ ಅಳಿಯ ರಾಧಾಕೃಷ್ಣರ ಹೆಸರು ಚಾಲ್ತಿಯಲ್ಲಿದೆ. ಕೊಪ್ಪಳ ಕ್ಷೇತ್ರಕ್ಕೆ ಅಮರೇಗೌಡ ಬಯ್ಯಾಪುರ ಅಥವಾ ರಾಜಶೇಖರ್ ಹಿಟ್ನಾಳ್ ಅಭ್ಯರ್ಥಿಗಳಾಗಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಹಳಷ್ಟು ಮಂದಿ ವಲಸಿಗರ ಹೆಸರುಗಳಿದ್ದು, ಪರಸ್ಪರ ಕುಟುಂಬದ ಸದಸ್ಯರೇ ಹೆಚ್ಚಿನ ಲಾಬಿ ನಡೆಸುತ್ತಿದ್ದಾರೆ.
13
+ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಬೆಂಗಳೂರು ಗ್ರಾಮಾಂತರ : ಡಿ.ಕೆ.ಸುರೇಶ್ಮೈಸೂರು : ಎಂ ಲಕ್ಷ್ಮಣ,ಮಂಡ್ಯ : ಸ್ಟಾರ್ ಚಂದ್ರು(ವೆಂಕಟರಮಣಗೌಡ)ತುಮಕೂರು:ಎಸ್.ಪಿ. ಮುದ್ದಹನುಮೇಗೌಡ,ಚಿಕ್ಕಬಳ್ಳಾಪುರ : ರಕ್ಷಾ ರಾಮಯ್ಯ/ವೀರಪ್ಪಮೊಯ್ಲಿಕೋಲಾರ : ಕೆ.ಎಚ್.ಮುನಿಯಪ್ಪ/ಡಾ.ಬಿ.ಸಿ.ಮುದ್ದುಗಂಗಾಧರ್ಬೆಂಗಳೂರು ಕೇಂದ್ರ : ಎನ್.ಎ.ಹ್ಯಾರಿಸ್ಬೆಂಗಳೂರು ಉತ್ತರ : ಪ್ರೊ.ರಾಜೀವ್‍ಗೌಡ/ ಕುಸುಮ/ಡಾ.ಸುಧಾಕರ್ಬೆಂಗಳೂರು ದಕ್ಷಿಣ : ಸೌಮ್ಯ ರೆಡ್ಡಿಉತ್ತರ ಕನ್ನಡ : ಅಂಜಲಿ ನಿಂಬಾಳ್ಕರ್/ಶಿವರಾಮ್ ಹೆಬ್ಬಾರ್ಚಾಮರಾಜನಗರ : ಸಚಿವ ಡಾ.ಎಚ್.ಸಿ. ಮಹದೇವಪ್ಪ/ಸುನೀಲ್ ಬೋಸ್ಹಾಸನ : ಶ್ರೇಯಸ್ ಪಟೇಲ್ಉಡುಪಿ-ಚಿಕ್ಕಮಗಳೂರು : ಸುೀಧಿರ್ ಮುರೋಳಿ/ಜಯಪ್ರಕಾಶ ಹೆಗ್ಡೆಶಿವಮೊಗ್ಗ : ಗೀತಾ ಶಿವರಾಜಕುಮಾರ್ದಾವಣಗೆರೆ : ಪ್ರಭಾ ಮಲ್ಲಿಕಾರ್ಜುನ/ ವಿನಯ್ ಕುಮಾರ್ಚಿತ್ರದುರ್ಗ : ಬಿ.ಎನ್.ಚಂದ್ರಪ್ಪಹಾವೇರಿ : ಡಿ.ಆರ್.ಪಾಟೀಲ/ ಸಲೀಂ ಅಹಮದ್ವಿಜಯಪುರ :ರಾಜು ಆಲಗೂರಬೀದರ್ : ರಾಜಶೇಖರ ಪಾಟೀಲ್ಬಳ್ಳಾರಿ : ಸಚಿವ ಬಿ.ನಾಗೇಂದ್ರ/ ಚ���ತನ್ಯ ಸೌಪರ್ಣಿಕಬಾಗಲಕೋಟೆ : ಆನಂದ ನ್ಯಾಮಗೌಡ/ ವೀಣಾ ಕಾಶಪ್ಪನವರ್ದಕ್ಷಿಣ ಕನ್ನಡ : ವಿನಯ್ ಕುಮಾರ್ ಸೊರಕೆ/ ಪದ್ಮರಾಜ್ರಾಯಚೂರು : ಕುಮಾರ್ ನಾಯ್ಕ /ರವಿ ಪಾಟೀಲ್ ನಾಯ್ಕಕಲಬುರಗಿ : ಮಲ್ಲಿಕಾರ್ಜುನ ಖರ್ಗೆ/ರಾಧಾಕೃಷ್ಣಕೊಪ್ಪಳ : ಅಮರೇಗೌಡ ಬಯ್ಯಾಪುರ / ರಾಜಶೇಖರ ಹಿಟ್ನಾಳ್
eesanje/url_46_212_7.txt ADDED
@@ -0,0 +1,4 @@
 
 
 
 
 
1
+ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಆರೋಪಿಯ ರೇಖಾಚಿತ್ರ ವೈರಲ್
2
+ ಬೆಂಗಳೂರು,ಮಾ.7- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾಯಾಗಿರುವ ಆರೋಪಿಯ ತೀವ್ರ ಶೋಧದ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಿಸಿಟಿವಿ ದೃಶ್ಯಗಳು ವೈರಲ್ಲಾಗುತ್ತಿವೆ. ಇದನ್ನೇ ಆಧಾರವಾಗಿಟ್ಟುಕೊಂಡು ರೇಖಾಚಿತ್ರಕಾರರೊಬ್ಬರು ಆರೋಪಿಯ ಹೋಲುವ ಕೆಲ ಚಿತ್ರಗಳನ್ನು ಬರೆದು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಇದನ್ನು ಎನ್‍ಐಎ ಮತ್ತು ಬೆಂಗಳೂರು ನಗರ ಪೊಲೀಸ್ ಖಾತೆಗಳಿಗೂ ಟ್ಯಾಗ್ ಮಾಡಿದ್ದಾರೆ.
3
+ ಆರೋಪಿಯು ಮಾಸ್ಕ್, ಟೋಪಿ, ಕನ್ನಡಕ ಧರಿಸಿ ಹೇಗೆ ಕಾಣುತ್ತಾನೆ ಮತ್ತು ಟೋಪಿ, ಮಾಸ್ಕ್ಇಲ್ಲದೆ ಹೇಗೆ ಕಾಣಬಹುದು ಎಂಬುದನ್ನ ತಮ್ಮದೇ ಕಲ್ಪನೆಯಲ್ಲಿ ಚಿತ್ರಕಾರ ಹರ್ಷ ಊಹಿಸಿಕೊಂಡು ಪೂರ್ತಿ ಮುಖದ ರೇಖಾಚಿತ್ರ ಬಿಡಿಸಿದ್ದಾರೆ. ಈ ಚಿತ್ರಗಳನ್ನು ತಮ್ಮ ಅಕೃತ ಜಾಲತಾಣ ಎಕ್ಸ್‍ನಲ್ಲಿ ಪೊಸ್ಟ್ ಮಾಡಿ ತನಿಖಾ ಸಂಸ್ಥೆಗಳಿಗೆ ಈ ರೇಖಾಚಿತ್ರಗಳು ಸಹಾಯವಾಗಬಹುದು ಎಂದು ಬರೆದುಕೊಂಡಿದ್ದಾರೆ.
4
+ ಆರೋಪಿಯ ಬಗ್ಗೆ ಎನ್‍ಐಎಗೆ ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ಘೋಷಿಸಿದ್ದು, ಸಾರ್ವಜನಿಕರು ಸಹ ಈ ಚಿತ್ರಗಳನ್ನು ಆಧಾರವಾಗಿಟ್ಟುಕೊಂಡು ಆರೋಪಿಯ ಪತ್ತೆ ಕಾರ್ಯಕ್ಕೆ ಸಹಾಯವಾಗಲಿದೆ.
eesanje/url_46_212_8.txt ADDED
@@ -0,0 +1,7 @@
 
 
 
 
 
 
 
 
1
+ ಪಬ್ಲಿಕ್ ಪರೀಕ್ಷೆ ತಡೆ ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ
2
+ ಬೆಂಗಳೂರು,ಮಾ.7- ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5, 7, 8, 9 ಮತ್ತು 11ನೇ ತರಗತಿಗೆ ನಿಗದಿಯಾಗಿದ್ದ ಪಬ್ಲಿಕ್ ಪರೀಕ್ಷೆ ಸುತ್ತೋಲೆಯನ್ನು ರದ್ದುಪಡಿಸಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜೇರಿಯಾ ಹಾಗೂ ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಅವರನ್ನೊಳಗೊಂಡ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಮೇಲ್ಮನೆಯಲ್ಲಿ ಮನವಿ ಮಾಡಿದೆ.
3
+ ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬುಧವಾರ ಹೈಕೋರ್ಟ್ ನ್ಯಾಯಮೂರ್ತಿ ರವಿ.ಎಸ್ ಹೊಸಮನಿ ಅವರನ್ನೊಳಗೊಂಡ ಏಕಸದಸ್ಯ ಪೀಠ 5, 7, 8, 9 ಮತ್ತು 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು 2023 ಡಿಸೆಂಬರ್ ತಿಂಗಳಿನಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು.
4
+ ಮಾರ್ಚ್ 11ರಿಂದ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆ ನಡೆಸಿಕೊಂಡಿದೆ. ಈ ಹಂತದಲ್ಲಿ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಪಡಿಸಿರುವ ಕಾರಣ ಪರೀಕ್ಷೆ ನಡೆಸಲು ಹಲವು ಸಮಸ್ಯೆ ಎದುರಾಗಲಿದೆ. ಆದ್ದರಿಂದ ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಪರೀಕ್ಷಾ ವೇಳಾಪಟ್ಟಿ ಸಿದ್ಧಗೊಂಡಿದೆ ಎಂದು ಕೋರಿದರು. ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿಗಳು, ಈ ಪೀಠ ಇರುವುದಿಲ್ಲ. ಹೀಗಾಗಿ, ಮತ್ತೊಂದು ಪೀಠವನ್ನು ರಚನೆ ಮಾಡಿ ಇಂದೇ ವಿಚಾರಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
5
+ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ, ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ, ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿಗಾಗಿ ಸಂಸ್ಥೆ ಸಲ್ಲಿಸಿದ್ದ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ಸುತ್ತೋಲೆ ರದ್ದುಪಡಿಸಿ ತೀರ್ಪು ಪ್ರಕಟಿಸಿತ್ತು.
6
+ ಹೈಕೋರ್ಟ್‍ನ ಈ ಆದೇಶದಿಂದ ಮಾರ್ಚ್ 13ರಿಂದ 19 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ಅಲ್ಲದೆ ಸೆಕ್ಷನ್ 22ರ ಪ್ರಕಾರ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯ ಮೂಲಕ ಆಂತರಿಕ ಅಥವಾ ಬಾಹ್ಯ ಮೌಲ್ಯಮಾಪನ ಮಾಡುವುದಕ್ಕಾಗಿ ನಿಯಮಗಳಿಗೆ ತಿದ್ದುಪಡಿ ಮಾಡಬೇಕು. ಸೆಕ್ಷನ್ 145 (4)ರ ಪ್ರಕಾರ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡಬೇಕಾದಲ್ಲಿ ಶಾಸನ ಸಭೆಯಲ್ಲಿ ಚರ್ಚಿಸಿದ ಬಳಿಕ ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಲಾಗಿದೆ.
7
+ ಆದರೆ, ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಈ ರೀತಿಯ ಯಾವುದೇ ನಿಯಮಗಳಿಗೆ ತಿದ್ದುಪಡಿ ಮಾಡಿಲ್ಲ. ಆದ್ದರಿಂದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಮುಂದಾಗಿರುವ ಕ್ರಮ ಶಿಕ್ಷಣ ಕಾಯ್ದೆ ಸೆಕ್ಷನ್ 22ಕ್ಕೆ ತದ್ವಿರುದ್ಧವಾಗಿದೆ ಎಂದು ನ್ಯಾಯಪೀಠ ತಿಳಿಸಿತ್ತು. ದೊಡ್ಡಮಟ್ಟದ ವಿದ್ಯಾರ್ಥಿಗಳಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಸರ್ಕಾರ ಬದಲಾವಣೆ ತರಬೇಕಾದರೆ ಯಾವುದೇ ಆಕ್ಷೇಪಗಳು ಇಲ್ಲದಂತೆ ಮತ್ತು ಕಡ್ಡಾಯವಾಗಿ ನಿಗದಿಪಡಿಸಿರುವ ಕಾರ್ಯವಿಧಾನದ ಮೂಲಕ ತರಬೇಕು. ಹೀಗಾಗಿ, ಶಿಕ್ಷಣ ಇಲಾಖೆ ಸುತ್ತೋಲೆ ದೋಷಪೂರಿತವಾಗಿದೆ ಎಂದು ಪೀಠ ತಿಳಿಸಿತ್ತು.
eesanje/url_46_212_9.txt ADDED
@@ -0,0 +1,4 @@
 
 
 
 
 
1
+ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿ ನಾಶಿಪುಡಿಗೆ 2 ವಾರ ನ್ಯಾಯಾಂಗ ಬಂಧನ
2
+ ಬೆಂಗಳೂರು,ಮಾ.7- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರನ್ನು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು. 39ನೇ ಎಸಿಎಂಎಂ ನ್ಯಾಯಾಲಯ ನಾಶಿಪುಡಿ ಅವರನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
3
+ ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ನಾಸಿರ್ ಹುಸೇನ್ ವಿಜಯೋತ್ಸವ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಪ್ರಕರಣದಲ್ಲಿ ಮೊಹಮ್ಮದ್ ಶಫಿ ನಾಶಿಪುಡಿ, ಮುನ್ನಾವರ್ ಅಹಮ್ಮದ್, ಮೊಹಮ್ಮದ್ ಇಲ್ತಾಜ್ ಎಂಬುವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳನ್ನು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚುವರಿ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.
4
+ ಇಬ್ಬರು ಆರೋಪಿಗಳಾದ ಮುನ್ನಾವರ್ ಅಹಮ್ಮದ್ ಇಲ್ತಾಜ್ ಅವರನ್ನು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಹೆಚ್ಚುವರಿ ವಿಚಾರಣೆಗಾಗಿ ನಾಶಿಪುಡಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿತ್ತು. ಇಂದಿಗೆ ಪೊಲೀಸ್ ಕಸ್ಟಡಿಯ ಅವಧಿ ಮುಗಿದ ಕಾರಣ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ ನ್ಯಾಯಾೀಧಿಶರು ನಾಶಿಪುಡಿ ಅವರಿಗೆ 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದರು.
eesanje/url_46_213_1.txt ADDED
@@ -0,0 +1,7 @@
 
 
 
 
 
 
 
 
1
+ ನಾಸೀರ್ ಹುಸೇನ್‍ಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗಳಿಗೆ ಪತ್ರ
2
+ ಬೆಂಗಳೂರು,ಮಾ.7- ವಿಧಾನಸಭೆ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್‍ಗೆ ಉಪರಾಷ್ಟ್ರಪತಿಗಳು ಅಧಿಕಾರ ಗೌಪ್ಯತೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ. ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಮದನ್ ಗೋಪಾಲ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸ್ವಯಂ ನಿವೃತ್ತಿ ಪಡೆದ ಭಾಸ್ಕರ್ ರಾವ್ ನೇತೃತ್ವದಲ್ಲಿ 17 ಐಎಎಸ್ ಅಧಿಕಾರಿಗಳ ಸಹಿವುಳ್ಳ ಪತ್ರವನ್ನು ರಾಜ್ಯಸಭೆಯ ಸಭಾಪತಿಯಾಗಿರುವ ಉಪರಾಷ್ಟ್ರಪತಿ ಜಗದೀಶ್ ಧನ್ಕರ್‍ಗೆ ಪತ್ರ ಬರೆದಿದ್ದಾರೆ.
3
+ ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ ಮದನ್ ಗೋಪಾಲ್, ಎಂ ಲಕ್ಷ್ಮೀನಾರಾಯಣ, ಅನಿಲ್ ಕುಮಾರ್, ಮುದ್ದುಮೋಹನ್, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಗೋಪಾಲ್ ಹೊಸೂರ್ ಸೇರಿದಂತೆ 22 ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಪ್ರಕರಣ ಇತ್ಯರ್ಥವಾಗುವರೆಗೂ ಪ್ರಮಾಣ ವಚನ ಬೋಧಿಸದಂತೆ ಮನವಿ ಮಾಡಿದ್ದಾರೆ.
4
+ ಕಳೆದ ಫೆ.27ರಂದು ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜೇತರಾದ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಣೆ ಮಾಡುವ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಬಹಿರಂಗವಾಗಿದೆ. ಪೊಲೀಸರು ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇವರೆಲ್ಲರೂ ನಾಸೀರ್ ಹುಸೇನ್ ಅವರ ಬೆಂಬಲಿಗರಾಗಿರುವುದರಿಂದ ಉಪರಾಷ್ಟ್ರಪತಿಗಳು ದೇಶ ವಿರೋಧಿ ಘೋಷಣೆ ಕೂಗಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅಧಿಕಾರ ಗೌಪ್ಯತೆ ಬೋಧಿಸಬಾರದೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
5
+ ಸುಮಾರು ಮೂರು ಪುಟಗಳ ಪತ್ರ ಬರೆದಿರುವ ಅಧಿಕಾರಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶವಿರೋಧಿ ಚಟುವಟಿಕೆಗೆ ಸಮ. ಇದನ್ನು ಗಂಭೀರವಾಗಿ ಪರಿಗಣಿಸಿ ನಾಸೀರ್ ಹುಸೇನ್‍ಗೆ ಅಧಿಕಾರ ಗೌಪ್ಯತೆ ಬೋಧಿಸಬಾರದು. ನಿಮಗಿರುವ ಅಧಿಕಾರವನ್ನು ಚಲಾಯಿಸಿ ಎಂದು ಕೋರಿದ್ದಾರೆ. ಅಧಿಕಾರಿಗಳ ಈ ನಿಲುವನ್ನು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬೆಂಬಲಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಅವರು ಪೋಸ್ಟ್ ಮಾಡಿ ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.
6
+ ರಾಜ್ಯಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಘಟನೆ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು 17 ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಘನತೆವೆತ್ತ ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದಿದ್ದಾರೆ.
7
+ ದೇಶದ್ರೋಹಿಗಳನ್ನು ಪೋಷಿಸಿ, ಬೆಂಬಲಿಸಿ ಅವರು ರಾಷ್ಟ್ರ ವಿದ್ರೋಹದ ಕೆಲಸ ಮಾಡಿದ ಮೇಲೂ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಒಳಗೆ ಪ್ರವೇಶಿಸುವ ಅರ್ಹತೆಯೇ ಇಲ್ಲ. ಇಂತಹ ವ್ಯಕ್ತಿಗಳಿಗೆ ರಾಜ್ಯಸಭಾ ಸದಸ್ಯತ್ವ ನೀಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ದೇಶಪ್ರೇಮವಿದ್ದರೆ ನಾಸಿರ್ ಹುಸೇನ್ ಅವರಿಂದ ರಾಜೀನಾಮೆ ಪಡೆದು ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
eesanje/url_46_213_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು
2
+ ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಈ ಆದೇಶದಿಂದ ಇದೇ ಮಾರ್ಚ್ 9ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.
3
+ ಕಳೆದ ಡಿಸೆಂಬರ್ನಲ್ಲಿ ರಾಜ್ಯ ಸರ್ಕಾರ 2024ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಎರಡೂ ಕಡೆಯ ವಾದವನ್ನು ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ರವಿ ಹೊಸಮನಿ ಅವರು ಇಂದು ತೀರ್ಪು ಪ್ರಕಟಿಸಿ ಸರ್ಕಾರ ಹೊರಡಿಸಿದ್ದ ಸುತ್ತೋಲೆ ಯನ್ನು ರದ್ದುಪಡಿಸಿದರು.
4
+ ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರಿ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಅರ್ಜಿದಾರರ ಸಂಘ ಕೋರಿತ್ತು.
5
+ ಖಾಸಗಿ ಶಾಲೆಗಳ ಪರವಾಗಿ ವಕೀಲ ಸುದರ್ಶನ್ ವಾದ ಮಂಡಿಸಿದ್ದರೆ, ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಂದಿನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು 5ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು.
6
+ ಆನಂತರ ಅಧಿಕಾರ ಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸುವ ಚಿಂತನೆ ಮಾಡಿತ್ತು. 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಹಾಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್��� ಈ ಹಿಂದೆ ಹೇಳಿದ್ದರು.
7
+ ಈ ಹಿಂದೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮೇಲ್ಮನವಿ ಸಲ್ಲಿಸಿದ್ದರು. 2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 2022ರ ಡಿಸೆಂಬರ್ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು.
8
+ ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಸಂಘದ ಆಕ್ಷೇಪಣೆಯಾಗಿತ್ತು.
9
+ ಶಿಕ್ಷಣ ಇಲಾಖೆ ವಾರ್ಷಿಕ ಚಟುವಟಿಕೆಗಳ ಪಟ್ಟಿಯಲ್ಲಿ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿರಲಿಲ್ಲ. ಏಕಾಏಕಿಯಾಗಿ ತೀರ್ಮಾನವನ್ನು ಪ್ರಕಟಿಸಿತ್ತು. ಇದರ ನಡುವೆ ಸರ್ಕಾರಿ ಶಾಲೆಗಳಿಗೆ ಪಬ್ಲಿಕ್ ಪರೀಕ್ಷೆಯ ಪಠ್ಯಪುಸ್ತಕ ನೀಡಿತ್ತು. ಆದರೆ ಖಾಸಗಿ ಶಾಲೆಗಳಿಗೆ ಅದನ್ನು ನೀಡಲೇ ಇಲ್ಲ. ಇಡೀ ರಾಜ್ಯಕ್ಕೆ ಒಂದೇ ಮಾದರಿ ಪರೀಕ್ಷೆ ನಡೆಸಬೇಕು ಎಂದು ಏಕಪಕ್ಷೀಯ ಆದೇಶವನ್ನು ನೀಡಿತ್ತು.
10
+ ಹಿನ್ನೆಲೆ:ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮËಲ್ಯಮಾಪನ-2 ಹಾಗು 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮËಲ್ಯನಿರ್ಣಯ ಮಂಡಳಿಯಿಂದಲೇ ನಡೆಸುವಂತೆ 12 ಷರತ್ತುಗಳೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
11
+ ಈಗಾಗಲೇ 5, 8ನೇ ತರಗತಿಗೆ ಮೌಲ್ಯಾಂಕನ ಹಾಗೂ ಎಸ್ಸೆಸ್ಸೆಲ್ಸಿ ದ್ವಿತೀಯ ಪಿಯುಸಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆಸಲಾಗುತ್ತಿತ್ತು.
eesanje/url_46_213_11.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಬಿಡುಗಡೆ ಮಾಡಿದ ಸರ್ಕಾರ
2
+ ಬೆಂಗಳೂರು,ಮಾ.6- ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ವಸತಿ ವ್ಯವಸ್ಥೆ 386 ನಿರ್ಮಾಣದಡಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಿಗೆ ಷರತ್ತುಗೊಳಪಟ್ಟು ಅನುದಾನ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
3
+ ವಿವಿಧ ಗಣ್ಯರು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳಿಂದ ಅನುದಾನ ಕೋರಿ ಸ್ವೀಕೃತವಾದ ಪ್ರಸ್ತಾವನೆಗಳನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಪರಿಶೀಲಿಸಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.ಪ್ರಸಕ್ತ ಆರ್ಥಿಕ ಸಾಲಿನಲ್ಲಿ ದುರಸ್ಥಿ, ಜೀರ್ಣೋದ್ಧಾರ, ನಿರ್ಮಾಣ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಸಂಘ ಸಂಸ್ಥೆಗಳ ದುರಸ್ಥಿ, ಜೀರ್ಣೋದ್ಧಾರ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಯುಕ್ತರು ಕೋರಿದ್ದರು.
4
+ ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಕೆಲವು ಷರತ್ತುಗಳನ್ನ ವಿಸಿ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಧಾರ್ಮಿಕ ಸಂಸ್ಥೆಗಳಿಗೆ ಮಂಜೂರು ಮಾಡಲಾದ ಅನುದಾನವನ್ನು ಖಜಾನೆ-2 ರ ಮೂಲಕ ಜಿಲ್ಲಾಕಾರಿಗಳ ಡಿಡಿಓ ಸಂಕೇತಕ್ಕೆ ಅಪ್ಲೋಡ್ ಮಾಡುವುದು, ಜಿಲ್ಲಾಕಾರಿಗಳು ನಿಯಮಾನುಸಾರ ಈ ಅನುದಾನವನ್ನು ಡ್ರಾ ಮಾಡಲು ಕ್ರಮ ವಹಿಸಬೇಕು.
5
+ ಅನುದಾನ ಬಿಡುಗಡೆ ಮಾಡಿರುವ ಸಂಸ್ಥೆಯು ನಿಯಮಾನುಸಾರ ನೀಡಬಹುದಾದ ಮೊತ್ತವನ್ನು ಮುಂಗಡ ರಸೀದಿ ಪಡೆದು ಬಿಲ್ ಪಾವತಿಸಬೇಕು ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ಆದೇಶದಲ್ಲಿ ವಿಸಲಾಗಿದೆ. 2 ಲಕ್ಷದಿಂದ 50 ಲಕ್ಷ ರೂ.ವರೆಗೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ರಾಮದುರ್ಗದ ಶಿವಪ್ರತಿಷ್ಠಾಪನಾ ಸೇವಾ ಸಮಿತಿಗೆ 50 ಲಕ್ಷ ರೂ. ಮಂಜೂರು ಮಾಡಲಾಗಿದೆ.
eesanje/url_46_213_12.txt ADDED
@@ -0,0 +1,4 @@
 
 
 
 
 
1
+ ಆಸಿಡ್ ದಾಳಿ ಸಂತ್ರಸ್ತರಿಗೆ 4 ಲಕ್ಷ ರೂ ಪರಿಹಾರ, ವೈದ್ಯಕೀಯ ವೆಚ್ಚ ಭರಿಸಲಿದೆ ಸರ್ಕಾರ
2
+ ಮಂಗಳೂರು, ಮಾ 5: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಸಿಡ್ ದಾಳಿಗೆ ಒಳಗಾದ ಮೂವರು ವಿದ್ಯಾರ್ಥಿನಿಯರಿಗೆ ರಾಜ್ಯ ಮಹಿಳಾ ಆಯೋಗ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನೀಯರಿಗೆ ಸಾಂತ್ವಾನ,ದೈಯೇ ಹೇಳಿ ಅವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಮತ್ತು ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
3
+ ವಿದ್ಯಾರ್ಥಿಗಳು ಚೆನ್ನಾಗಿದ್ದಾರೆ. ನಾನು ಈಗ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಮಾತ್ರ ಚಿಂತಿಸುತ್ತಿದ್ದೇನೆ, ಶಿಕ್ಷಣ ಸಚಿವರೊಂದಿಗೆ ಮಾತನಾಡಿದ ನಂತರ ದಿನದಲ್ಲಿ ವರಿಗೆ ಪರೀಕ್ಷೆ ಬರೆಯುವ ಕುರಿತು ಎದುರಾಗಿರುವ ಚಿಂತೆ ಪರಿಹರಿಸುತ್ತೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪ್ರಸ್ತುತ ಪರೀಕ್ಷಾ ಚಕ್ರದಲ್ಲಿಯೇ ಪಿಯು ಬೋರ್ಡ್ ನಡೆಸುತ್ತಿರುವ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದೇ ಎಂದು ವಿದ್ಯಾರ್ಥಿಗಳು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಅವರಿಗೆ ವ್ಯವಸ್ಥೆ ಮಾಡುವಂತೆ ಶಿಕ್ಷಣ ಸಚಿವರನ್ನು ಮನವಿ ಮಾಡಿದರು.
4
+ ನಾನು ಮಕ್ಕಳ ಚಿಂತೆ ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ. ನನಗೂ ಪಿಯುಸಿ ಓದುತ್ತಿರುವ ಮಗನಿದ್ದಾನೆ. ನಾನು ಶಿಕ್ಷಣ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಚೌಧರಿ ಹೇಳಿದರು. ಮೂವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದರು, ಆದರೆ ಅವರಲ್ಲಿ ಇಬ್ಬರಿಗೆ ಎರಡು ವಾರಗಳ ಸಾಮಾನ್ಯ ಚಿಕಿತ್ಸೆಯ ನಂತರ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ ಆದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮುಂದೆ ಈ ರೀತಿ ಘಟನೆ ನಡೆಯದಂತೆ ತಪ್ಪಿತಸ್ಥನಿಗೆ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು.
eesanje/url_46_213_2.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಆಸಿಡ್ ಮಾರಾಟ ನಿಷೇಧ
2
+ ಬೆಂಗಳೂರು,ಮಾ.7-ಆಸಿಡ್ ದಾಳಿ ಪ್ರಕರಣವನ್ನು ಹತ್ತಿಕ್ಕುವ ಸಲುವಾಗಿ ರಾಜ್ಯದಲ್ಲಿ ಆಸಿಡ್ ಮುಕ್ತ ಮಾರಾಟವನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಒಂದೆರೆಡು ದಿನದೊಳಗಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಗೆ ಪತ್ರ ಬರೆಯಲಿದ್ದು, ಆಸಿಡ್ ಮುಕ್ತ ಮಾರಾಟವನ್ನು ನಿಷೇಧಿಸುವಂತೆ ಶಿಫಾರಸು ಮಾಡಿದ್ದಾರೆ. ಆ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಬೇಕಿದೆ ಎಂದರು.
3
+ ಆಸಿಡ್ ಸುಲಭವಾಗಿ ಕೈಗೆ ಸಿಗಬಾರದು. ಹಾಗಾಗಿ ರಾಸಾಯನಿಕಗಳನ್ನು ಅಧಿಕೃತವಾಗಿ ಮಾರಾಟ ಮಾಡುವವರ ಮೂಲಕವಷ್ಟೇ ಆಸಿಡ್ ಖರೀದಿ ಮತ್ತು ಮಾರಾಟ ವಹಿವಾಟು ನಡೆಯಬೇಕು. ಈ ನಿಟ್ಟಿನಲ್ಲಿ ಕಡಿವಾಣವು ಅಗತ್ಯವಿದೆ ಎಂದು ತಿಳಿಸಿದರು.
4
+ ಶೀಘ್ರ ಬಂಧನ :ಬೆಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೀಘ್ರವೇ ಆರೋಪಿಯನ್ನು ಬಂಧಿಸಲಾಗುತ್ತದೆ. ಕಳೆದ ಎರಡು ಮೂರು ದಿನಗಳ ತನಿಖೆಯಲ್ಲಿ ಮಹತ್ವದ ಮಾಹಿತಿಗಳು ದೊರೆತಿವೆ. ಆರೋಪಿ ಬಸ್‍ನಲ್ಲಿ ಸಂಚರಿಸಿರುವುದು ಎಲ್ಲರಿಗೂ ಗೊತ್ತಿದೆ. ಪದೇ ಪದೇ ಬಟ್ಟೆ ಬದಲಾಯಿಸಿದ್ದಾನೆ. ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ್ದಾನೆ ಎಂಬ ಸುಳಿವು ದೊರೆತಿದೆ. ತನಿಖೆಯ ಹಿತದೃಷ್ಟಿಯಿಂದ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
5
+ ಈವರೆಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ಬಂಧಿಸಿಲ್ಲ. ಈ ಬಗ್ಗೆ ತಪ್ಪು ಮಾಹಿತಿ ಇದೆ. ಮುಖ್ಯಮಂತ್ರಿಯವರೂ ಕೂಡ ಅಸ್ಪಷ್ಟ ಮಾಹಿತಿಯಿಂದ ಐದು ಮಂದಿ ಆರೋಪಿಗಳ ಬಂಧನವಾಗಿದೆ ಎಂದು ಹೇಳಿಬಿಟ್ಟಿದ್ದಾರೆ. ಆದರೆ ಯಾರನ್ನೂ ಬಂಧಿಸಿಲ್ಲ ಎಂದರು. ಶಂಕಿತರನ್ನು ಕರೆದು ವಿಚಾರಣೆ ನಡೆಸಿ ಕಳುಹಿಸಲಾಗಿದೆ. ಮಾಹಿತಿ ಕಲೆ ಹಾಕುವ ಸಲುವಾಗಿ ಕರೆತಂದವರನ್ನು ಬಂಧಿಸಿಲ್ಲ.
6
+ ರಾಷ್ಟ್ರೀಯ ತನಿಖಾ ದಳ ನಿನ್ನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತನ ಭಾವಚಿತ್ರವನ್ನು ಬಹಿರಂಗಪಡಿಸಿ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದೆ. ತನಿಖೆ ಮಹತ್ವದ ಹಂತದಲ್ಲಿದ್ದು, ಶೀಘ್ರವಾಗಿಯೇ ಆರೋಪಿಯನ್ನು ಸೆರೆ ಹಿಡಿಯಲಾಗುವುದು ಎಂದರು.